IMD Weather Forecast: ವಾಯುಭಾರ ಕುಸಿತ ಪ್ರಭಾವ: ದೇಶದ ಈ ಭಾಗಗಳಲ್ಲಿ ಅಕ್ಟೋಬರ್ 11ರ ವರೆಗೆ ಭಾರೀ ಮಳೆ!
ಕರ್ನಾಟಕವೂ ಸೇರಿದಂತೆ ಭಾರತದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಅಕ್ಟೋಬರ್ 7ರ ಬುಧವಾರ ಭಾರತದ ಹಲವು ಭಾಗಗಳಲ್ಲಿ ಪ್ರತಿಕೂಲ ಹವಾಮಾನ ಉಂಟಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೇಶದ ವಿವಿಧ ಭಾಗದಲ್ಲಿ ಹವಾಮಾನ ಪರಿಸ್ಥಿತಿ ಭಿನ್ನವಾಗಿದೆ.
ಉತ್ತರ ಪ್ರದೇಶದ ಆಗ್ನೇಯ ಭಾಗ, ಒಡಿಶಾ, ಪಶ್ಚಿಮ ಬಂಗಾಳ, ಅರೇಬಿಯನ್ ಸಮುದ್ರ ಮತ್ತು ಕೇರಳದ ಮೇಲಿನ ವಾಯುಭಾರ ಬದಲಾವಣೆ ಹಾಗೂ ಮಧ್ಯ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ವಾಯುಭಾರ ಕುಸಿತ ಪ್ರಭಾವದಿಂದಾಗಿ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿದಿದೆ.

ಪಶ್ಚಿಮದ ವಾಯುಭಾರ ಕುಸಿತವು ಪಶ್ಚಿಮದ ಹಿಮಾಲಯ ಪ್ರದೇಶದ ಮೇಲಿನ ಹವಾಮಾನದ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಉತ್ತರ ಭಾರತದಲ್ಲಿ ಮಿಂಚು - ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಹಗುರದಿಂದ ಕೂಡಿದ ಮಧ್ಯಮ ಮಳೆ ಮತ್ತು ಪ್ರತ್ಯೇಕವಾಗಿ ಹಿಮಪಾತವಾಗುವ ಸಾಧ್ಯತೆ ಇದೆ.
ಹಿಮಾಲಯ ಪ್ರದೇಶದಲ್ಲಿ ಮಿಂಚು - ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಮಿಂಚು ಗುಡುಗು ಸಹಿತ ಮಳೆ ಆಗಲಿದ್ದು, ಪ್ರತಿ ಗಂಟೆಗೆ 50-60 ಕಿ.ಮೀ ವೇಗದ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್‌ನಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು. ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಬಹುದು. ಉತ್ತರ ಪ್ರದೇಶದ ಆಗ್ನೇಯ ಮತ್ತು ಮಧ್ಯಪ್ರದೇಶದ ಪಕ್ಕದ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಬಿಹಾರದಲ್ಲೂ ಭಾರೀ ಮಳೆ ಮುಂದುವರಿದಿದೆ. ಈ ಅವಧಿಯಲ್ಲಿ ನಾಗಾಲ್ಯಾಂಡ್ ಮತ್ತು ಮಣಿಪುರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸಿಕ್ಕಿಂ ಮತ್ತು ಪಕ್ಕದ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ಪೂರ್ವ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಮಿಂಚು - ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕವೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ
ಇನ್ನು ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು ಮತ್ತು ಕೇರಳದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹಲವು ಪ್ರದೇಶಗಳಲ್ಲಿ ಮಿಂಚು - ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡು ಮತ್ತು ಕೇರಳದ ಕೆಲವು ಭಾಗಗಳಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸಬಹುದು ಎಂದು ಹೇಳಲಾಗಿದೆ. ಅಕ್ಟೋಬರ್ 8 ಮತ್ತು 10 ರವರೆಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ. ತಮಿಳುನಾಡು, ಕೇರಳ ಮತ್ತು ಪೂರ್ವ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.


Click it and Unblock the Notifications
