IMD Weather Alert: ಈ ಭಾಗಗಳಲ್ಲಿ ಅ.15ರವರೆಗೆ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ ಏನಿದೆ ?

IMD Weather Alert: ಕರ್ನಾಟಕವು ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದೆ. ಅಕ್ಟೋಬರ್ 15ರ ವರೆಗೆ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಪ್ರದೇಶ ಹಾಗೂ ಉತ್ತರ ಭಾರತದಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ನೈಋತ್ಯ ಮುಂಗಾರು ಮಾರುತಗಳ ಹಿಮ್ಮೆಟ್ಟುವಿಕೆಯು 27.5°N/86.5°E, ಸುಪೌಲ್, ರಾಂಚಿ, ಸುಂದರ್‌ಗಢ, ಬಾರ್ಗಫ್, ಬಿಜಾಪುರ, ಹೈದರಾಬಾದ್, ಬೆಳಗಾವಿ, ಪಣಜಿ ಮತ್ತು 15°N/72°E ಮಾರ್ಗದ ಮೂಲಕ ಮುಂದುವರಿಯುತ್ತಿದೆ. ಮುಂದಿನ 3-4 ದಿನಗಳಲ್ಲಿ ಪೂರ್ವ ಭಾರತ, ಉತ್ತರ ದ್ವೀಪಕಲ್ಪದ (Northern Peninsula) ಕೆಲವು ಭಾಗಗಳು ಮತ್ತು ಈಶಾನ್ಯ ಭಾರತದ ಅನೇಕ ಭಾಗಗಳಿಂದ ನೈಋತ್ಯ ಮುಂಗಾರು ಮಾರುತಗಳು ಮತ್ತಷ್ಟು ಹಿಮ್ಮೆಟ್ಟಲು ಅನುಕೂಲಕರ ಪರಿಸ್ಥಿತಿಗಳು ನಿರ್ಮಾಣ ವಾಗುತ್ತಿವೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

IMD Weather Alert Heavy Rain Forecast in These Regions Until October 15 Check the Latest Update

ಥೈಲ್ಯಾಂಡ್ ಕೊಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಸಮುದ್ರ ಮಟ್ಟದಿಂದ 7.6 ಕಿ.ಮೀ ಎತ್ತರದವರೆಗೆ ವಿಸ್ತರಿಸಿರುವ ಮೇಲ್ಮ ಸುಳಿಗಾಳಿ (upper air cyclonic circulation) ವ್ಯವಸ್ಥೆಯೊಂದು ಅಸ್ತಿತ್ವದಲ್ಲಿದೆ. ಅಕ್ಟೋಬರ್ 11 ರ ಸುಮಾರಿಗೆ ಅಂಡಮಾನ್ ಸಮುದ್ರದಲ್ಲಿ ಮತ್ತೊಂದು ಮೇಲ್ಮ ಸುಳಿಗಾಳಿ ವ್ಯವಸ್ಥೆ ಉಂಟಾಗುವ ಸಾಧ್ಯತೆಯಿದ್ದು, ಮೇಲೆ ತಿಳಿಸಿದ ವ್ಯವಸ್ಥೆಯು ಅದರೊಂದಿಗೆ ವಿಲೀನಗೊಳ್ಳುವ ನಿರೀಕ್ಷೆಯಿದೆ. ಇದರ ಪ್ರಭಾವದಿಂದ, ಅಕ್ಟೋಬರ್ 13 ರ ಸುಮಾರಿಗೆ ಆಗೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವೊಂದು ರೂಪುಗೊಳ್ಳುವ ಸಾಧ್ಯತೆಯಿದೆ.

ಉತ್ತರ ಬಾಂಗ್ಲಾದೇಶ ಮತ್ತು ಪಕ್ಕದ ಅಸ್ಸಾಂನಿಂದ ತೆಲಂಗಾಣದವರೆಗೆ ಇದ್ದ 'ಟ್ರಫ್' (trough - ವಾಯುಭಾರ ಕುಸಿತದ ಕಣಿವೆ ಪ್ರದೇಶ) ಈಗ ಪಶ್ಚಿಮ ಅಸ್ಸಾಂನಿಂದ ತೆಲಂಗಾಣದವರೆಗೆ; ಅಂದರೆ ಉತ್ತರ ಬಾಂಗ್ಲಾದೇಶ, ಉಪ-ಹಿಮಾಲಯದ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಜಾರ್ಖಂಡ್, ಒಡಿಶಾ ಹಾಗೂ ಛತ್ತೀಸ್‌ಗಢದ ಮೂಲಕ ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ ಹಾದುಹೋಗುತ್ತಿದೆ.

ಕೊಮೊರಿನ್ ಪ್ರದೇಶದಿಂದ ಮರಾಠವಾಡದವರೆಗೆ ಇದ್ದ 'ಟ್ರಫ್' ಈಗ ಕೊಮೊರಿನ್ ಪ್ರದೇಶದಿಂದ ಉತ್ತರ ಒಳನಾಡು ಕರ್ನಾಟಕದವರೆಗೆ; ಅಂದರೆ ತಮಿಳುನಾಡು ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಮೂಲಕ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಹಾದುಹೋಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ. ಹೀಗಾಗಿ, ಮುಂದಿನ ಐದು ದಿನಗಳ ವರೆಗೆ ಭಾರೀ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.

ಮುಂದಿನ ದಿನಗಳಲ್ಲಿ ದೇಶದ ಹಲವಾರು ಭಾಗಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನೈಋತ್ಯ ಮಾನ್ಸೂನ್ ಮತ್ತಷ್ಟು ಹಿಂದೆ ಸರಿಯಲು ಪರಿಸ್ಥಿತಿಗಳು ಅನುಕೂಲಕರವಾಗುತ್ತಿವೆ. ಅಕ್ಟೋಬರ್ 15 ರವರೆಗೆ ಭಾರತದ ಹಲವಾರು ಭಾಗಗಳಲ್ಲಿ ವಾಯುವ್ಯ, ಮಧ್ಯ, ಪೂರ್ವ, ಈಶಾನ್ಯ ಮತ್ತು ದಕ್ಷಿಣ ಪ್ರದೇಶಗಳು ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮುಂದುವರಿ ಯುವ ಸಾಧ್ಯತೆ ಇದೆ. ಹೆಚ್ಚಿನ ಪ್ರದೇಶಗಳಲ್ಲಿ ಪ್ರತ್ಯೇಕ ಮಳೆಯಾಗುವ ನಿರೀಕ್ಷೆಯಿದ್ದರೂ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಕೇರಳ ಮತ್ತು ಲಕ್ಷದ್ವೀಪದ ಕೆಲವು ಭಾಗಗಳಲ್ಲಿ ನಿರ್ದಿಷ್ಟ ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ಪಂಜಾಬ್‌ನಲ್ಲಿ ಪ್ರತ್ಯೇಕ ಅಥವಾ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜಾರ್ಖಂಡ್, ಪಶ್ಚಿಮ ಬಂಗಾಳದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಬಿಹಾರ, ಸಿಕ್ಕಿಂ ಹಾಗೂ ಅರುಣಾಚಲ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

IMD Weather Alert: ದಕ್ಷಿಣ ಭಾರತದಲ್ಲಿ ಮಳೆ ಆರ್ಭಟ

ಇನ್ನು ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದಲ್ಲಿ ಮಳೆ ಆರ್ಭಟ ಇರಲಿದೆ. ದಕ್ಷಿಣ ಭಾರತದಲ್ಲಿ, ಕೇರಳ ಮತ್ತು ಮಾಹೆಯಲ್ಲಿ ಅಕ್ಟೋಬರ್ 10-15ರ ಅವಧಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 10 ರಂದು ಲಕ್ಷದ್ವೀಪದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯಲ್ಲೂ ಮಳೆ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+