• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜುಲೈ 26ರಿಂದ 29ರವರೆಗೂ ಈ ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ

|
Google Oneindia Kannada News

ನವದೆಹಲಿ, ಜುಲೈ 26: ದೇಶಾದ್ಯಂತ ನೈಋತ್ಯ ಮುಂಗಾರು ಅಬ್ಬರ ಜೋರಾಗಿದ್ದು, ಹಲವು ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇನ್ನೂ ಕೆಲವು ದಿನಗಳ ಕಾಲ ಮಳೆ ಮುಂದುವರೆಯುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 26ರಿಂದ ಜುಲೈ 29ರವರೆಗೆ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವುದಾಗಿ ತಿಳಿಸಿದೆ.

ಪಶ್ಚಿಮ ಹಿಮಾಲಯ ಪ್ರದೇಶಗಳಲ್ಲಿ ಹಾಗೂ ವಾಯವ್ಯ ಭಾರತದಲ್ಲಿ ಜುಲೈ 26ರ ನಂತರ ಮಳೆ ಪ್ರಮಾಣ ಹೆಚ್ಚಾಗುವುದಾಗಿ ತಿಳಿಸಿದೆ. ಹಿಮಾಚಲಯ ಪ್ರದೇಶ, ಉತ್ತರ ಪ್ರದೇಶದಲ್ಲಿ ಜುಲೈ 26-29ರವರೆಗೆ, ಈ ಮೂರು ದಿನಗಳ ಅವಧಿಯಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ಮುನ್ಸೂಚನೆ ನೀಡಿದೆ. ಇನ್ನೂ ಯಾವ್ಯಾವ ರಾಜ್ಯಗಳಲ್ಲಿ ಈ ಅವಧಿಯಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂಬ ಕುರಿತು ಮುಂದಿದೆ ಮಾಹಿತಿ...

 ಗುಜರಾತ್‌ನಲ್ಲಿಯೂ ಹೆಚ್ಚಿನ ಮಳೆಯಾಗಲಿದೆ

ಗುಜರಾತ್‌ನಲ್ಲಿಯೂ ಹೆಚ್ಚಿನ ಮಳೆಯಾಗಲಿದೆ

ಉತ್ತರಾಖಂಡದಲ್ಲಿ, ಜಮ್ಮು-ಕಾಶ್ಮೀರ, ಗಿಲ್ಗಿಟ್, ಬಲೂಚಿಸ್ತಾನ್ ಹಾಗೂ ಮುಝಾಫರಾಬಾದ್‌ನಲ್ಲಿ ಜುಲೈ 29ರವರೆಗೂ ಮಳೆ ಹೆಚ್ಚಿರಲಿದೆ. ಪಂಜಾಬ್ ಹಾಗೂ ಹರಿಯಾಣದಲ್ಲಿ ಜುಲೈ 27ರಿಂದ ಜುಲೈ 29ರವರೆಗೆ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಗುಜರಾತ್‌ನ ಕೆಲವು ರಾಜ್ಯಗಳಲ್ಲಿಯೂ ಭಾರೀ ಮಳೆಯಾಗುವುದಾಗಿ ತಿಳಿಸಿದೆ.

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ; 9 ಪ್ರವಾಸಿಗರ ಸಾವುಹಿಮಾಚಲ ಪ್ರದೇಶದಲ್ಲಿ ಭೂಕುಸಿತ; 9 ಪ್ರವಾಸಿಗರ ಸಾವು

 ಈ ರಾಜ್ಯಗಳಲ್ಲಿ ವ್ಯಾಪಕ ಮಳೆ

ಈ ರಾಜ್ಯಗಳಲ್ಲಿ ವ್ಯಾಪಕ ಮಳೆ

ಕೊಂಕಣ ಗೋವಾ, ಮಧ್ಯ ಮಹಾರಾಷ್ಟ್ರದ ಘಾಟಿ ಪ್ರದೇಶಗಳಲ್ಲಿ, ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದಾಗಿ ತಿಳಿಸಿದೆ. ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ್ ಹಾಗೂ ಬಿಹಾರದಲ್ಲಿ ಜುಲೈ 27ರ ನಂತರ ಮಳೆ ಹೆಚ್ಚಲಿದೆ. ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಜುಲೈ 26ರಂದು ಮಳೆಯಾದ ನಂತರ ಮಳೆ ಪ್ರಮಾಣ ಕಡಿಮೆಯಾಗಲಿದ ಎಂದು ತಿಳಿಸಿದೆ.

 ಮಧ್ಯಪ್ರದೇಶದ 24 ಜಿಲ್ಲೆಗಳಿಗೆ ಅಧಿಕ ಮಳೆ ಎಚ್ಚರಿಕೆ

ಮಧ್ಯಪ್ರದೇಶದ 24 ಜಿಲ್ಲೆಗಳಿಗೆ ಅಧಿಕ ಮಳೆ ಎಚ್ಚರಿಕೆ

ಭಾರತೀಯ ಹವಾಮಾನ ಇಲಾಖೆಯು ಮಧ್ಯ ಪ್ರದೇಶದ 24 ಜಿಲ್ಲೆಗಳಿಗೆ ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದೆ. ಜಬಲಾಪುರ, ರೇವಾ, ಸಾತ್ನ, ಅನುಪ್ಪುರ್, ಉಮರೈ, ದಿಂಡೋರಿ, ಕಟ್ನಿ, ನರಸಿಂಗಪುರ, ಮಂಡ್ಲ, ಸಾಗರ, ಚತ್ತರ್‌ ಪುರ್ ಒಳಗೊಂಡಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಿಂಚುಗುಡುಗು ಸಹಿತ ವ್ಯಾಪಕ ಮಳೆಯಾಗುವುದಾಗಿ ತಿಳಿಸಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜು. 27ರ ತನಕ ಮಳೆಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜು. 27ರ ತನಕ ಮಳೆ

 ಮಹಾರಾಷ್ಟ್ರದಲ್ಲಿ ಮಳೆಯಿಂದ 149 ಮಂದಿ ಸಾವು

ಮಹಾರಾಷ್ಟ್ರದಲ್ಲಿ ಮಳೆಯಿಂದ 149 ಮಂದಿ ಸಾವು

ಮಹಾರಾಷ್ಟ್ರದಲ್ಲಿ ನೈಋತ್ಯ ಮುಂಗಾರು ಮಳೆ ಭಾರೀ ಪ್ರಭಾವ ಬೀರಿದ್ದು, ಹೆಚ್ಚಿನ ಹಾನಿಗೆ ಕಾರಣವಾಗಿದೆ. ರಾಜ್ಯದಲ್ಲಿ ಇದುವರೆಗೂ ಮಳೆಯಿಂದ 149 ಮಂದಿ ಸಾವನ್ನಪ್ಪಿದ್ದು, 64 ಜನರು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ. ಹಲವು ಕಡೆಗಳಲ್ಲಿ ಪ್ರವಾಹ, ಭೂಕುಸಿತ ಸಂಭವಿಸಿದೆ. ಜುಲೈ 26ರ ನಂತರ ಮಹಾರಾಷ್ಟ್ರದಲ್ಲಿ ಮಳೆ ತಗ್ಗುವುದಾಗಿ ತಿಳಿಸಿದೆ.

 ಕರ್ನಾಟಕದಲ್ಲಿ ಇನ್ನೂ ಐದು ದಿನ ಮಳೆ

ಕರ್ನಾಟಕದಲ್ಲಿ ಇನ್ನೂ ಐದು ದಿನ ಮಳೆ

ಮುಂಗಾರು ಅಬ್ಬರ ರಾಜ್ಯದಲ್ಲಿಯೂ ಜೋರಾಗಿದ್ದು, ಇನ್ನೂ ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆಯಾಗುವ ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ನಾಲ್ಕೈದು ದಿನಗಳ ನಂತರ ಮಳೆ ತಗ್ಗಲಿದೆ ಎಂದು ತಿಳಿಸಿದೆ.

English summary
IMD predicts heavy rainfall in these states from 26 July. Here is detail
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X