ಆಗಸ್ಟ್‌ 7ರವರೆಗೂ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ

ನವದೆಹಲಿ, ಆಗಸ್ಟ್ 03: ಜುಲೈ ತಿಂಗಳಾಂತ್ಯದಲ್ಲಿ ಆರ್ಭಟಿಸಿದ ಮುಂಗಾರು ಆಗಸ್ಟ್‌ ತಿಂಗಳ ಆರಂಭದಲ್ಲಿ ಕ್ಷೀಣಿಸಿದೆ. ಆದರೆ ಇನ್ನೂ ಕೆಲವು ದಿನಗಳ ಕಾಲ ಹಲವು ರಾಜ್ಯಗಳಲ್ಲಿ ಮಳೆ ಮುಂದುವರೆಯುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಪ್ರದೇಶ, ಹರಿಯಾಣ, ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ. ಆಗಸ್ಟ್ 7ರವರೆಗೂ ಮಳೆ ಮುಂದುವರೆಯುವ ಸೂಚನೆ ನೀಡಿದ್ದು, ದೇಶದ ಮಧ್ಯ ಹಾಗೂ ಉತ್ತರ ಭಾಗಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ತಿಳಿಸಿದೆ.

ಜುಲೈ ಮೊದಲ ವಾರದ ನಂತರ ದೇಶಾದ್ಯಂತ ಆರ್ಭಟಿಸಿದ ಮುಂಗಾರು ತಿಂಗಳಾಂತ್ಯದಲ್ಲಿ ಕ್ಷೀಣಿಸಿದೆ. ಮಹಾರಾಷ್ಟ್ರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆ, ಪ್ರವಾಹ, ಮೇಘಸ್ಫೋಟ ಕೂಡ ಸಂಭವಿಸಿದೆ. ಇದೀಗ ಮಳೆ ಕಡಿಮೆಯಾಗಿದ್ದು, ಕೆಲವು ರಾಜ್ಯಗಳಲ್ಲಿ ಮಾತ್ರ ಮಳೆಯಾಗಲಿದೆ ಎಂದು ತಿಳಿಸಿದೆ. ಮುಂದೆ ಓದಿ...

 ಆಗಸ್ಟ್ 7ರವರೆಗೂ ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಮಳೆ

ಆಗಸ್ಟ್ 7ರವರೆಗೂ ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಮಳೆ

ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಆಗಸ್ಟ್ 4ರವರೆಗೂ ಮಳೆ ಮುಂದುವರೆಯಲಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಮಹಾರಾಷ್ಟ್ರ ಹಾಗೂ ಗುಜರಾತ್‌ನಲ್ಲಿ ಮಳೆ ಪ್ರಮಾಣ ತಗ್ಗಲಿದೆ. ಆಗಸ್ಟ್‌ 7ರವರೆಗೂ ಮಧ್ಯಪ್ರದೇಶದಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ಮಂಗಳವಾರ ಮಧ್ಯಪ್ರದೇಶದ ಪಶ್ಚಿಮ ಭಾಗದಲ್ಲಿ ಅಧಿಕ ಮಳೆಯಾಗಲಿದೆ ಎಂದು ತಿಳಿಸಿದೆ. ಇದೇ ಅವಧಿಯಲ್ಲಿ ರಾಜಸ್ಥಾನದಲ್ಲಿಯೂ ಹೆಚ್ಚಿನ ಮಳೆ ದಾಖಲಾಗಲಿದೆ ಎಂದು ತಿಳಿಸಿದೆ.

 ಮುಂದಿನ ಐದು ದಿನಗಳವರೆಗೂ ಮಳೆ

ಮುಂದಿನ ಐದು ದಿನಗಳವರೆಗೂ ಮಳೆ

ಉತ್ತರಾಖಂಡ, ಉತ್ತರ ಪ್ರದೇಶದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಹರಿಯಾಣ ಹಾಗೂ ಹಿಮಾಚಲ ಪ್ರದೇಶದಲ್ಲಿ ಆಗಸ್ಟ್‌ 5ರವರೆಗೂ ಮಳೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ. ವಾಯವ್ಯ ಹಾಗೂ ಮಧ್ಯ ಭಾರತದಲ್ಲಿ ಮಳೆ ಮುಂದುವರೆಯುವ ಸೂಚನೆ ನೀಡಲಾಗಿದೆ. ನೈಋತ್ಯ ಉತ್ತರ ಪ್ರದೇಶದಲ್ಲಿ ವಾಯುಭಾರ ಕುಸಿತದ ಪ್ರಭಾವ ಗೋಚರಿಸುವುದಾಗಿ ತಿಳಿಸಿದೆ.

 ರಾಜ್ಯದಲ್ಲಿ ಇನ್ನೂ ಎರಡು-ಮೂರು ದಿನ ಮಳೆ

ರಾಜ್ಯದಲ್ಲಿ ಇನ್ನೂ ಎರಡು-ಮೂರು ದಿನ ಮಳೆ

ಕರ್ನಾಟಕದಲ್ಲಿ ಇನ್ನೂ ಎರಡು ಮೂರು ದಿನ ಮಳೆಯಾಗುವ ಸಂಭವವಿದ್ದು, ಆನಂತರ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ರಾಜ್ಯ ಪ್ರಾಕೃತಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲಗಳಲ್ಲಿ ಮಳೆಯಾಗುವ ಸಂಭವವಿದೆ. ಉಳಿದೆಡೆ ಒಣಹವೆ ಇದ್ದು, ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್‌ ತಿಂಗಳಿನಲ್ಲಿ ಪಶ್ಚಿಮ ಮಧ್ಯ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರದ ಒಳನಾಡು, ಜಮ್ಮು ಕಾಶ್ಮೀರ, ಲಡಾಖ್, ಪಂಜಾಬ್ ಮತ್ತು ಹಿಮಾಚಲ ಪ್ರದೇಶಗಳ ಕೆಲವು ಭಾಗಗಳಲ್ಲಿ ಕಡಿಮೆ ಮಳೆಯಾಗಲಿದೆ. ಆದರೆ ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರದ ರಾಯಲ ಸೀಮಾ ಪ್ರದೇಶ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ದಕ್ಷಿಣ ಗುಜರಾತ್ ಹಾಗೂ ಈಶಾನ್ಯ ರಾಜ್ಯಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
 ಆಗಸ್ಟ್‌, ಸೆಪ್ಟೆಂಬರ್‌ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ

ಆಗಸ್ಟ್‌, ಸೆಪ್ಟೆಂಬರ್‌ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ

ಆಗಸ್ಟ್‌ ಹಾಗೂ ಸೆಪ್ಟೆಂಬರ್‌ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ದಾಖಲಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್‌ ತಿಂಗಳ ಮಳೆ ಅಂದಾಜು ತೆಗೆದುಕೊಂಡರೆ, ಸಾಮಾನ್ಯಕ್ಕಿಂತ ಸ್ವಲ್ಪ ಅಧಿಕವಿರಲಿದೆ. ಸೆಪ್ಟೆಂಬರ್‌ನಲ್ಲಿಯೂ ಹೆಚ್ಚಿನ ಮಳೆ ದಾಖಲಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ಮಹೋಪಾತ್ರಾ ತಿಳಿಸಿದ್ದಾರೆ. ಆಗಸ್ಟ್ ಮೊದಲಲ್ಲಿ ಮುಂಗಾರು ಕ್ಷೀಣಗೊಳ್ಳುತ್ತದೆ. ನಂತರ ಕೆಲವೇ ದಿನಗಳಲ್ಲಿ ಮತ್ತೆ ಚುರುಕುಗೊಳ್ಳಲಿದೆ. ಇದರಿಂದ ದೇಶದ ಹಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್‌ ತಿಂಗಳಿಗೆ ಹೋಲಿಸಿದರೆ ಮುಂಗಾರಿನ ಕೊನೆಯ ತಿಂಗಳಾದ ಸೆಪ್ಟೆಂಬರ್‌ನಲ್ಲಿ ಹೆಚ್ಚಿನ ಮಳೆ ದಾಖಲಾಗಬಹುದು ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+