ಸೆ.18ರಿಂದ ಈ ರಾಜ್ಯಗಳಲ್ಲಿ ಅಧಿಕ ಮಳೆ ಮುನ್ಸೂಚನೆ

ನವದೆಹಲಿ, ಸೆಪ್ಟೆಂಬರ್ 18: ಮುಂಗಾರು ಹಾಗೂ ಚಂಡಮಾರುತ ಪ್ರಭಾವದಿಂದಾಗಿ ಶನಿವಾರದಿಂದ ಕೆಲವು ರಾಜ್ಯಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದ್ದು, ಪೂರ್ವ ಭಾರತದಲ್ಲಿ ಅಧಿಕ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತದಿಂದಾಗಿ ಗುಜರಾತ್, ರಾಜಸ್ಥಾನ, ಮಧ್ಯ ಪ್ರದೇಶದಲ್ಲಿ ಮುಂದಿನ ಮೂರು ದಿನಗಳ ಅವಧಿ ಅಧಿಕ ಮಳೆಯಾಗುವುದಾಗಿ ತಿಳಿಸಿದೆ.

ಉತ್ತರ ಪ್ರದೇಶದಲ್ಲಿ ಈಗಾಗಲೇ ಹೆಚ್ಚಿನ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯುವುದಾಗಿ ಸೂಚನೆ ನೀಡಿದೆ. ಉತ್ತರ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಶನಿವಾರ ಮತ್ತೆ ಮಳೆ ಬಿರುಸು ಪಡೆಯಲಿದೆ ಎಂದು ತಿಳಿಸಿದೆ.

IMD Predicts Heavy Rainfall In These States From Sep 18

ಸೆಪ್ಟೆಂಬರ್ 17ರಂದು ಬಂಗಾಳ ಕೊಲ್ಲಿಯ ಉತ್ತರ ಭಾಗದಲ್ಲಿ ಚಂಡಮಾರುತ ಸೃಷ್ಟಿಯಾಗಿದ್ದು, ಇದರ ಪ್ರಭಾವದಿಂದ ಇದೇ ಶನಿವಾರ ಹಾಗೂ ಭಾನುವಾರ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿರುವುದಾಗಿ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 19ರ ನಂತರ ಗುಜರಾತ್‌ನಲ್ಲಿ ಮಳೆ ಹೆಚ್ಚಾಗಲಿದ್ದು, ಗುಜರಾತ್ ಹಾಗೂ ರಾಜಸ್ಥಾನದಲ್ಲಿ ಸೆಪ್ಟೆಂಬರ್ 19- 21ರವರೆಗೆ ಅತಿ ಹೆಚ್ಚಿನ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.

ಸೆಪ್ಟೆಂಬರ್ 19-21ರವರೆಗೆ ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದಲ್ಲಿಯೂ ಅಧಿಕ ಪ್ರಮಾಣದ ಮಳೆಯಾಗುವುದಾಗಿ ತಿಳಿಸಿದೆ. ನೈಋತ್ಯ ಭಾರತದಲ್ಲಿ ಮುಂದಿನ ಐದು ದಿನಗಳವರೆಗೂ ವ್ಯಾಪಕ ಮಳೆಯಾಗುತ್ತದೆ ಎಂದು ಮಾಹಿತಿ ನೀಡಿದೆ. ಇದೇ ಅವಧಿಯಲ್ಲಿ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗಲಿದ್ದು, ಸೆಪ್ಟೆಂಬರ್ 18-20ರವರೆಗೂ ಈ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹೇಳಿದೆ. ಒಂದು ವಾರದಿಂದ ಒಡಿಶಾದಲ್ಲಿ ಹೆಚ್ಚಿನ ಮಳೆಯಾಗಿದ್ದು, ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ.

IMD Predicts Heavy Rainfall In These States From Sep 18

ಸೆಪ್ಟೆಂಬರ್ ಅಂತ್ಯದವರೆಗೂ ಉತ್ತರ ಭಾರತದಲ್ಲಿ ಅಧಿಕ ಮಳೆಯಾಗುವುದಾಗಿ ಮಾಹಿತಿ ನೀಡಿದೆ. ನೈಋತ್ಯ ಹಾಗೂ ಮಧ್ಯ ಭಾರತದಲ್ಲಿ ಮಳೆ ಪ್ರಮಾಣ ಅಧಿಕವಾಗಲಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವುದಾಗಿ ತಿಳಿಸಿದೆ. ಮುಂದಿನ ಹತ್ತು ದಿನಗಳವರೆಗೂ ಉತ್ತರ ಭಾರತದಲ್ಲಿ ಮುಂಗಾರು ಅಬ್ಬರ ಮುಂದುವರೆಯುತ್ತದೆ ಎಂದು ಐಎಂಡಿ ಮಹಾ ನಿರ್ದೇಶಕ ಮೃತ್ಯುಂಜಯ ಮಹೋಪಾತ್ರ ತಿಳಿಸಿದ್ದಾರೆ.

ಸೆಪ್ಟೆಂಬರ್ ಅಂತ್ಯದವರೆಗೂ ವಾಯವ್ಯ ಭಾರತದಲ್ಲಿ ಮುಂಗಾರು ನಿಲ್ಲುವುದಿಲ್ಲ. ಇದಕ್ಕೆ ಪರಿಸ್ಥಿತಿ ಅನುಕೂಲಕರವಾಗಿಲ್ಲ ಎಂದು ಅವರು ಹೇಳಿದ್ದಾರೆ. ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ. ಇದರೊಂದಿಗೆ ಬಂಗಾಳಕೊಲ್ಲಿಯಲ್ಲಿ ಸತತ ಎರಡು ಚಂಡಮಾರುತ ಸೃಷ್ಟಿಯಾಗಲಿದೆ. ಚಂಡಮಾರುತ ಪರಿಚಲನೆ ಹಾಗೂ ಪಶ್ಚಿಮ- ವಾಯವ್ಯ ದಿಕ್ಕಿನಲ್ಲಿ ಚಲಿಸುವ ಅವು ಚಲಿಸುವ ಕಾರಣ ಸುತ್ತಮುತ್ತಲ ಪ್ರದೇಶದಲ್ಲಿ ಮಳೆ ಹೆಚ್ಚಾಗಲಿದೆ ಎಂದು ಇಲಾಖೆ ತಿಳಿಸಿದೆ.

ಪೂರ್ವ ಬಂಗಾಳ ಕೊಲ್ಲಿ ಹಾಗೂ ಮ್ಯಾನ್ಮಾರ್ ಕರಾವಳಿಯಲ್ಲಿ ಚಂಡಮಾರುತದ ಪರಿಚಲನೆಯಿದ್ದು, ಇದು ಪಶ್ಚಿಮ- ವಾಯವ್ಯ ದಿಕ್ಕಿಗೆ ಚಲಿಸಲಿದೆ. ಶನಿವಾರದ ವೇಳೆಗೆ ಉತ್ತರ ಒಡಿಶಾ- ಪಶ್ಚಿಮ ಬಂಗಾಳ ಕರಾವಳಿ ಪ್ರದೇಶ ತಲುಪುವ ಸಾಧ್ಯತೆಯಿದೆ. ಈ ಕಾರಣವಾಗಿ ಪಶ್ಚಿಮ ಮಧ್ಯ ಪ್ರದೇಶದಲ್ಲಿ ಶನಿವಾರ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದಾಗಿ ತಿಳಿಸಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ವಾಯವ್ಯ ಭಾರತದ ಉಳಿದ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ಕರ್ನಾಟಕದಲ್ಲಿ ಮಳೆ: ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗಿದ್ದು, ಕಳೆದ ಎರಡು ದಿನಗಳಿಂದ ಬಿಸಿಲು ಕಾಣಿಸಿಕೊಳ್ಳುತ್ತಿದೆ. ಇದಾಗ್ಯೂ ಕೆಲವು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು,ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಅಲ್ಪ ಪ್ರಮಾಣದಲ್ಲಿ ಮಳೆಯಾಗಲಿರುವುದಾಗಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+