Imd Weather Forecast: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರಭಾವ: ಈ ಭಾಗಗಳಲ್ಲಿ ಸೆಪ್ಟೆಂಬರ್ 23ರ ವರೆಗೆ ಭಾರೀ ಮಳೆ!

ಬೆಂಗಳೂರು ಹಾಗೂ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಚಂಡಮಾರುತ ಪ್ರಸರಣ ಹಾಗೂ ವಾಯುಭಾರ ಕುಸಿತದ ಪ್ರಭಾವದಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದೆ.

ಮುಂದಿನ 2 ರಿಂದ 3 ದಿನಗಳಲ್ಲಿ ರಾಜಸ್ಥಾನದ ಇನ್ನೂ ಕೆಲವು ಭಾಗಗಳು ಹಾಗೂ ಪಂಜಾಬ್ ಮತ್ತು ಸೌರಾಷ್ಟ್ರ-ಕಚ್‌ನ ಕೆಲವು ಭಾಗಗಳಿಂದ ನೈಋತ್ಯ ಮುಂಗಾರು ಮತ್ತಷ್ಟು ಹಿಮ್ಮೆಟ್ಟಲು ಪೂರಕವಾದ ವಾತಾವರಣವಿದೆ. ಉತ್ತರ ಅಂಡಮಾನ್ ಸಮುದ್ರ ಮತ್ತು ಅದನ್ನು ಹೊಂದಿಕೊಂಡಿರುವ ಪೂರ್ವ-ಮಧ್ಯ ಬಂಗಾಳ ಕೊಲ್ಲಿಯ ಮೇಲಿದ್ದ ವಾಯುಭಾರ ಕುಸಿತದ ಪ್ರದೇಶವು ಪಶ್ಚಿಮ-ವಾಯುವ್ಯ ದಿಕ್ಕಿಗೆ ಚಲಿಸಿದೆ. ಸೆಪ್ಟೆಂಬರ್ 20ರಂದು ಇದು ಪೂರ್ವ-ಮಧ್ಯ ಬಂಗಾಳ ಕೊಲ್ಲಿ ಮತ್ತು ಅದನ್ನು ಹೊಂದಿಕೊಂಡಿರುವ ಉತ್ತರ ಅಂಡಮಾನ್ ಸಮುದ್ರದ ಮೇಲೆ ನೆಲೆಗೊಂಡಿತ್ತು.

IMD Weather Forecast Bay of Bengal Depression Effect Heavy Rain Likely in These Areas Till September 23

ಇದು ಪಶ್ಚಿಮ - ವಾಯುವ್ಯ ದಿಕ್ಕಿಗೆ ಚಲಿಸುವುದನ್ನು ಮುಂದುವರಿಸಿ, ಸೆಪ್ಟೆಂಬರ್ 21 ರಂದು ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಅಲ್ಪ ತೀವ್ರತೆಯ ವಾಯುಭಾರ ಕುಸಿತವಾಗಿ (depression) ಮತ್ತು ಸೆಪ್ಟೆಂಬರ್ 22 ರಂದು ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯಲ್ಲಿ "ತೀವ್ರ ವಾಯುಭಾರ ಕುಸಿತ'ವಾಗಿ (deep depression) ಕ್ರಮೇಣ ಬಲಗೊಳ್ಳುವ ಸಾಧ್ಯತೆಯಿದೆ. ಇದೇ ದಿಕ್ಕಿನಲ್ಲಿ ಚಲಿಸುವುದನ್ನು ಮುಂದುವರಿಸಿ, ಸೆಪ್ಟೆಂಬರ್ 23 ರ ಬೆಳಗಿನ ವೇಳೆಗೆ ಇದು ಉತ್ತರ ಆಂಧ್ರಪ್ರದೇಶ - ದಕ್ಷಿಣ ಒಡಿಶಾ ಕರಾವಳಿಯ ಸಮೀಪವಿರುವ ಪಶ್ಚಿಮ-ಮಧ್ಯ ಮತ್ತು ಅದನ್ನು ಹೊಂದಿಕೊಂಡಿರುವ ವಾಯುವ್ಯ ಬಂಗಾಳ ಕೊಲ್ಲಿಯನ್ನು ತಲುಪುವ ಸಾಧ್ಯತೆಯಿದೆ.

ಪೂರ್ವ-ಪಶ್ಚಿಮ ಟ್ರಫ್ (East-West trough) ರೇಖೆಯು ಪೂರ್ವ-ಮಧ್ಯ ಬಂಗಾಳ ಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರದ ಮೇಲಿನ ವಾಯುಭಾರ ಕುಸಿತಕ್ಕೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಯಿಂದ (Cyclonic circulation) ಪ್ರಾರಂಭವಾಗಿ, ಮಧ್ಯ ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಮೂಲಕ ದಕ್ಷಿಣ ಒಳನಾಡು ಕರ್ನಾಟಕದವರೆಗೆ ವ್ಯಾಪಿಸಿದೆ. ಇದು ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದವರೆಗೆ ವಿಸ್ತರಿಸಿದ್ದು, ಎತ್ತರಕ್ಕೆ ಹೋದಂತೆ ದಕ್ಷಿಣದ ಕಡೆಗೆ ವಾಲಿಕೊಂಡಿದೆ.

ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ, ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ಅದನ್ನು ಹೊಂದಿಕೊಂಡಿರುವ ಪಶ್ಚಿಮ-ಮಧ್ಯ ಬಂಗಾಳ ಕೂಲ್ಲಿಯ ಮೇಲೆ ಮೇಲೆ ವಾಯುಮಂಡಲದಲ್ಲಿ ಚಂಡಮಾರುತದ ಪರಿಚಲನೆ (upper air cyclonic circulation) ಕಂಡುಬರುತ್ತಿದೆನ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಭಾರೀ ಮಳೆ

ಇನ್ನು ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ದಕ್ಷಿಣ ಭಾರತದ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ ಮಳೆ ಆರ್ಭಟ ಮುಂದುವರಿದಿದೆ. ದಕ್ಷಿಣ ಭಾರತದ ಹಲವಾರು ಭಾಗಗಳು ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸೆಪ್ಟೆಂಬರ್ 23ರ ವರೆಗೆ ಭಾರೀ ಮಳೆ ಇರಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಆಂಧ್ರಪ್ರದೇಶದ ಕರಾವಳಿ, ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ತೆಲಂಗಾಣದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

ಈ ಪ್ರದೇಶಗಳಲ್ಲಿ ಮಿಂಚು ಮತ್ತು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ, ಮಧ್ಯ ಭಾರತದಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಇನ್ನು ರಾಜಸ್ಥಾನ, ಪಶ್ಚಿಮ ಬಂಗಾಳ, ಜಾರ್ಖಂಡ್, ಕೊಂಕಣ ಮತ್ತು ಗೋವಾ, ಮಧ್ಯಪ್ರದೇಶ, ಈಶಾನ್ಯ ಭಾರತದ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಮತ್ತು ನಾಗಾಲ್ಯಾಂಡ್-ಮಣಿಪುರ-ಮಿಜೋರಾಮ್-ತ್ರಿಪುರ ಪ್ರದೇಶಗಳು ಭಾರೀ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಪಶ್ಚಿಮ ಬಂಗಾಳದಲ್ಲಿ ಚಂಡಮಾರುತ ಪರಿಚಲನೆ

ಉತ್ತರ ಅಂಡಮಾನ್ ಸಮುದ್ರ ಮತ್ತು ಸುತ್ತಮುತ್ತಲಿನ ಪ್ರದೇಶದ ಮೇಲಿದ್ದ ಕಡಿಮೆ ಒತ್ತಡದ ಪ್ರದೇಶವು (Low Pressure Area) ಪಶ್ಚಿಮ-ವಾಯುವ್ಯ ದಿಕ್ಕಿನತ್ತ ಚಲಿಸಿ, ಸೆಪ್ಟೆಂಬರ್ 20ರ ಬೆಳಿಗ್ಗೆ 5:30ಕ್ಕೆ ಉತ್ತರ ಅಂಡಮಾನ್ ಸಮುದ್ರ ಮತ್ತು ಅದಕ್ಕೆ ಹೊಂದಿಕೊಂಡಿರುವ ಪೂರ್ವ-ಮಧ್ಯ ಬಂಗಾಳ ಕೊಲ್ಲಿಯ ಮೇಲ್ಭಾಗದಲ್ಲಿ ನೆಲೆಸಿದೆ. ಇದರೊಂದಿಗೆ ಸಂಯೋಜಿತವಾಗಿರುವ ಪರಿಚಲನೆಯು (Cyclonic Circulation) ಸರಾಸರಿ ಸಮುದ್ರ ಮಟ್ಟದಿಂದ 5.8 ಕಿಮೀ ಎತ್ತರದವರೆಗೆ ವಿಸ್ತರಿಸಿದೆ.

ಇದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಮತ್ತು ಕ್ರಮೇಣ ತೀವ್ರಗೊಂಡು ಸೆಪ್ಟೆಂಬರ್ 21 ರಂದು ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ (Depression) ಹಾಗೂ ಸೆಪ್ಟೆಂಬರ್ 22 ರಂದು ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತವಾಗಿ (Deep Depression) ಮಾರ್ಪಡುವ ಸಾಧ್ಯತೆಯಿದೆ. ಇದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ತನ್ನ ಚಲನೆಯನ್ನು ಮುಂದುವರಿಸಿ, ಸೆಪ್ಟೆಂಬರ್ 23 ರ ಬೆಳಿಗ್ಗೆ ದಕ್ಷಿಣ ಒಡಿಶಾ-ಉತ್ತರ ಆಂಧ್ರಪ್ರದೇಶದ ಕರಾವಳಿಯ ಸಮೀಪವಿರುವ ಪಶ್ಚಿಮ-ಮಧ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ವಾಯುವ್ಯ ಬಂಗಾಳ ಕೊಲ್ಲಿಯನ್ನು ತಲುಪುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ವ್ಯವಸ್ಥೆಯ (ಹವಾಮಾನ ಸ್ಥಿತಿಯ) ಪ್ರಭಾವದಿಂದಾಗಿ, 20.09.2026 ರಿಂದ 24.09.2026 ರ ಅವಧಿಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದೂ ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+