• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಉತ್ತರಾಖಂಡದಲ್ಲಿ ಭಾರಿ ಮಳೆಯ ಮುನ್ಸೂಚನೆ: 13 ಜಿಲ್ಲೆಗಳಿಗೆ ರೆಡ್ ಅಲರ್ಟ್

|
Google Oneindia Kannada News

ಡೆಹ್ರಾಡೂನ್, ಅಕ್ಟೋಬರ್ 18: ಉತ್ತರಾಖಂಡದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು 13 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಅಕ್ಟೋಬರ್ 18ರಿಂದ 20ರವರೆಗೆ ರಾಜ್ಯದಲ್ಲಿ ಆರೆಂಜ್​​ ಅಲರ್ಟ್ ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರವು ಸೋಮವಾರ ಚಮೋಲಿ ಮತ್ತು ಉತ್ತರಕಾಶಿಯ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ಆದೇಶಿಸಿದೆ.

ಅಕ್ಟೋಬರ್ 22ರವರೆಗೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಅಕ್ಟೋಬರ್ 22ರವರೆಗೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ

ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ಬಳಿಕ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಭಾನುವಾರ ಎಲ್ಲಾ ಪೊಲೀಸ್ ಅಧಿಕಾರಿಗಳು, ಎಸ್‌ಡಿಆರ್‌ಎಫ್ ಮತ್ತು ಇತರ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.

ಹವಾಮಾನ ಇಲಾಖೆ ಮುನ್ಸೂಚನೆ ಮೇರೆಗೆ ಉತ್ತರಾಖಂಡ್​ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಾಮಿ ಈಗಾಗಲೇ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು, ಎಲ್ಲ ಜಿಲ್ಲಾಧಿಕಾರಿಗಳಿಗೂ ಅಲರ್ಟ್​ ಆಗಿರುವಂತೆ ಸೂಚನೆ ನೀಡಿದ್ದಾರೆ. ಜನರ ಸುರಕ್ಷತೆ ಮಾಡುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಬೇಕು ಎಂದೂ ಹೇಳಿದ್ದಾರೆ.

ಇನ್ನು ಉತ್ತರಾಖಂಡ್​​ನಲ್ಲಿ ಪಾಕೃತಿಕ ವಿಪತ್ತು ಸದಾ ಉಂಟಾಗುತ್ತಿರುತ್ತದೆ. ಅತಿಯಾದ ಮಳೆ ಬಿದ್ದ ಕೂಡಲೇ ಪ್ರವಾಹ, ಭೂಕುಸಿತ, ಸಿಡಿಲುಬಡಿತ, ಮೇಘಸ್ಫೋಟದಂಥ ದೊಡ್ಡಮಟ್ಟದ ಅಪಾಯಗಳು ಎದುರಾಗುತ್ತವೆ.

ಹೀಗಾಗಿ ಅಲ್ಲಿನ ರಕ್ಷಣಾ ಪಡೆಗಳು ಸದಾ ಅಲರ್ಟ್​ ಆಗಿಯೇ ಇರುತ್ತವೆ. ಹವಾಮಾನ ಇಲಾಖೆ ನೀಡಿದ ವರದಿ ಅನ್ವಯಿಸಿ, ರಾಜ್ಯಾದ್ಯಂತ ಸುಮಾರು 29 ಎಸ್​ಡಿಆರ್​ಎಫ್​ ತಂಡಗಳು ಸಿದ್ಧವಾಗಿವೆ.

ಇಡೀ ಉತ್ತರಾಖಂಡ್​​ನಲ್ಲಿ ಒಟ್ಟು 13 ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆಯಾಗಿದ್ದು, ಜನರು ಎಚ್ಚರಿಕೆಯಿಂದ ಇರಬೇಕು. ಇನ್ನೆರಡು ದಿನ ಎಲ್ಲಿಯೂ ಪ್ರಯಾಣ ಮಾಡಬೇಡಿ. ಆದಷ್ಟು ಮನೆಯಲ್ಲೇ ಸುರಕ್ಷಿತವಾಗಿರಿ ಎಂದು ಹವಾಮಾನ ಇಲಾಖೆ ನಿರ್ದೇಶಕ ವಿಕ್ರಮ್​ ಸಿಂಗ್​ ಸಲಹೆ ನೀಡಿದ್ದಾರೆ.

ಹಾಗೇ ಇಲ್ಲಿ, ಇನ್ನು ಮೂರು ದಿನ ವಿಪರೀತ ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಸುಮಾರು 80 ಕಿಮೀ ವೇಗದಲ್ಲಿ ಬಲವಾದ ಗಾಳಿಯೂ ಬೀಸಬಹುದು ಎಂದು ಐಎಂಡಿ ಮಾಹಿತಿ ನೀಡಿದೆ.

ಉತ್ತರಾಖಂಡ್‌ನಲ್ಲಿ ಮುಂದಿನ ಎರಡು ದಿನ ಅಂದರೆ ಅಕ್ಟೋಬರ್ 20​ ರವರೆಗೆ ವಿಪರೀತ ಮಳೆಯಾಗುವ ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ ಒಟ್ಟು 13 ಜಿಲ್ಲೆಗಳಲ್ಲಿ ಅ.19ರವರೆಗೂ ರೆಡ್​ ಅಲರ್ಟ್​ ಘೋಷಣೆ ಮಾಡಿದೆ.

ಹೀಗಾಗಿ ಬದರಿನಾಥ ಯಾತ್ರೆಯೂ ಸದ್ಯದ ಮಟ್ಟಿಗೆ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ. ಯಾತ್ರಾರ್ಥಿಗಳನ್ನು ಪಾಂಡುಕೇಶ್ವರದಲ್ಲಿಯೇ ನಿಲ್ಲಿಸಲಾಗಿದೆ. ಸದ್ಯ ರೆಡ್​ ಅಲರ್ಟ್​ ಘೋಷಣೆಯಾಗಿದ್ದರಿಂದ ಭಕ್ತರಿಗೆ ಪ್ರಯಾಣ ಮಾಡದಂತೆ ಸೂಚಿಸಿದ್ದೇವೆ.

ಬದರಿನಾಥಕ್ಕೆ ಬರುತ್ತಿದ್ದ ಹಲವು ಯಾತ್ರಾರ್ಥಿಗಳನ್ನು ಅವರಿದ್ದಲ್ಲೇ ತಡೆಯಲಾಗಿದೆ. ಹಾಗೇ, ಅವರ ಸುರಕ್ಷತೆಯ ಬಗ್ಗೆಯೂ ಗಮನಹರಿಸಲಾಗಿದೆ ಎಂದು ಚಮೋಲಿ ಜಿಲ್ಲಾಧಿಕಾರಿ ಹಿಮಾಂಶು ಖುರಾನಾ ತಿಳಿಸಿದ್ದಾರೆ. ಹಾಗೇ, ಸೋಮವಾರ ಚಮೋಲಿಯಲ್ಲಿ ಎಲ್ಲ ಶಾಲೆ, ಕಾಲೇಜುಗಳಿಗೂ ರಜೆ ಘೋಷಣೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಛಾರ್ ಧಾಮ್ ಯಾತ್ರಾ ರಸ್ತೆಯಲ್ಲಿ ವಿಶೇಷ ಕಾಳಜಿವಹಿಸಲಾಗುವುದು ಎಂದು ತಿಳಿಸಿದ್ದಾರೆ. ಕೇರಳದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಈಗಾಗಲೇ 10ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಮೀನಾಚಲ ಮತ್ತು ಮನಿಮಾಲಾ ನದಿಗಳು ಉಕ್ಕಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಅನೇಕ ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗುತ್ತಿದೆ. ತೀವ್ರ ಪ್ರವಾಹ ಉಂಟಾದ ಸ್ಥಳಗಳಲ್ಲಿ ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಭೂ ಕುಸಿತ ಮತ್ತು ಪ್ರವಾಹದಿಂದಾಗಿ ಪರ್ವತ ಪ್ರದೇಶದ ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ.

ಎರಡು ಅಂತಸ್ತಿನ ಬೃಹತ್ ಕಟ್ಟಡ ಧರೆಗೆ ಉಳಿಯುತ್ತಿರುವ ದೃಶ್ಯಗಳ ವಿಡಿಯೋ ವೈರಲ್ ಆಗಿದೆ. ನದಿಗಳು ತುಂಬಿ ಹರಿಯತ್ತಿರೋದು, ಜನರು ಸಂಕಷ್ಟಕ್ಕೆ ಸಿಲುಕಿರುವ, ರಸ್ತೆ ಸಂಪರ್ಕ ಕಡಿತಗೊಂಡಿರುವ ಮತ್ತು ರಕ್ಷಣಾ ಕಾರ್ಯದ ವಿಡಿಯೋಗಳು ವೈರಲ್ ಆಗಿವೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸಹ ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ತಿರುವನಂತರಪುರಂ, ಕೊಲ್ಲಂ, ಪಟ್ಟನಂತಿಟ್ಟ, ಕೊಟ್ಟಾಯಂ, ಅಳಪುರ, ಎರ್ನಾಕುಲಂ, ಇಡುಕ್ಕಿ, ತ್ರಿಸೂರ್, ಪಾಲಕ್ಕಾಡ, ಮಲಪ್ಪುರಂ ಮತ್ತು ಕೋಳಿಕ್ಕೋಡ್ ಜಿಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇಂದು ದೆಹಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆಯಾಗಿದೆ. ಉತ್ತರಾಖಂಡ, ಈಶಾನ್ಯ ಉತ್ತರ ಪ್ರದೇಶ ಮತ್ತು ಪಂಜಾಬ್ ರಾಜ್ಯಗಳಲ್ಲಿ ಮಳೆಯಾಗಲಿದ್ದು, ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಎಂಜಿನಿಯರಿಂಗ್ ಮತ್ತು ಮೆಡಿಕಲ್ ಯುನಿಟ್ ಜೊತೆ ಸೈನಿಕರು ಕಣ್ಣೂರಿನಿಂದ ವಯನಾಡು ತಲುಪಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಬೆಂಗಳೂರಿನ ಇಂಜಿಯರಿಂಗ್ ಟಾಸ್ಕ್ ಫೋರ್ಸ್ ತಂಡ ಶೀಘ್ರದಲ್ಲಿಯೇ ವಯನಾಡ್ ತಲುಪಲಿದೆ.

ಸೇನೆಯ ಮೂರು ತುಕಡಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದು, ವಾಯುಸೇನೆಯ ಕಾಪ್ಟರ್ ಗಳ ಮೂಲಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಆಹಾರ ಸಾಮಾಗ್ರಿ ಮತ್ತು ಔಷಧಿ ಕಳುಹಿಸಲಾಗುತ್ತಿದೆ ಎಂದು ರಕ್ಷಣಾ ಇಲಾಖೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾಹಿತಿ ನೀಡಿದ್ದಾರೆ.

English summary
Uttarakhand is likely to receive very heavy rainfall on 18 October, said the India Meteorological Department (IMD) on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X