ಕರ್ನಾಟಕ ಸೇರಿ ದಕ್ಷಿಣದ ರಾಜ್ಯಗಳಿಗೆ ಮಳೆ; ದೆಹಲಿ, ಪಂಜಾಬ್‌ನಲ್ಲಿ ದಟ್ಟ ಮಂಜಿನ ಆತಂಕ!

ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಹವಾಮಾನದಲ್ಲಿ ಬದಲಾವಣೆ ಉಂಟಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ನವೆಂಬರ್ 27ರವರೆಗೆ ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ, ಪಂಜಾಬ್, ಹಿಮಾಚಲ ಪ್ರದೇಶ, ಹರಿಯಾಣ, ಚಂಡೀಗಢ ಮತ್ತು ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಬೆಳಗಿನ ಹಾಗೂ ರಾತ್ರಿ ವೇಳೆಯಲ್ಲಿ ದಟ್ಟ ಮಂಜು ಆವರಿಸುವ ಎಚ್ಚರಿಕೆ ನೀಡಲಾಗಿದೆ.

IMD Weather Alert Heavy Rain in Kerala Tamil Nadu and Karnataka Dense Fog Warning for Delhi Punjab

ದಕ್ಷಿಣ ಭಾರತದಲ್ಲಿ ಮಳೆ ಮತ್ತು ಗುಡುಗು ಸಹಿತ ಗಾಳಿ

ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಪೂರ್ವದ ಗಾಳಿ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್: ನವೆಂಬರ್ 27ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 30ರವರೆಗೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ನವೆಂಬರ್ 28ರವರೆಗೆ ಗುಡುಗು, ಮಿಂಚು ಸಹಿತ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಗಾಳಿಯ ವೇಗ ಕೆಲವೊಮ್ಮೆ 60 ಕಿ.ಮೀ. ತಲುಪಬಹುದು.

 Karnataka weather: ಇಂದು ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 13 ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಎಚ್ಚರಿಕೆ
Karnataka weather: ಇಂದು ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 13 ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಎಚ್ಚರಿಕೆ

ಕೇರಳ ಮತ್ತು ಮಾಹೆ: ನವೆಂಬರ್ 28ರವರೆಗೆ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆ ಇದೆ. ನವೆಂಬರ್ 29 ಮತ್ತು 30ರಂದು ಅಲ್ಲಲ್ಲಿ ಮಳೆಯಾಗಬಹುದು. ನವೆಂಬರ್ 27ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯ ಜೊತೆಗೆ ಗುಡುಗು, ಮಿಂಚು ಸಂಭವಿಸುವ ಸಾಧ್ಯತೆಯಿದೆ. ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಕೆಲವೊಮ್ಮೆ 50 ಕಿ.ಮೀ. ವೇಗ ತಲುಪಬಹುದು.

ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ: ನವೆಂಬರ್ 30ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 28ರವರೆಗೆ ಗುಡುಗು, ಮಿಂಚು ಸಹಿತ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು. ಬಲವಾದ ಮೇಲ್ಮೈ ಗಾಳಿಯೂ ಬೀಸುವ ಮುನ್ಸೂಚನೆ ಇದೆ.

Bengaluru Rains: ವಾರಗಳ ಬಳಿಕ ನಗರದಲ್ಲಿ ವರುಭಾರ್ಭಟ: 134 ವಾರ್ಡ್‌ಗಳಲ್ಲಿ ಭರ್ಜರಿ ಮಳೆ, ರಸ್ತೆಗಳಲ್ಲಿ ಟ್ರಾಫಿಕ್!
Bengaluru Rains: ವಾರಗಳ ಬಳಿಕ ನಗರದಲ್ಲಿ ವರುಭಾರ್ಭಟ: 134 ವಾರ್ಡ್‌ಗಳಲ್ಲಿ ಭರ್ಜರಿ ಮಳೆ, ರಸ್ತೆಗಳಲ್ಲಿ ಟ್ರಾಫಿಕ್!

ಕರ್ನಾಟಕದಲ್ಲೂ ಮಳೆ ಸಾಧ್ಯತೆ

ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 28ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ನವೆಂಬರ್ 26ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಕಾಣಿಸಿಕೊಳ್ಳಬಹುದು. ತೆಲಂಗಾಣದಲ್ಲಿ ನವೆಂಬರ್ 25ರಂದು ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಭಾರತದಲ್ಲಿ ದಟ್ಟ ಮಂಜು ಎಚ್ಚರಿಕೆ

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ರಾತ್ರಿ ಮತ್ತು ಬೆಳಗಿನ ಸಮಯದಲ್ಲಿ ದಟ್ಟ ಮಂಜು ಆವರಿಸುವ ಸಾಧ್ಯತೆಯಿದೆ ಎಂದು IMD ಎಚ್ಚರಿಸಿದೆ.ಪಂಜಾಬ್ನಲ್ಲಿ ನವೆಂಬರ್ 27ರವರೆಗೆ ದಟ್ಟ ಮಂಜು ಸಾಧ್ಯತೆ. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 26ರವರೆಗೆ ದಟ್ಟ ಮಂಜು ಮುನ್ಸೂಚನೆ ಇದೆ. ಅಲ್ಲದೇ ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ನವೆಂಬರ್ 26ರಿಂದ 27ರವರೆಗೆ ದಟ್ಟ ಮಂಜು ಆವರಿಸುವ ಸಾಧ್ಯತೆ.

ದಟ್ಟ ಮಂಜಿನಿಂದಾಗಿ ವಿಮಾನ ನಿಲ್ದಾಣಗಳು, ಹೆದ್ದಾರಿಗಳು ಮತ್ತು ರೈಲು ಮಾರ್ಗಗಳಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಬಹುದು. ವಾಹನಗಳ ಗೋಚರತೆ ಕಡಿಮೆಯಾಗಿ ಪ್ರಯಾಣದ ಅವಧಿ ಹೆಚ್ಚಾಗುವ ಸಾಧ್ಯತೆಯಿದೆ. ವಿದ್ಯುತ್ ತಂತಿಗಳಲ್ಲಿ ತಾಂತ್ರಿಕ ಸಮಸ್ಯೆಗಳು ಉಂಟಾಗುವ ಅಪಾಯವೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕು. ಮಂಜು ದೀಪಗಳನ್ನು ಬಳಸಬೇಕು. ವಿಮಾನ, ರೈಲು ಮತ್ತು ಬಸ್ ಪ್ರಯಾಣಿಕರು ತಮ್ಮ ಪ್ರಯಾಣದ ವೇಳಾಪಟ್ಟಿಯನ್ನು ಮುಂಚಿತವಾಗಿ ಪರಿಶೀಲಿಸಿಕೊಳ್ಳುವಂತೆ ಸೂಚಿಸಲಾಗಿದೆ.

ದಟ್ಟ ಮಂಜು ಆರೋಗ್ಯದ ಮೇಲೂ ಪರಿಣಾಮ ಬೀರಬಹುದು. ಕೆಮ್ಮು, ಉಸಿರಾಟದ ತೊಂದರೆ, ಕಣ್ಣಿನ ಉರಿ ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ವಿಶೇಷವಾಗಿ ಆಸ್ತಮಾ ಮತ್ತು ಬ್ರಾಂಕೈಟಿಸ್‌ನಿಂದ ಬಳಲುತ್ತಿರುವವರು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಅನಿವಾರ್ಯವಲ್ಲದಿದ್ದರೆ ಹೊರಗೆ ಹೋಗುವುದನ್ನು ತಪ್ಪಿಸಿ, ಹೊರಗೆ ತೆರಳುವಾಗ ಮುಖವನ್ನು ಮುಚ್ಚಿಕೊಳ್ಳುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+