IMD Weather Forecast: ವಿಪರೀತ ಚಳಿಗಾಳಿ ನಡುವೆ ದೇಶದ ಹಲವೆಡೆ ಮೂರು ದಿನ ಬಿರುಗಾಳಿ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಭಾರೀ ಶೀತಗಾಳಿ ಮುಂದುವರೆದಿದೆ. ಈ ನಡುವೆಯೇ ಮುಂದಿನ ಮೂರು ದಿನ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆಯು, ಭಾನುವಾರ, ಜನವರಿ 25ರಂದು ರಾಜಸ್ಥಾನ, ಹಿಮಾಚಲ ಪ್ರದೇಶ, ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಭಾರೀ ಶೀತಗಾಳಿ ಮುಂದುವರೆದಿದ್ದು, ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಸಂಜೆ ಕೂಡ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ. ಅಲ್ಲದೆ, ಈ ಭಾಗಗಳ ಹಲವೆಡೆ ಜನವರಿ 26 ಮತ್ತು 27ರಂದು ಅನೇಕ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಐಎಂಡಿ ಮುನ್ಸೂಚನೆ ನೀಡಿದೆ.

ಜನವರಿ 26ರಿಂದ 28ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ಪಾಶ್ಚಿಮಾತ್ಯ ಅಡಚಣೆಯ ಪ್ರಭಾವ ಬೀರುವ ಸಾಧ್ಯತೆ ಇದೆ. ಇದರ ಪರಿಣಾಮ ಅನೇಕ ಪ್ರದೇಶಗಳಲ್ಲಿ ಮಧ್ಯಮ ಮಳೆಯಾಗಲಿದೆ. ಜನವರಿ 27ರಂದು ಕೆಲವೆಡೆ ಭಾರೀ ಮಳೆ ಹಾಗೂ ಹಿಮಪಾತ ಸಂಭವಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಶೀತಗಾಳಿ ಮುನ್ಸೂಚನೆ: ಜನವರಿ 25ರಂದು ರಾಜಸ್ಥಾನ, ಹಿಮಾಚಲ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಭಾರೀ ಶೀತಗಾಳಿ ಮುಂದುವರೆದಿದೆ. ಪಂಜಾಬ್‌ನಲ್ಲಿ ಭಾರೀ ಮಂಜು ಕಾಣಿಸಿಕೊಂಡಿದ್ದು, ವಾಹನ ಸವಾರರಿಗೆ ಅಡಚಣೆ ಉಂಟಾದ ಘಟನೆಗಳು ನಡೆದಿವೆ. ಜನವರಿ 26ರಂದು ಕೂಡ ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ಪಶ್ಚಿಮ ಉತ್ತರ ಪ್ರದೇಶ ಹಾಗೂ ರಾಜಸ್ಥಾನದ ಕೆಲವು ಭಾಗಗಳಲ್ಲಿ ದಟ್ಟ ಮಂಜು, ಭಾರೀ ಶೀತಗಾಳಿ ವಾತಾವರಣ ಇರಲಿದೆ ಎಂದು ತಿಳಿಸಿದೆ.
ಮಳೆ, ಹಿಮಪಾತದ ಎಚ್ಚರಿಕೆ: ಜನವರಿ 26ರಿಂದ 28ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದ ಹಲವೆಡೆ ಸಾಧಾರಣ ಮಳೆ ಜೊತೆ ಹಿಮಪಾತವಾಗುವ ಸಾಧ್ಯತೆ ಇದೆ. ಜನವರಿ 27ರಂದು ಜಮ್ಮ ಮತ್ತು ಕಾಶ್ಮೀರದ ಹಲವೆಡೆ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ಪಶ್ಚಿಮ ಉತ್ತರ ಪ್ರದೇಶ ಮತ್ತು ಪೂರ್ವ ರಾಜಸ್ಥಾನ, ಜನವರಿ 27 ಮತ್ತು 28ರಂದು ಉತ್ತರಾಖಂಡದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಭಾರತದ ಹವಾಮಾನ: ದೇಶದ ಬಹುತೇಕ ಭಾಗಗಳಲ್ಲಿ ಭಾರೀ ಚಳಿಗಾಳಿ ಮುಂದುವರೆದುದೆ. ಈ ನಡುವೆ ಜನವರಿ 25ರಂದು ತಮಿಳುನಾಡು, ಪುದುಚೇರಿ ಹಾಗೂ ಕಾರೈಕಲ್ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದ್ದು, ಗಂಟೆಗೆ 40-50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಜನವರಿ 26ರಂದು ಕೇರಳ ಹಾಗೂ ಮಾಹೆ ಪ್ರದೇಶಗಳಲ್ಲಿಯೂ ಇದೇ ರೀತಿಯ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಭಾರೀ ಚಳಿಗಾಳಿಯಿಂದ ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ಜನರು ತತ್ತರಿಸಿ ಹೋಗಿದ್ದಾರೆ. ಮುಂದಿನ ಹಲವು ದಿನಗಳವರೆಗೂ ಈ ಭಾಗಗಳಲ್ಲಿ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ. ಅದರಲ್ಲೂ, ದಟ್ಟ ಮಂಜಿನ ಜೊತೆ ಭೀಕರ ಚಳಿ ಇರಲಿದೆ ಎಂದು ಮುನ್ಸೂಚನೆ ನೀಡಿದೆ. ಆದ್ದರಿಂದ ಈ ವೇಳೆ ಜನರು ಮನೆಯಿಂದ ಹೊರಗಡೆ ಹೊರಡುವ ಮುನ್ನ ಮೈ ಬೆಚ್ಚಗಿಡುವಂತಹ ಉಡುಪುಗಳನ್ನು ಧರಿಸುವುದು ಉತ್ತಮ ಅಂತಾ ಸಲಹೆ ನೀಡಲಾಗಿದೆ.












Click it and Unblock the Notifications