Imd Weather Forecast: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: 19 ರಾಜ್ಯಗಳಲ್ಲಿ 4 ದಿನ ಭಾರೀ ಮಳೆ: ಐಎಂಡಿ ಮುನ್ಸೂಚನೆ

Imd Weather Forecast: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತ ಪ್ರಸರಣ ಪ್ರಭಾವದಿಂದ ಕರ್ನಾಟಕವೂ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇನ್ನೂ ಮೂರರಿಂದ ನಾಲ್ಕು ದಿನಗಳ ವರೆಗೆ ಭಾರತದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದಲೂ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಆಗಸ್ಟ್‌ ಮೊದಲವಾರದಿಂದಲೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗುತಿದ್ದರೂ, ಜೂನ್ 4 ರಿಂದ ಭಾರತದ ಒಟ್ಟು ಮಳೆಯ ಪ್ರಮಾಣವು ಸಾಮಾನ್ಯಕ್ಕಿಂತ 13% ಕಡಿಮೆಯಾಗಿದೆ ಎಂದು ಭಾರತ ಹವಾಮಾನ ಇಲಾಖೆಯ (IMD) ಹೊಸ ಡೇಟಾ ಬಹಿರಂಗಪಡಿಸಿ ಇದು ಈ ವರ್ಷದ ಮಾನ್ಸೂನ್ ಋತುವಿನ ಮಳೆ ಕೊರತೆಯನ್ನು ತೋರಿಸುತ್ತದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರಭಾವದಿಂದ ಮಳೆಯಾಗಿದೆ. ಚಂಡಮಾರುತದ ಪರಿಚಲನೆ ಸರಾಸರಿ ಸಮುದ್ರಮಟ್ಟದಿಂದ ಸುಮಾರು 7.6 ಕಿ.ಮೀ. ಎತ್ತರದವರೆಗೆ ವಿಸ್ತರಿಸಿದ್ದು, ಎತ್ತರ ಹೆಚ್ಚಾದಂತೆ ನೈಋತ್ಯ ದಿಕ್ಕಿನತ್ತ ವಾಲಿದೆ. ಇದು ಮುಂದಿನ 24 ಗಂಟೆಗಳಲ್ಲಿ ವಾಯವ್ಯ ದಿಕ್ಕಿನತ್ತ ಚಲಿಸಿ ಮತ್ತಷ್ಟು ಬಲಗೊಳ್ಳುವ ಸಾಧ್ಯತೆ ಇದೆ. ವಾಯವ್ಯ ಬಂಗಾಳ ಕೊಲ್ಲಿ ಮತ್ತು ಪಶ್ಚಿಮ ಬಂಗಾಳ-ಉತ್ತರ ಒಡಿಶಾ ಕರಾವಳಿಗೆ ಹೊಂದಿಕೊಂಡಿರುವ ಕಡಿಮೆ ಒತ್ತಡದ ಪ್ರದೇಶದ ಕೇಂದ್ರದ ಮೂಲಕ ಸಾಗುತ್ತದೆ. ನಂತರ ಆಕ್ಷೇಯ ದಿಕ್ಕಿನಲ್ಲಿ ಮಧ್ಯ-ಪೂರ್ವ ಬಂಗಾಳ ಕೊಲ್ಲಿಯವರೆಗೆ ವಿಸ್ತರಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Imd Weather Forecast

Imd Weather Forecast: 4 ದಿನ ಭಾರೀ ಮಳೆ: ಐಎಂಡಿ

ಮುಂಬರುವ ದಿನಗಳಲ್ಲಿ ಪಂಜಾಬ್, ಹರಿಯಾಣ, ದೆಹಲಿ-ಎನ್‌ಸಿಆರ್ ಹಾಗೂ ರಾಜಸ್ಥಾನ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆ ಮುಂದುವರಿಯಲಿದೆ. ದೆಹಲಿ -ಎನ್‌ಸಿಆರ್‌ನಲ್ಲಿ ಸೋಮವಾರದಿಂದ ಮಿಂಚು ಗುಡುಗು ಸಹಿತ ಭಾರೀ ಮಳೆ ಆಗಲಿದೆ. ಅಲ್ಲದೆ ಗರಿಷ್ಠ ತಾಪಮಾನ ಸುಮಾರು 34 ಡಿಗ್ರಿ ಸೆಲ್ಸಿಯಸ್ ಇರಲಿದೆ. ಅಲ್ಲದೆ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ಅಲ್ಲದೆ ದೆಹಲಿಯಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮಧ್ಯಪ್ರದೇಶ, ಛತ್ತೀಸ್‌ಗಢ, ಕೇರಳ, ಗುಜರಾತ್ ಮತ್ತು ಮಹಾರಾಷ್ಟ್ರ ಸೇರಿದಂತೆ 19 ರಾಜ್ಯಗಳಲ್ಲಿ ಮಿಂಚು ಗುಡುಗು ಸಹಿತ ಭಾರೀ ಮಳೆ ಆಗಲಿದೆ. ಕೆಲವು ಪ್ರದೇಶಗಳಲ್ಲಿ ಪ್ರತಿ ಗಂಟೆಗೆ 80 ರಿಂದ 85 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಅಲ್ಲದೆ ಪ್ರತ್ಯೇಕ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಉತ್ತರಪ್ರದೇಶದ ಕೆಲವು ಭಾಗಗಳಲ್ಲಿ ಗಾಳಿ ಗಂಟೆಗೆ 70-75 ಕಿ.ಮೀ. ವೇಗದಲ್ಲಿ ಬೀಸಬಹುದು. ಲಕ್ನೋದಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 27 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಇದರೊಂದಿಗೆ ದಕ್ಷಿಣ ಭಾರತದ ವಿವಿಧ ಭಾಗಗಲ್ಲೂ ಭಾರೀ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+