ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ತಮಿಳುನಾಡಿನ 23 ಜಿಲ್ಲೆಗಳಿಗೆ ಅಲರ್ಟ್

|
Google Oneindia Kannada News

ನವದೆಹಲಿ, ಜುಲೈ 26: ಮಾನ್ಸೂನ್ ಮಾರುತಗಳು ಉತ್ತರ ಕಡೆಗೆ ಬೀಸುತ್ತಿರುವುದರಿಂದ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಜುಲೈ 27ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಯಾವುದೇ ರಾಜ್ಯಗಳಿಗೆ ಯೆಲ್ಲೋ ಅಥವಾ ರೆಡ್ ಅಲರ್ಟ್ ಘೋಷಿಸಿಲ್ಲವಾದರೂ, ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಅದು ತಿಳಿಸಿದೆ. ರಾಜಸ್ಥಾನ, ಹಿಮಾಚಲ ಪ್ರದೇಶ, ಉತ್ತರಾಖಂಡ, ಒಡಿಶಾ, ಗುಜರಾತ್ ಪ್ರದೇಶ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ದೇಶದಲ್ಲಿ ಮುಂಗಾರು ಚುರುಕು: ಭತ್ತ ಬಿತ್ತನೆ ಕೊರತೆ ನೀಗಲಿದೆದೇಶದಲ್ಲಿ ಮುಂಗಾರು ಚುರುಕು: ಭತ್ತ ಬಿತ್ತನೆ ಕೊರತೆ ನೀಗಲಿದೆ

ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ತೆಲಂಗಾಣ, ಕರಾವಳಿ ಆಂಧ್ರಪ್ರದೇಶದಲ್ಲಿ ಜುಲೈ 27 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಜುಲೈ 26 ರಿಂದ 28 ರವರೆಗೆ ಗುಜರಾತ್, ಕೊಂಕಣ, ವಿದರ್ಭ, ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ, ಕರಾವಳಿ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಕಷ್ಟು ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

 ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ನೀಡಿದೆ. ರಾಯಚೂರು ಮತ್ತು ಬಳ್ಳಾರಿಯಲ್ಲಿ ಬಿಸಿಲು ಹೆಚ್ಚಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಳೆ ಪ್ರಮಾಣ ಕಡಿಮೆಯಾದರೂ ರಾಜ್ಯದ ಹಲವು ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯಗಳಿಗೆ ನೀರು ಹರಿದುಬರುತ್ತಿದೆ.

 ತಮಿಳುನಾಡಿನ 23 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ತಮಿಳುನಾಡಿನ 23 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ. ಪ್ರಾದೇಶಿಕ ಹವಾಮಾನ ಕೇಂದ್ರ (ಆರ್‌ಎಂಸಿ) ರಾಜ್ಯದ 23 ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ.

ನೀಲಗಿರಿ, ಕೊಯಮತ್ತೂರು, ತಿರುಪ್ಪೂರ್, ಥೇಣಿ, ದಿಂಡುಗಲ್, ಈರೋಡ್, ಕೃಷ್ಣಗಿರಿ, ಧರ್ಮಪುರಿ, ತಿರುಪತ್ತೂರ್, ಸೇಲಂ, ಕಲ್ಲಕುರಿಚಿ, ಕರೂರ್, ನಮಕ್ಕಲ್, ತಿರುಚಿರಾಪಳ್ಳಿ, ಪೆರಂಬಲೂರು, ಮಧುರೈ, ಶಿವಗಂಗಾ, ವಿರುದುನಗರ, ತೆಂಕಾಸಿ, ರಾಮನಾಥಪುರಂ, ತೂತುಕುಡಿ, ತಿರುನೆಲ್ವೇಲಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾತ್ತದೆ ಎಂದು ಹೇಳಿದೆ.

 ಉತ್ತರ ಭಾರತದ ಹಲವೆಡೆ ವ್ಯಾಪಕ ಮಳೆ

ಉತ್ತರ ಭಾರತದ ಹಲವೆಡೆ ವ್ಯಾಪಕ ಮಳೆ

ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜುಲೈ 27ರವೆರೆಗೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪ್ರತ್ಯೇಕವಾದ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಛತ್ತೀಸ್‌ಗಢ, ವಿದರ್ಭ ಮತ್ತು ಪೂರ್ವ ಮಧ್ಯಪ್ರದೇಶದಲ್ಲಿ, ಪಶ್ಚಿಮ ರಾಜಸ್ಥಾನ, ಪೂರ್ವ ರಾಜಸ್ಥಾನಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಎಂದು ಹವಾಮಾನ ಇಲಾಖೆ ಹೇಳಿದೆ.

 ಕೇರಳ, ಗೋವಾ ರಾಜ್ಯದ ಕರಾವಳಿಯಲ್ಲಿ ಮಳೆ

ಕೇರಳ, ಗೋವಾ ರಾಜ್ಯದ ಕರಾವಳಿಯಲ್ಲಿ ಮಳೆ

ಕೇರಳ ಮತ್ತು ಗೋವಾ ರಾಜ್ಯದ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆ ಆಗಲಿದೆ.

ಮುಂದಿನ ಐದು ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಭಾರೀ ಮಳೆಯೊಂದಿಗೆ ಲಘು, ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Recommended Video

Virat Kohli ಬಗ್ಗೆ ಪಾಕಿಸ್ತಾನದ ಶೋಯಬ್ ಅಖ್ತರ್ ಹೇಳಿದ ಎರಡೇ ಪದ ಅಷ್ಟೊಂದ್ ಪವರ್ ಫುಲ್ಲಾ? *Cricket |OneIndia

English summary
The India Meteorological Department (IMD) release forecasted an increase in rainfall activity over North Indian states. imd has issued a warning to 23 districts of Tamil nadu, rain continues in coastal Karnataka, Bengaluru may get slight rainfall at evening.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X