Imd Weather Forcaste: ಚಂಡಮಾರುತ ಪ್ರಸರಣ, ವಾಯುಭಾರ ಕುಸಿತ; ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ
Imd Weather Forcaste: ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಮುಂಗಾರು ಮಾರುತಗಳ ಟ್ರಫ್ (monsoon trough) ಅಸ್ತವ್ಯಸ್ತವಾಗಿದ್ದು, ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ.
19 ಸೆಪ್ಟೆಂಬರ್ 2026 ರ ಸುಮಾರಿಗೆ ಪಶ್ಚಿಮ ರಾಜಸ್ಥಾನದ ಕೆಲವು ಭಾಗಗಳಿಂದ ನೈಋತ್ಯ ಮುಂಗಾರು ವಾಪಸಾತಿಗೆ ಅನುಕೂಲಕರ ಪರಿಸ್ಥಿತಿಗಳು ನಿರ್ಮಾಣವಾಗುತ್ತಿವೆ. ಉತ್ತರ ಥೈಲ್ಯಾಂಡ್‌ನ ಮೇಲ್ಭಾಗದಲ್ಲಿ ಕಂಡುಬಂದಿದ್ದ ವಾಯುಭಾರ ಕುಸಿತದ ಸುಳಿಗಾಳಿಯು (Cyclonic circulation) ಅದೇ ಪ್ರದೇಶದಲ್ಲಿ ಮುಂದುವರಿದಿದ್ದು, ಈಗ ಸರಾಸರಿ ಸಮುದ್ರ ಮಟ್ಟದಿಂದ 9.4 ಕಿ.ಮೀ ಎತ್ತರದವರೆಗೆ ವ್ಯಾಪಿಸಿದೆ. ಇದು 18 ಸೆಪ್ಟೆಂಬರ್ ಸಂಜೆಯ ವೇಳೆಗೆ ಉತ್ತರ ಅಂಡಮಾನ್ ಸಮುದ್ರದತ್ತ ಚಲಿಸುವ ಸಾಧ್ಯತೆಯಿದೆ ಮತ್ತು ಇದರ ಪ್ರಭಾವದಿಂದ 19 ಸೆಪ್ಟೆಂಬರ್ 2026 ರ ಸಂಜೆಯ ವೇಳೆಗೆ ಅದೇ ಪ್ರದೇಶದಲ್ಲಿ ಕಡಿಮೆ ಒತ್ತಡದ ಪ್ರದೇಶವೊಂದು ರೂಪುಗೊಳ್ಳುವ ಸಾಧ್ಯತೆಯಿದೆ.

ಇದು ಕ್ರಮೇಣ ತೀವ್ರಗೊಂಡು ಮುಂದಿನ 3-4 ದಿನಗಳಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ದಕ್ಷಿಣ ಒಡಿಶಾ ಮತ್ತು ಉತ್ತರ ಆಂಧ್ರಪ್ರದೇಶ ಕರಾವಳಿಯತ್ತ ಚಲಿಸುವ ಸಾಧ್ಯತೆಯಿದೆ. ಉತ್ತರ ಒಳನಾಡು ತಮಿಳುನಾಡು ಮತ್ತು ಅದರ ನೆರೆಯ ಪ್ರದೇಶಗಳ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 4.5 ಕಿ.ಮೀ ಎತ್ತರದಲ್ಲಿ ವಾಯುಭಾರ ಕುಸಿತದ ಸುಳಿಗಾಳಿಯು ಮುಂದುವರಿದಿದೆ. ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ, ಮರಾಠವಾಡದಿಂದ ಒಳನಾಡು ಕರ್ನಾಟಕ ಮತ್ತು ಕೇರಳದ ಮೂಲಕ ಆಗ್ನೇಯ ಅರೇಬಿಯನ್ ಸಮುದ್ರದವರೆಗೆ ವಾಯುಭಾರ ಕುಸಿತದ ಟ್ರಫ್ (trough) ವ್ಯಾಪಿಸಿದೆ. ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ, ಮರಾಠವಾಡ ಮತ್ತು ನೆರೆಯ ಪ್ರದೇಶಗಳ ಮೇಲಿನ ವಾಯುಭಾರ ಕುಸಿತದ ಸುಳಿಗಾಳಿಯಿಂದ ಒಳನಾಡು ಕರ್ನಾಟಕ ಮತ್ತು ತಮಿಳುನಾಡಿನ ಮೂಲಕ ಮನ್ನಾರ್ ಕೂಲ್ಲಿಯವರೆಗೆ ವ್ಯಾಪಿಸಿದ್ದ ವಾಯುಭಾರ ಕುಸಿತದ ಟ್ರಫ್ ಈಗ ದುರ್ಬಲಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Imd Weather Forcaste: ಈ ಪ್ರದೇಶಗಳಲ್ಲಿ ಭಾರೀ ಮಳೆ
ಸೆಪ್ಟೆಂಬರ್ 19ರ ಶನಿವಾರ ಪೂರ್ವ ಮತ್ತು ದಕ್ಷಿಣ ಭಾರತದ ಹಲವಾರು ಭಾಗಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ, ಆದರೆ ದೆಹಲಿಯು ಭಾಗಶಃ ಮೋಡ ಕವಿದ ವಾತಾವರಣದೊಂದಿಗೆ ಬೆಚ್ಚಗಿರುವ ಸಾಧ್ಯತೆ ಇದೆ. ಕರ್ನಾಟಕದಾದ್ಯಂತ ಮಳೆ ಮುಂದುವರಿದಂತೆ ಬೆಂಗಳೂರಿನಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ರಾಜಸ್ಥಾನ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಶನಿವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಈ ಪ್ರದೇಶಗಳಲ್ಲಿ ಹಲವು ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ ಭಾರೀ ಮಳೆ ಆಗಿದೆ. ಒಡಿಶಾದಲ್ಲಿ ಭಾರೀ ಮಳೆ ಮುಂದುವರಿದಿದೆ. ಬೆಂಗಳೂರು ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನ ಇತರ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಶನಿವಾರದಿಂದ ಸೆಪ್ಟೆಂಬರ್ 24 ರವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಈ ಅವಧಿಯಲ್ಲಿ ಕರ್ನಾಟಕದ ಕೆಲವು ಭಾಗಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಶನಿವಾರ ಮತ್ತು ಭಾನುವಾರ ಮುಂಬೈನಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ. ಕೊಂಕಣ ಮತ್ತು ಗೋವಾದಲ್ಲಿ ಮಳೆ ಆಗುವ ಸಾಧ್ಯತೆ ಇದೆ. ದೆಹಲಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನವು 34 ಡಿಗ್ರಿ ಸೆಲ್ಸಿಯಸ್‌ನಿಂದ 36 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್‌ನಿಂದ 24 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಅಂಡಮಾನ್ ಸಮುದ್ರದಲ್ಲಿ ಹೊಸ ಹವಾಮಾನ ವ್ಯವಸ್ಥೆ ರೂಪುಗೊಳ್ಳುತ್ತಿದ್ದು, ಶನಿವಾರ ಸಂಜೆ ಒಡಿಶಾ-ಆಂಧ್ರಪ್ರದೇಶ ಕರಾವಳಿಯತ್ತ ಸಾಗುವ ಮೊದಲು ಕಡಿಮೆ ಒತ್ತಡದ ಪ್ರದೇಶವಾಗಿ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಇನ್ನು ಶನಿವಾರ ಸಂಜೆಯಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.


Click it and Unblock the Notifications
