Imd Weather Report: ಕರ್ನಾಟಕ ಸೇರಿ ದೇಶದ ಈ ರಾಜ್ಯಗಳಲ್ಲಿ ಧಾರಾಕಾರ ಮಳೆ: ಈ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ!
Imd Weather Report: ದೇಶದಾದ್ಯಂತ ಮಳೆ ಆರ್ಭಟ ಜೋರಾಗಿದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ದೇಶದ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಸಹ ಘೋಷಿಸಲಾಗಿದೆ. ದೇಶದ ವಿವಿಧ ಭಾಗದಲ್ಲಿ ಸೈಕ್ಲೋನ್ ಪ್ರಭಾವದಿಂದಾಗಿ ವರುಣಾರ್ಭಟ ಜೋರಾಗಿದೆ. ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಿಂದಾಗಿ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ಮೇಲೆ ಪರಿಣಾಮ ಬೀರಿದೆ. ಎಲ್ಲೆಲ್ಲಿ ಮಳೆ ಆಗುತ್ತಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮಹಾರಾಷ್ಟ್ರದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಧಾರಾಕಾರ ಮಳೆಯಿಂದಾಗಿ, ವಿವಿಧ ಜಲಾಯಶಗಳ ನೀರಿನ ಮಟ್ಟ ಹೆಚ್ಚಳವಾಗಿದ್ದು, ಇದರ ಪ್ರಭಾವ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭಾಗದಲ್ಲೂ ಆಗಿದೆ. ಮಹಾರಾಷ್ಟ್ರದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ವಿವಿಧ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮಹಾರಾಷ್ಟ್ರದ ನಾಶಿಕ್, ಪಾಲ್ಘರ್, ಥಾಣೆ, ಮುಂಬೈ ಸಿಟಿ, ಮುಂಬೈ ಸಬರ್ಬನ್, ರಾಯಗಢ ಹಾಗೂ ಪುಣೆ ನಗರ ಪ್ರದೇಶಗಳಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಈ ಭಾಗದಲ್ಲಿ ಇನ್ನೂ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಿಂಚು - ಗುಡುಗು ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಉಲ್ಲೇಖಿಸಿದೆ.
ಮಹಾರಾಷ್ಟ್ರದ ಇನ್ನುಳಿದ ಪ್ರಮುಖ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ ಒಂದು ವಾರದಿಂದಲೂ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು. ಮಳೆಯಿಂದಾಗಿ ಮಹಾರಾಷ್ಟ್ರದಲ್ಲಿ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ನಗರ ಮತ್ತು ಉಪನಗರಗಳಲ್ಲಿ ಭಾರೀ ಮಳೆ ಮುಂದುವರಿದಿರುವುದರಿಂದ ಲೋಕಲ್ ರೈಲು ಸೇವೆಯಲ್ಲಿ ವ್ಯತ್ಯಾಸವಾಗಿದೆ.
ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಇನ್ನು ಮಹಾರಾಷ್ಟ್ರ ಸೇರಿದಂತೆ ದೇಶದ ಹಲವು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿವಿಧ ಭಾಗದಲ್ಲಿ ಮಳೆಯ ಕಾರಣಕ್ಕೆ ಶಾಲಾ - ಕಾಲೇಜುಗಳಿಗೆ ಸೋಮವಾರ - ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ ವಿವಿಧ ಭಾಗದಲ್ಲೂ ಮಂಗಳವಾರ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ.
ಇನ್ನು ಗುಜರಾತ್‌ನಲ್ಲೂ ಭಾರೀ ಮಳೆ ಮುಂದುವರಿದಿದೆ. ಗುಜರಾತ್ ಮತ್ತು ಮಹಾರಾಷ್ಟ್ರದ ಹೆಚ್ಚಿನ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿರುವುದಾಗಿ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಒಣಹವೆ ಮುಂದುವರಿದಿದೆ. ಅರುಣಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಉತ್ತರ ಭಾರತದ ಇತರ ಭಾಗಗಳಲ್ಲಿ ಮಳೆ ಸಾಧಾರಣವಾಗಿ ಆಗಲಿದೆ. ಬಹುತೇಕ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ದೇಶದ ವಿವಿಧ ಭಾಗದಲ್ಲಿ ಮಾನ್ಸೂನ್ ಸಾಮಾನ್ಯವಾಗಿದೆ. ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ಉತ್ತರಾಖಂಡ್‌ಗಳಿಂದ ಹಾಗೂ ದೆಹಲಿ, ಹರಿಯಾಣ, ರಾಜಸ್ಥಾನ, ಗುಜರಾತ್ ಮತ್ತು ಮಧ್ಯಪ್ರದೇಶದಲ್ಲಿ ಅಕ್ಟೋಬರ್ 15 ರ ವೇಳೆಗೆ ಭಾರತದಾದ್ಯಂತ ಮಾನ್ಸೂನ್ ಕಡಿಮೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.












Click it and Unblock the Notifications