Imd Weather Forecast: ಚಂಡಮಾರುತ ಪ್ರಸರಣ, ನೈಋತ್ಯ ಮಾನ್ಸೂನ್ ಪ್ರಭಾವ: ಈ ಭಾಗಗಳಲ್ಲಿ ಜುಲೈ 4ರ ವರೆಗೆ ಭಾರೀ ಮಳೆ
Imd Weather Forecast: ಚಂಡಮಾರುತ ಪ್ರಸರಣ ಹಾಗೂ ನೈಋತ್ಯ ಮಾನ್ಸೂನ್ ಪ್ರಭಾವ ತೀವ್ರಗೊಂಡಿದ್ದು ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ನೈಋತ್ಯ ಮಾನ್ಸೂನ್ ಪ್ರಭಾವ ಹೆಚ್ಚಾಗುತ್ತಿದ್ದು, ಜುಲೈ 4 ರವರೆಗೆ ಕೇರಳದಲ್ಲಿ ಮಿಂಚು - ಗುಡುಗು ಸಹಿತ ಭಾರೀ ಮಳೆ ಆಗಲಿದೆ. ಇದರೊಂದಿಗೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಹಾಗೂ ಉತ್ತರ ಭಾರತದಲ್ಲೂ ಭಾರೀ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕೇರಳದ ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಮುಂದಿನ 24 ಗಂಟೆ ಅವಧಿಯಲ್ಲಿ 12 ಸೆಂ.ಮೀ ನಿಂದ 20 ಸೆಂ.ಮೀ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಅಲ್ಲದೆ ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಹಾಗೂ ವಯನಾಡ್ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ 7 ಸೆಂ.ಮೀ ನಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

ಇನ್ನು ಕೇರಳದ ಕೋಯಿಕ್ಕೋಡ್ ಮತ್ತು ವಯನಾಡನಲ್ಲಿ ಭಾರೀ ಮಳೆ ಮುಂದುವರಿದಿದೆ. ಜುಲೈ 1 ರಂದು ಕಣ್ಣೂರು ಮತ್ತು ಕಾಸರಗೋಡಿನಲ್ಲಿ ಮಳೆ ಆಗಲಿದೆ. ಜುಲೈ 2 ರವರೆಗೆ ಕೇರಳ ಮತ್ತು ಲಕ್ಷದ್ವೀಪದಾದ್ಯಂತ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಗುಡುಗು ಸಹಿತ ಭಾರೀ ಮಳೆ ಆಗಲಿದೆ. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಅದೇ ಅವಧಿಯಲ್ಲಿ ಕೇರಳ ಮತ್ತು ಕರ್ನಾಟಕ ಕರಾವಳಿಯಲ್ಲಿ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ, ಗಂಟೆಗೆ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಇನ್ನು ತೆಲಂಗಾಣ ಭಾಗದಲ್ಲೂ ಭಾರೀ ಮಳೆ ಆಗಲಿದೆ. ಜುಲೈ 4ರ ಶನಿವಾರದವರೆಗೆ ತೆಲಂಗಾಣದಲ್ಲಿ ಭಾರೀ ಮಳೆ ಆಗಲಿದೆ. ತೆಲಂಗಾಣದ ರಾಜಧಾನಿ ಹೈದರಾಬಾದ್ ನಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಯಲ್ಲಿ ಜುಲೈ 4 ರವರೆಗೆ ಎಚ್ಚರಿಕೆ ನೀಡಲಾಗಿದೆ. ಐಎಂಡಿಯು ತೆಲಂಗಾಣದಾದ್ಯಂತ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮುಂದಿನ ಏಳು ದಿನಗಳ ವರೆಗೆ ತೆಲಂಗಾಣದಾದ್ಯಂತ ಮಿಂಚು ಗುಡುಗು ಸಹಿತ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.
ಹೈದರಾಬಾದ್‌ನಲ್ಲಿ ಜುಲೈ 1 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 2 ದಿನಗಳಲ್ಲಿ ಉತ್ತರ ಅರೇಬಿಯನ್ ಸಮುದ್ರ, ಗುಜರಾತ್, ಮಧ್ಯಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಬಿಹಾರದ ಉಳಿದ ಭಾಗಗಳು, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳು ಮತ್ತು ನಂತರದ 2-3 ದಿನಗಳಲ್ಲಿ ಮಧ್ಯಪ್ರದೇಶ, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶದ ಕೆಲವು ಭಾಗಗಳು, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಆಗ್ನೇಯ ರಾಜಸ್ಥಾನ ಮತ್ತು ಗುಜರಾತ್‌ನ ಉಳಿದ ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಪ್ರಬಲವಾಗುವ ಸಾಧ್ಯತೆ ಇದೆ.
ಇದರಿಂದ ಕರ್ನಾಟಕದ ವಿವಿಧ ಭಾಗಗಳಲ್ಲೂ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರ ಕರಾವಳಿಯ ಪೂರ್ವಮಧ್ಯ ಅರೇಬಿಯನ್ ಸಮುದ್ರದ ಮೇಲೆ ಮೇಲಿನ ವಾಯು ಚಂಡಮಾರುತದ ಪ್ರಸರಣ ಮುಂದುವರೆದಿದ್ದು, ಈಗ ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ. ಎತ್ತರದಲ್ಲಿ ಕಂಡುಬಂದಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಭಾರೀ ಮಳೆ ಆಗಲಿದೆ ಎಂದು ಐಎಂಡಿ ವರದಿ ಉಲ್ಲೇಖಿಸಿದೆ.












Click it and Unblock the Notifications