• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವಾಯುಭಾರ ಕುಸಿತ; ಈ ರಾಜ್ಯಗಳಲ್ಲಿ ಇನ್ನೂ ಕೆಲದಿನ ಭಾರೀ ಮಳೆ ಸೂಚನೆ

|
Google Oneindia Kannada News

ನವದೆಹಲಿ, ಜುಲೈ 29: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮುಂದಿನ ಕೆಲವು ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೆಲವು ರಾಜ್ಯಗಳಲ್ಲಿ ಮುಂಗಾರು ಪ್ರಭಾವ ತಗ್ಗಿದ್ದು, ಮಳೆ ಕ್ಷೀಣಿಸುತ್ತಿದೆ. ಆದರೆ ದಕ್ಷಿಣ ಬಾಂಗ್ಲಾದೇಶ ಹಾಗೂ ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇನ್ನೂ ಕೆಲವು ದಿನ ಹಲವು ರಾಜ್ಯಗಳಲ್ಲಿ ಅಧಿಕ ಮಳೆಯಾಗಲಿದೆ. ಮುಂದಿನ 48 ಗಂಟೆಗಳಲ್ಲಿ ಪಶ್ಚಿಮ ಬಂಗಾಳ, ಜಾರ್ಖಂಡ್ ಹಾಗೂ ಬಿಹಾರದಲ್ಲಿ ವ್ಯಾಪಕ ಮಳೆಯಾಗುವುದಾಗಿ ಮುನ್ಸೂಚನೆ ನೀಡಿದೆ. ಮುಂದೆ ಓದಿ...

ಜುಲೈ 31ರವರೆಗೂ ಮಳೆ ನಿಲ್ಲುವುದಿಲ್ಲ

ಜುಲೈ 31ರವರೆಗೂ ಮಳೆ ನಿಲ್ಲುವುದಿಲ್ಲ

ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ ಹಾಗೂ ಉತ್ತರ ಪ್ರದೇಶದಲ್ಲಿ ಜುಲೈ 30ರವರೆಗೂ ಭಾರೀ ಪ್ರಮಾಣದಲ್ಲಿ ಮಳೆಯಾಗುವುದು ಎಂದು ತಿಳಿಸಿದೆ. ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರದಲ್ಲಿ ಜುಲೈ 30ರವರೆಗೆ ಮಳೆ ನಿಲ್ಲುವುದಿಲ್ಲ. ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಡದಲ್ಲಿ ಜುಲೈ 31ರವರೆಗೂ ಮಳೆ ಮುಂದುವರೆಯುವುದಾಗಿ ಸೂಚನೆ ನೀಡಿದೆ.

ಗೋವಾ, ಮಧ್ಯ ಮಹಾರಾಷ್ಟ್ರದಲ್ಲಿ ಅಧಿಕ ಮಳೆ

ಗೋವಾ, ಮಧ್ಯ ಮಹಾರಾಷ್ಟ್ರದಲ್ಲಿ ಅಧಿಕ ಮಳೆ

ವಾಯುಭಾರ ಕುಸಿತದ ಪ್ರಭಾವ ಉತ್ತರ ಪಾಕಿಸ್ತಾನ ಹಾಗೂ ಪಂಜಾಬ್‌ ಮೇಲೂ ಗೋಚರಿಸಲಿದೆ. ಪೂರ್ವ ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಆಗಸ್ಟ್ 1ರವರೆಗೂ ಮಳೆ ಬೀಳಲಿದೆ. ಜುಲೈ 30ರ ನಂತರ ಎರಡು ದಿನಗಳ ಕಾಲ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ. ಇದರೊಂದಿಗೆ ಕೊಂಕಣ ಹಾಗೂ ಗೋವಾ, ಮಧ್ಯ ಮಹಾರಾಷ್ಟ್ರದಲ್ಲಿಯೂ ಆಗಸ್ಟ್ 1ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜುಲೈ ಮಧ್ಯಭಾಗದಲ್ಲಿ ಚುರುಕಾದ ಮುಂಗಾರು

ಜುಲೈ ಮಧ್ಯಭಾಗದಲ್ಲಿ ಚುರುಕಾದ ಮುಂಗಾರು

ಜುಲೈ ತಿಂಗಳ ಎರಡನೇ ವಾರದ ನಂತರ ದೇಶಾದ್ಯಂತ ನೈಋತ್ಯ ಮುಂಗಾರಿನ ಪ್ರಭಾವ ಜೋರಾಗಿದ್ದು, ದೆಹಲಿ, ಮಹಾರಾಷ್ಟ್ರ, ಮಧ್ಯಪ್ರದೇಶ, ಗೋವಾ, ಉತ್ತರಾಖಂಡ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಧಿಕ ಮಳೆಯಾಗುತ್ತಿದೆ. ಈ ತಿಂಗಳಾಂತ್ಯದವರೆಗೂ ಮಳೆ ಮುಂದುವರೆಯುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕೊಂಕಣ, ಗೋವಾ, ಮಧ್ಯಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿಯೂ ಅಧಿಕ ಮಳೆಯಾಗಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 1ರ ತನಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕದಲ್ಲಿ ಮುಂಗಾರು ಕ್ಷೀಣಿಸಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶದಲ್ಲಿ ಜುಲೈ 28ರಿಂದ ಆಗಸ್ಟ್ 1ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ. ಎಸ್. ಪಾಟೀಲ್ ತಿಳಿಸಿದ್ದಾರೆ.

English summary
India Meteorological Department (IMD) has predicted that several states across the nation are likely to receive heavy to very heavy rainfall in next few days due to a low-pressure area over bay of bengal
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X