ಮುಂದಿನ ಮೂರು ದಿನ ಈ ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ
ನವದೆಹಲಿ, ಸೆಪ್ಟೆಂಬರ್ 2: ಸೆಪ್ಟೆಂಬರ್ ತಿಂಗಳಿನಲ್ಲಿ ಮುಂಗಾರು ಮಳೆ ಅಧಿಕವಾಗಲಿರುವುದಾಗಿ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಸೆಪ್ಟೆಂಬರ್ 5ರವರೆಗಿನ ಮಳೆ ಮುನ್ಸೂಚನೆಯನ್ನು ಬಿಡುಗಡೆ ಮಾಡಿದೆ. ಹಲವು ರಾಜ್ಯಗಳಲ್ಲಿ ಸೆಪ್ಟೆಂಬರ್ 5ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯನ್ನು ತಿಳಿಸಿದೆ.
ಗುಜರಾತ್‌ನ ದಕ್ಷಿಣ ಭಾಗದಲ್ಲಿ, ಸೌರಾಷ್ಟ್ರದಲ್ಲಿ ಗುರುವಾರ ಭಾರೀ ಮಳೆಯಾಗಲಿದೆ. ಉತ್ತರ ಕೊಂಕಣ, ಹರಿಯಾಣ, ಚಂಡೀಗಢ, ದೆಹಲಿ ಹಾಗೂ ಗುಜರಾತ್‌ನಲ್ಲಿ ಅಧಿಕ ಮಳೆಯಾಗುವುದಾಗಿ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಈ ಅವಧಿಯಲ್ಲಿ ಮಳೆ ಹೆಚ್ಚಾಗಲಿದೆ. ಸೆಪ್ಟೆಂಬರ್ 2ರಂದು ರಾಜಸ್ಥಾನ ಅಧಿಕ ಮಳೆ ಪಡೆಯಲಿದೆ. ಸೌರಾಷ್ಟ್ರದಲ್ಲಿ ಸೆಪ್ಟೆಂಬರ್ 3ರವರೆಗೆ ಮಳೆ ಹೆಚ್ಚಿರಲಿದೆ ಎಂದು ಮಾಹಿತಿ ನೀಡಿದೆ. ಇನ್ನೂ ಯಾವ ಯಾವ ರಾಜ್ಯಗಳಲ್ಲಿ ಮಳೆ ಪ್ರಮಾಣ ಹೆಚ್ಚಿರಲಿದೆ? ಮುಂದೆ ಓದಿ...

19 ವರ್ಷಗಳಲ್ಲೇ ದೆಹಲಿಯಲ್ಲಿ ಅಧಿಕ ಮಳೆ
ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಮತ್ತೆ ಮಳೆ ಆರಂಭವಾಗಿದೆ. ಬುಧವಾರ ಭಾರೀ ಪ್ರಮಾಣದ ಮಳೆಯಾಗಿದ್ದು, ಹತ್ತೊಂಬತ್ತು ವರ್ಷಗಳಲ್ಲೇ ದಾಖಲಾದ ಅತಿ ಹೆಚ್ಚಿನ ಮಳೆ ಪ್ರಮಾಣ ಇದಾಗಿದೆ. ಬುಧವಾರ ಒಂದೇ ದಿನ 112.1 ಎಂಎಂ ಮಳೆ ಪಡೆದಿದ್ದು, 12 ವರ್ಷಗಳಲ್ಲೇ ದಾಖಲಾದ ಅಧಿಕ ಮಳೆ ಪ್ರಮಾಣ ಇದಾಗಿದೆ. 19 ವರ್ಷಗಳಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲಾದ ಅಧಿಕ ಮಳೆ ಪ್ರಮಾಣ ಇದಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಭಾರೀ ಮಳೆಯಿಂದಾಗಿ ದೆಹಲಿ ತತ್ತರಿಸಿದ್ದು, ರಸ್ತೆಗಳು, ಕಟ್ಟಡಗಳು ಜಲಾವೃತವಾಗಿವೆ. ಗುರುಗ್ರಾಮ ಹಾಗು ನೋಯ್ಡಾದಲ್ಲಿ ಅಧಿಕ ಮಳೆಯಾಗುತ್ತಿದೆ. ಗುರುಗ್ರಾಮದಲ್ಲಿ ಬುಧವಾರ 64.2 ಎಂಎಂ ಮಳೆ ದಾಖಲಾಗಿದೆ. ಶನಿವಾರದವರೆಗೂ ದೆಹಲಿಯಲ್ಲಿ ಮಳೆಯಾಗುವ ಸೂಚನೆ ನೀಡಲಾಗಿದೆ.

ದಕ್ಷಿಣ, ಈಶಾನ್ಯ ರಾಜ್ಯಗಳಲ್ಲಿ ಮಳೆ
ಆಂಧ್ರದ ಕರಾವಳಿ ತೀರ, ತೆಲಂಗಾಣ, ತಮಿಳುನಾಡು, ಕೇರಳ ಹಾಗೂ ಕರ್ನಾಟಕದಲ್ಲಿ ಸೆಪ್ಟೆಂಬರ್ 4 ಹಾಗೂ 5ರಂದು ಅಧಿಕ ಪ್ರಮಾಣದ ಮಳೆಯಾಗುವುದಾಗಿ ಮುನ್ಸೂಚನೆ ನೀಡಿದೆ. ಇದರೊಂದಿಗೆ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಹಾಗೂ ತ್ರಿಪುರಾದಲ್ಲಿ ಸೆಪ್ಟೆಂಬರ್ 4ರವರೆಗೂ ಮಳೆಯಾಗಲಿರುವುದಾಗಿ ತಿಳಿಸಿದೆ.
ಸೆಪ್ಟೆಂಬರ್ 4ರವರೆಗೂ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ಮಳೆ
ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ಅಧಿಕ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೆಪ್ಟೆಂಬರ್ 5ರವರೆಗೂ ಮಳೆ ಮುಂದುವರೆಯಲಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ರಾಮನಗರ, ತುಮಕೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Recommended Video

ಸೆಪ್ಟೆಂಬರ್‌ನಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆ ಸೂಚನೆ
ಸೆಪ್ಟೆಂಬರ್ ತಿಂಗಳಿನಲ್ಲಿ ದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ದಾಖಲಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬುಧವಾರ ಮುನ್ಸೂಚನೆ ನೀಡಿದೆ. ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆ ದಾಖಲಾಗಿತ್ತು. ಎರಡು ತಿಂಗಳಿನಲ್ಲಿ ಬಿಟ್ಟು ಬಿಟ್ಟು ಮಳೆಯಾಗಿ ದೀರ್ಘಕಾಲ ಬಿಡುವನ್ನೂ ಪಡೆದುಕೊಂಡಿತ್ತು. ಇದೀಗ ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಮುಂಗಾರಿನ ಕೊನೆಯ ತಿಂಗಳಾದ ಸೆಪ್ಟೆಂಬರ್‌ನಲ್ಲಿ ಹೆಚ್ಚಿನ ಮಳೆ ದಾಖಲಾಗಬಹುದು. ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆ ದಾಖಲಾಗಬಹುದು ಎಂದು ತಿಳಿಸಿದೆ.












Click it and Unblock the Notifications