Imd Weather Forecast: ಈ ಭಾಗಗಳಲ್ಲಿ ರಣಭೀಕರ ಮಳೆ, ಪ್ರವಾಹ ಭೀತಿ!, ತಮಿಳುನಾಡಿನ ಏರ್‌ಪೋರ್ಟ್ ಜಲಾವೃತ
Imd Weather Forecast: ಚಂಡಮಾರುತ ಪರಿಚಲನೆಯಿಂದ ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ವಿವಿಧ ಭಾಗದಲ್ಲಿ ಪ್ರವಾಹ ಭೀತಿ ಶುರುವಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಕೇರಳ ಹಾಗೂ ತಮಿಳುನಾಡಿನ ವಿವಿಧ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಚಂಡಮಾರುತದ ಪ್ರಭಾವದಿಂದಾಗಿ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಉತ್ತರ ಭಾರತದಲ್ಲಿ ಸಾಧಾರಣ ಮಳೆ ಮುಂದುವರಿದಿದೆ. ತಮಿಳುನಾಡಿನ ಚೆನ್ನೈನಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಚೆನ್ನೈ ವಿಮಾನ ನಿಲ್ದಾಣದ ರಸ್ತೆಗಳಲ್ಲಿ ನೀರು ತುಂಬಿದ್ದು, ರನ್‌ವೇಗಳು ಜಲಾವೃತಗೊಂಡಿವೆ. ಪೂರ್ವ ಕರಾವಳಿ ರಸ್ತೆ (ಇಸಿಆರ್) ಉದ್ದಕ್ಕೂ ಮಳೆ ಆರ್ಭಟ ಮುಂದುವರಿದಿದೆ. ತಮಿಳುನಾಡಿನ ವೇಲಾಚೇರಿ, ಮೇಡವಕ್ಕಂ, ಪಲ್ಲಿಕರಣೈ ಮತ್ತು ನೀಲಂಕರೈ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.

ತಮಿಳುನಾಡಿನಲ್ಲಿ ಭಾರೀ ಮಳೆ ಆಗುತ್ತಿದ್ದು, ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ದಕ್ಷಿಣ ಚೆನ್ನೈನ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಭಾರೀ ಮಳೆಯಿಂದಾಗಿ ನೀಲಗಿರಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ರೈಲುಗಳ ಸಂಚಾರದಲ್ಲಿ ವಿಳಂಬವಾಗಿದೆ ಎಂದು ಹೇಳಲಾಗಿದೆ.
ಆಗ್ನೇಯ ಅರಬ್ಬಿ ಸಮುದ್ರ ಪ್ರದೇಶದಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಂಡಿದೆ. ಕೇರಳ - ಕರ್ನಾಟಕ ಕರಾವಳಿಯ ಆಗ್ನೇಯ ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗಿರುವುದರಿಂದ ಭಾರೀ ಮಳೆ ಆಗುತ್ತಿದೆ. ಅಕ್ಟೋಬರ್ 20ರಂದು ಬಹುತೇಕ ಪಶ್ಚಿಮಕ್ಕೆ ಚಲಿಸಿ ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಅಂತ್ಯವಾಗಲಿದೆ. ಮುಂದಿನ 24 ಗಂಟೆಗಳಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ.
ಮುಂದಿನ 24 ಗಂಟೆಗಳಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಇದು ಪಶ್ಚಿಮ-ವಾಯುವ್ಯಕ್ಕೆ ಚಲಿಸುವ ಮತ್ತು ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯ ಭಾಗ ಮತ್ತು ಪಕ್ಕದ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಮುಂದಿನ ಮೂರರಿಂದ ನಾಲ್ಕು ದಿನಗಳ ಅವಧಿಗೆ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.












Click it and Unblock the Notifications