Imd Weather Forecast: ಸೈಕ್ಲೋನ್ ಪ್ರಭಾವ ತೀವ್ರ: ಈ ಭಾಗಗಳಲ್ಲಿ ಮುಂದಿನ 3 ದಿನ ರಣಭೀಕರ ಮಳೆ!
Imd Weather Forecast: ಚಂಡಮಾರುತದ ಪ್ರಸರಣ ಮತ್ತು ವಾಯುಭಾರ ಕುಸಿತದ ಕಾರಣದಿಂದ ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿದೆ. ದೇಶದಾದ್ಯಂತ ಬಹುತೇಕ ಪ್ರದೇಶಗಳಲ್ಲಿ ಅಕ್ಟೋಬರ್ 11ರ ವರೆಗೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ದೇಶದ ಯಾವ ಭಾಗದಲ್ಲಿ ಮಳೆ ಆಗಲಿದೆ ಹಾಗೂ ಕರ್ನಾಟಕದ ಹವಾಮಾನದಲ್ಲಿ ಯಾವ ಬದಲಾವಣೆ ಆಗಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಭಾರತದಲ್ಲಿ ಈ ಬಾರಿ ಮುಂಗಾರು ಅವಧಿ ಸಂಪೂರ್ಣವಾಗಿ ವಿಸ್ತರಣೆಗೊಂಡಿದೆ. ಸಾಮಾನ್ಯವಾಗಿ ಸೆಪ್ಟೆಂಬರ್ ಅಂತ್ಯದ ವೇಳೆಗೆ ಮುಂಗಾರು ಮಳೆ ಮುಕ್ತಾಯವಾಗಬೇಕಾಗಿತ್ತು. ಆದರೆ ಈ ಬಾರಿ ಬಂಗಾಳ ಕೊಲ್ಲಿ ಭಾಗದಲ್ಲಿ ಏಕಕಾಲಕ್ಕೆ ಎರಡು ಚಂಡಮಾರುತ /ಸೈಕ್ಲೋನ್ ಪ್ರಭಾವದಿಂದಾಗಿ ಮುಂಗಾರು ಮಳೆ ವಿಸ್ತರಣೆಗೊಂಡಿದೆ. ಅಕ್ಟೋಬರ್ ಆರಂಭವಾಗಿದ್ದರೂ ದೇಶದ ಹಲವು ಭಾಗಗಳಲ್ಲಿ ಇನ್ನೂ ನಿರಂತರವಾಗಿ ಮಳೆಯಾಗುತ್ತಿದೆ. ಈ ಅವಧಿಯಲ್ಲಿ ಮಳೆ ಆಗುತ್ತಿರುವುದು ಭಾರತದಲ್ಲಿ ರೈತರ ಲೆಕ್ಕಾಚಾರ ತಲೆಕೆಳಗಾಗಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ ಚಳಿಗಾಲ ಪ್ರಾರಂಭವಾಗಬೇಕಾಗಿತ್ತು. ಆದರೆ ಹಲವು ಭಾಗದಲ್ಲಿ ಮಳೆ ಮುಂದುವರಿದಿದೆ.

ಭಾರತ ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 24 ಗಂಟೆಗಳ ನಂತರ ಉತ್ತರ ಭಾರತ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕಳೆದ ತಿಂಗಳು ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ರಾಜಸ್ಥಾನ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ದೆಹಲಿ ಹಾಗೂ ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಇನ್ನು ದೆಹಲಿ ಹಾಗೂ ಎನ್‌ಸಿಆರ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಅಕ್ಟೋಬರ್ 6 ಮತ್ತು 7ರಿಂದ ದೇಶದ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಅಕ್ಟೋಬರ್ 5ರ ಸಂಜೆ ಭಾನುವಾರ ರಾತ್ರಿ ದೆಹಲಿ ಹಾಗೂ ಎನ್‌ಸಿಆರ್‌ನಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ.
ಉತ್ತರ ಪ್ರದೇಶದಲ್ಲಿ ನಿರಂತರ ಮಳೆ ಮುಂದುವರಿದಿದೆ. ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ ಮತ್ತು ಛತ್ತೀಸ್‌ಗಢ ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿದಿದ್ದು, ವಿವಿಧ ಪ್ರದೇಶದಲ್ಲಿ ರೆಡ್ ಅಲರ್ಟ್ ಕೊಡಲಾಗಿದೆ. ಹರಿಯಾಣದಲ್ಲಿ ಈಚೆಗೆ ಮಳೆಯಬ್ಬರ ತುಸು ಕಡಿಮೆಯಾಗಿತ್ತು. ಇದೀಗ ಹರಿಯಾಣದ ವಿವಿಧ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ. ಹಿಮಾಚಲ ಪ್ರದೇಶದ ಹಲವು ಭಾಗದಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.
ಗುಜರಾತ್‌ನ ಆರು ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ.
ದಕ್ಷಿಣ ಭಾರತದಲ್ಲಿ ಮಳೆ ಆರ್ಭಟ: ಇನ್ನು ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲೂ ಮಳೆ ಆರ್ಭಟ ಮುಂದುವರಿದಿದೆ. ತಮಿಳುನಾಡು ಹಾಗೂ ಕೇರಳ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ಕೊಟ್ಟಿದೆ.












Click it and Unblock the Notifications