Rain: ಈ ಭಾಗಗಳಲ್ಲಿ ಭರ್ಜರಿ ಮಳೆ, ಮೈಕೊರೆಯುವ ಚಳಿ!

ಮತ್ತೊಂದು ಚಂಡಮಾರುತ ಸೃಷ್ಟಿಯಾಗಿ ದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ. ಇದರ ನಡುವೆ ಕರ್ನಾಟಕವು ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಭಾರತದಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗಲಿದೆ. ಇನ್ನು ದೇಶದ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಮೈ ಕೊರೆಯುವ ಚಳಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದೇಶದ ಏಳು ರಾಜ್ಯಗಳಲ್ಲಿ ಮಳೆ: ಫೆಂಗಲ್ ಚಂಡಮಾರುತ ಅಬ್ಬರುವ ಈಗಷ್ಟೇ ಕಡಿಮೆಯಾಗಿದೆ. ಇದರ ನಡುವೆ ದೇಶದ ಪ್ರಮುಖ ಏಳು ರಾಜ್ಯಗಳಲ್ಲಿ ಮಳೆಯ ಅಬ್ಬರ ಜೋರಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ರಿಪೋರ್ಟ್ ಹೇಳಿದೆ. ಮುಂದಿನ 2ರಿಂದ 3 ದಿನಗಳಲ್ಲಿ ದಕ್ಷಿಣ ಭಾರತದ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ಸೇರಿದಂತೆ ಏಳು ರಾಜ್ಯಗಳಲ್ಲಿ ಭರ್ಜರಿ ಮಳೆಯಾಗಲಿದ್ದು, ವಿವಿಧ ಭಾಗದಲ್ಲಿ ಚಳಿ ಪ್ರಮಾಣ ದಾಖಲೆಯ ಮಟ್ಟದಲ್ಲಿ ಹೆಚ್ಚಾಗಲಿದೆ ಎನ್ನಲಾಗಿದೆ.

IMD Predicts Rain amp amp Severe Cold in Several States Karnataka Tamil Nadu Affected

ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಭಾಗದಲ್ಲಿ ಒತ್ತಡ ನಿರ್ಮಾಣವಾಗುತ್ತಿದ್ದು, ಇದರಿಂದ ಮತ್ತೊಂದು ಚಂಡಮಾರುತ ಸೃಷ್ಟಿಯಾಗಬಹುದು ಎಂದು ಹೇಳಲಾಗಿದೆ. ಫೆಂಗಲ್‌ ಚಂಡಮಾರುತದಿಂದ ಈಗಷ್ಟೇ ಕರ್ನಾಟಕ ಸೇರಿದಂತೆ ವಿವಿಧ ಭಾಗದಲ್ಲಿ ಮಳೆಯ ಅಬ್ಬರ ತುಸು ಇಳಿಕೆಯಾಗಿತ್ತು. ಇದೀಗ ಮತ್ತೆ ಈ ವಾರ ಮಳೆಯಾಗಲಿದೆ ಎಂದು ಹೇಳಲಾಗಿದೆ. ತಮಿಳುನಾಡು, ಕರ್ನಾಟಕ, ಪುದುಚೇರಿ, ಕೇರಳ ಹಾಗೂ ಆಂಧ್ರಪ್ರದೇಶ ಸೇರಿದಂತೆ ವಿವಿಧ ಭಾಗದಲ್ಲಿ ಡಿಸೆಂಬರ್ 12 ಮತ್ತು 13ರಂದು ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಉತ್ತರ ಭಾರತದಲ್ಲಿ ಮೈಕೊರೆವ ಚಳಿ

ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದ್ದರೆ. ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಮೈಕೊರೆಯುವ ಚಳಿ ಇರಲಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೈಕೊರೆಯುವ ಚಳಿ ಇರಲಿದೆ. ಅಲ್ಲದೇ ಉತ್ತರ ಭಾರತದ ಪಂಜಾಬ್, ಹರಿಯಾಣ ಹಾಗೂ ಚಂಡೀಗದಲ್ಲೂ ಮಳೆಯಾಗಲಿದೆ.

ಇನ್ನು ಈಶಾನ್ಯ ರಾಜ್ಯಗಳಲ್ಲಿ ದಟ್ಟ ಮಂಜಿನಿಂದ ಕೂಡಿದ ವಾತಾವರಣ ಇರಲಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಹಾಗೂ ತ್ರಿಪುರಾದಲ್ಲಿ ಬೆಳಗ್ಗೆ ಹಾಗೂ ಸಂಜೆ ದಟ್ಟವಾದ ಮಂಜು ಮುಸುಕಿದ ವಾತವರಣ ಇರಲಿದೆ. ಉತ್ತರ ಭಾರತದ ಬಹುತೇಕ ಭಾಗದಲ್ಲಿ ಮಳೆಯಿಂದ ಚಳಿ ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.

IMD Predicts Rain amp amp Severe Cold in Several States Karnataka Tamil Nadu Affected

ಚಳಿಗೆ ನಡುಗಿದ ಜನ: ಇನ್ನು ಉತ್ತರ ಭಾರತದ ವಿವಿಧ ಭಾಗದಲ್ಲಿ ಈಗಾಗಲೇ ಮೈಕೊರೆಯುವ ಚಳಿ ಪ್ರಾರಂಭವಾಗಿದೆ. ನಾಳೆಯಿಂದ ಡಿಸೆಂಬರ್‌ 10ರಿಂದ ದೆಹಲಿಯಲ್ಲಿ ತಾಪಮಾನ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಲಿದೆ ಎಂದು ಹೇಳಲಾಗಿದೆ. ಡಿಸೆಂಬರ್‌ 14ರ ವರೆಗೆ ಉತ್ತರ ಭಾರತದ ದೆಹಲಿ, ಪಂಜಾಬ್‌ ಹಾಗೂ ಪಶ್ಚಿಮ ಉತ್ತರ ಪ್ರದೇಶದಲ್ಲಿ ಶೀತ ಅಲೆ ಇರಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ದೆಹಲಿಯಲ್ಲಿ ಸಾಮಾನ್ಯವಾಗಿ ವ್ಯತರಿಕ್ತ ವಾತಾವರಣ ಇರುತ್ತದೆ. ಆರು ತಿಂಗಳು ಚಳಿ ಇದ್ದರೆ ಇನ್ನಾರು ತಿಂಗಳು ಭಯಂಕರ ಬಿಸಿಲು ಇರುತ್ತದೆ. ಇಲ್ಲಿ ಅಪರೂಪಕ್ಕೆ ಮಳೆಯಾಗುತ್ತದೆ. ಇದೇ ಕಾರಣಕ್ಕೆ ಇಲ್ಲಿ ವಾಯುಮಾಲಿನ್ಯ ಹೆಚ್ಚಾದರೆ ಕೃತಕ ಮಳೆ ಅಥವಾ ಯಂತ್ರಗಳ ಮೂಲಕ ನೀರು ಸಿಂಪಡಣೆ ಮಾಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+