IMD Weather Alert: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಸೆಪ್ಟೆಂಬರ್ 5ರವರೆಗೆ ಈ ಭಾಗಗಳಲ್ಲಿ ಭಾರೀ ಮಳೆ ಐಎಂಡಿ!
IMD Weather Alert: ಭಾರತದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮುಂದಿನ ಮೂರುರಿಂದ ನಾಲ್ಕು ದಿನಗಳ ವರೆಗೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಪಶ್ಚಿಮ ಬಂಗಾಳದ ಗಂಗಾನದಿಯ ಮೇಲೆ ಮತ್ತು ಒಡಿಶಾದ ಉತ್ತರ ಕರಾವಳಿ ಮತ್ತು ಬಂಗಾಳಕೊಲ್ಲಿಯ ವಾಯುವ್ಯ ಭಾಗಗಳ ಪಕ್ಕದ ಪ್ರದೇಶಗಳಲ್ಲಿ ಗುರುತಿಸಲಾದ ಕಡಿಮೆ ಒತ್ತಡದ ಪ್ರದೇಶವು ಈಗ ಸೆಪ್ಟೆಂಬರ್ 01 ರಂದು ಗಂಗಾನದಿಯ ಪಶ್ಚಿಮ ಬಂಗಾಳ ಮತ್ತು ಒಡಿಶಾದ ಉತ್ತರ ಕರಾವಳಿ, ಜಾರ್ಖಂಡ್ ಮತ್ತು ಬಂಗಾಳಕೊಲ್ಲಿಯ ವಾಯುವ್ಯ ಭಾಗಗಳ ಮೇಲೆ ನೆಲೆಗೊಂಡಿದೆ. ಸಂಬಂಧಿತ ಸುಳಿಗಾಳಿಯು ಸರಾಸರಿ ಸಮುದ್ರ ಮಟ್ಟದಿಂದ 7.6 ಕಿ.ಮೀ ವರೆಗೆ ವಿಸ್ತರಿಸಿದ್ದು, ನೈಋತ್ಯಕ್ಕೆ ಓರೆಯಾಗಿ ಎತ್ತರಕ್ಕೆ ಚಲಿಸುತ್ತದೆ. ಇದು ಮುಂದಿನ 48 ಗಂಟೆಗಳಲ್ಲಿ ಉತ್ತರ ಒಡಿಶಾ ಮತ್ತು ಜಾರ್ಖಂಡ್‌ನಾದ್ಯಂತ ಪಶ್ಚಿಮ-ವಾಯುವ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

ಅಲ್ಲದೆ ಮುಂದುವರಿದು ಸಮುದ್ರ ಮಟ್ಟದಲ್ಲಿನ ಸರಾಸರಿ ಮಾನ್ಸೂನ್ ಟ್ರಫ್ ಈಗ ಜಮ್ಮು, ಚಂಡೀಗಢ, ಶಹಜಹಾನ್‌ಪುರ, ವಾರಣಾಸಿ ಮೂಲಕ ಹಾದುಹೋಗುತ್ತದೆ, ಗಂಗಾನದಿಯ ಪಶ್ಚಿಮ ಬಂಗಾಳ ಮತ್ತು ಒಡಿಶಾದ ಉತ್ತರ ಕರಾವಳಿ, ಜಾರ್ಖಂಡ್ ಮತ್ತು ಬಂಗಾಳಕೊಲ್ಲಿಯ ವಾಯುವ್ಯ ಭಾಗಗಳ ಪಕ್ಕದ ಪ್ರದೇಶಗಳ ಮೇಲೆ ಗುರುತಿಸಲಾದ ಕಡಿಮೆ ಒತ್ತಡದ ಪ್ರದೇಶದ ಕೇಂದ್ರವಾಗಿದೆ ಮತ್ತು ಅಲ್ಲಿಂದ ಆಗ್ನೇಯಕ್ಕೆ ಪೂರ್ವ-ಮಧ್ಯ ಬಂಗಾಳಕೊಲ್ಲಿಗೆ ಹಾದುಹೋಗುತ್ತದೆ ಎಂದು ಐಎಂಡಿ ವರದಿ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಂಡು ಒಳನಾಡಿನಲ್ಲಿ ಚಲಿಸುತ್ತಿರುವುದರಿಂದ ನೈಋತ್ಯ ಮಾನ್ಸೂನ್ ವೇಗ ಪಡೆದುಕೊಳ್ಳುವ ಸಾಧ್ಯತೆ ಇದೆ. ಇದು ಸೆಪ್ಟೆಂಬರ್ ಆರಂಭದ ದಿನಗಳಲ್ಲಿ ಪೂರ್ವ ಮತ್ತು ಉತ್ತರ ಭಾರತದಾದ್ಯಂತ ಮಳೆ ಜೋರಾಗಲು ಕಾರಣವಾಗಲಿದೆ. ಭಾರತದಲ್ಲಿ ನೈಋತ್ಯ ಮಾನ್ಸೂನ್ ಋತುವು ಮುಕ್ತಾಯವಾಗುವ ಹಂತಕ್ಕೆ ಬಂದಿದೆ. ಆದರೆ, ವಿವಿಧ ಪ್ರದೇಶಗಳಲ್ಲಿ ಇನ್ನೂ ಭಾರೀ ಮಳೆ ಮುಂದುವರಿದಿದೆ. ಒಡಿಶಾ, ಛತ್ತೀಸ್‌ಗಢ, ಗಂಗಾನದಿಯ ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್ ರಾಜ್ಯದಲ್ಲಿ ಭಾರೀ ಮಳೆ ಆಗುವ ನಿರೀಕ್ಷೆ ಇದೆ. ಸೆಪ್ಟೆಂಬರ್ 5 ರವರೆಗೆ ಹರಿಯಾಣ, ಚಂಡೀಗಢ ಮತ್ತು ದೆಹಲಿ, ಪಂಜಾಬ್ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
IMD Weather Alert: ದಕ್ಷಿಣ ಭಾರತದಲ್ಲಿ ಮಳೆ ಆರ್ಭಟ
ಇನ್ನು ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲೂ ಮಳೆ ಆರ್ಭಟ ಮುಂದುವರಿದಿದೆ. ಕರ್ನಾಟ, ತಮಿಳುನಾಡು, ಕೇರಳ ಹಾಗೂ ತೆಲಂಗಾಣ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
IMD Weather Alert: ಕರ್ನಾಟಕದಲ್ಲಿ ಹೇಗಿದೆ ಹವಾಮಾನ
ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ವರೆಗೆ ಹವಾಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಹೀಗಾಗಿ, ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ. ಇನ್ನು ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನವು 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.


Click it and Unblock the Notifications
