Imd Weather: ಈ ಭಾಗಗಳಲ್ಲಿ ಜೂನ್ 4ರ ವರೆಗೆ ಭಾರೀ ಮಳೆ: ವೆದರ್ ರಿಪೋರ್ಟ್

Imd Weather: ಮೇಲ್ಮೈ ಸುಳಿಗಾಳಿ ಸೇರಿದಂತೆ ಹವಾಮಾನ ವೈಪರೀತ್ಯದಿಂದ ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಲೆ ಮುಂದುವರಿದಿದೆ. ದೆಹಲಿ-ಎನ್‌ಸಿಆರ್ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಮಳೆಯಾಗುತ್ತಿದೆ. ಆದಾಗ್ಯೂ, ಅನೇಕ ಪ್ರದೇಶಗಳು ಇನ್ನೂ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಭಾರತದ ವಿವಿಧ ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ಗಡಿಯನ್ನು ದಾಟಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಜೂನ್ 3ರ ವರೆಗೆ ಕರ್ನಾಟಕದ ದಕ್ಷಿಣ ಒಳನಾಡು, ಆಂಧ್ರಪ್ರದೇಶದ ಕರಾವಳಿ ಮತ್ತು ಯಾಣಂ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಹಾಗೂ ಜೂನ್ 5 ರವರೆಗೆ ಕೇರಳ ಮತ್ತು ಲಕ್ಷದ್ವೀಪದಲ್ಲಿ ಭಾರೀ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಪಂಜಾಬ್, ಹರಿಯಾಣ, ಚಂಡೀಗಢ ಹಾಗೂ ಉತ್ತರ ಪ್ರದೇಶ ಭಾಗದಲ್ಲೂ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಜೂನ್ 4 ರವರೆಗೆ ಕೊಂಕಣ ಮತ್ತು ಗೋವಾದಲ್ಲಿ ಮಿಂಚು - ಗುಡುಗು ಸಹಿತ ಗಂಟೆಗೆ 40ರಿಂದ50 ಕಿ.ಮೀ ವೇಗದಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ ಜೂನ್ 4 ರವರೆಗೆ ಮರಾಠವಾಡದಲ್ಲಿ ಜೂನ್ 3 ರವರೆಗೆ, ಗುಜರಾತ್ ರಾಜ್ಯದಾದ್ಯಂತ ಜೂನ್ 5 ರವರೆಗೆ ಮಳೆ ಇರಲಿದೆ. ದೆಹಲಿ-ಎನ್‌ಸಿಆರ್‌ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಭಾಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮಿಂಚು - ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಸಂಜೆ ವೇಳೆಗೆ ಗಂಟೆಗೆ 40ರಿಂದ50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ದೆಹಲಿಯಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 36 ಡಿಗ್ರಿ ಸೆಲ್ಸಿಯಸ್‌ನಿಂದ 38 ಡಿಗ್ರಿ ಸೆಲ್ಸಿಯಸ್ ಇಲಿದೆ. ಕನಿಷ್ಠ ತಾಪಮಾನವು 23 ಡಿಗ್ರಿ ಸೆಲ್ಸಿಯಸ್‌ನಿಂದ 25 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ಇರುವ ಸಾಧ್ಯತೆ ಇದೆ.

Imd Weather

ದೆಹಲಿಯ ಹೆಚ್ಚಿನ ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ (-3.1 ಡಿಗ್ರಿ ಸೆಲ್ಸಿಯಸ್‌ನಿಂದ -5.0 ಡಿಗ್ರಿ ಸೆಲ್ಸಿಯಸ್) ಗಮನಾರ್ಹವಾಗಿ ಕಡಿಮೆ ಇರುತ್ತದೆ. ಪ್ರಧಾನ ಮೇಲ್ಮೈ ಗಾಳಿಯು ಆಗ್ನೇಯ ದಿಕ್ಕಿನಿಂದ ಬೀಸುವ ಸಾಧ್ಯತೆಯಿದೆ. ಬೆಳಿಗ್ಗೆ ಸಮಯದಲ್ಲಿ ಮೇಲ್ಮೈ ಗಾಳಿಯ ವೇಗ ಗಂಟೆಗೆ 25 ಕಿ.ಮೀ.ವರೆಗೆ ತಲುಪಲಿದೆ. ಮಧ್ಯಾಹ್ನದ ಸಮಯದಲ್ಲಿ ಮೇಲ್ಮೈ ಗಾಳಿಯ ವೇಗವು ಆಗ್ನೇಯ ದಿಕ್ಕಿನಿಂದ ಗಂಟೆಗೆ 22 ಕಿ.ಮೀ.ಗಿಂತ ಕಡಿಮೆಯಾಗುವ ಸಾಧ್ಯತೆ ಇದೆ. ಸಂಜೆ ಮತ್ತು ರಾತ್ರಿಯ ಸಮಯದಲ್ಲಿ ಮೇಲ್ಮೈ ಗಾಳಿಯ ವೇಗವು ಆಗ್ನೇಯ ದಿಕ್ಕಿನಿಂದ ಗಂಟೆಗೆ 15 ಕಿ.ಮೀ.ಗಿಂತ ಕಡಿಮೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

ಈಶಾನ್ಯ ರಾಜ್ಯಗಳಲ್ಲಿ ಮಿಂಚು ಗುಡುಗು ಸಹಿತ ಮಳೆ ಮತ್ತು ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಜೂನ್ 1 ರವರೆಗೆ ಬಿಹಾರದಲ್ಲಿ ಜೂನ್ 2 ರಿಂದ 5ರ ನಡುವೆ ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ, ಜೂನ್ 5 ರವರೆಗೆ ಜಾರ್ಖಂಡ್ ಮತ್ತು ಒಡಿಶಾದಲ್ಲಿ ಮಳೆ ಇರಲಿದೆ. ಮುಂದುವರಿದು ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಉತ್ತರ ಪ್ರದೇಶದಲ್ಲಿ ಜೂನ್ 1 ರವರೆಗೆ ಮಿಂಚು ಮತ್ತು ಗುಡುಗು ಸಹಿತ ಗಂಟೆಗೆ 40ರಿಂದ 50 ಕಿ.ಮೀ ವೇಗ ಚದುರಿದಂತೆ ಹಗುರದಿಂದ ಕೂಡಿದ ಮಳೆ ಆಗಲಿದೆ.

ದಕ್ಷಿಣ ಭಾರತದಲ್ಲಿ ಹೇಗಿದೆ ಹವಾಮಾನ

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲೂ ಜೂನ್ 6ರ ವರೆಗೆ ಮಳೆ ಆಗಲಿದೆ. ಕೇರಳದಲ್ಲೂ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+