Imd Weather Forecast: ಚಂಡಮಾರುತ ಪ್ರಸರಣ ಪ್ರಭಾವ: ಈ ಭಾಗಗಳಲ್ಲಿ ಸೆಪ್ಟೆಂಬರ್ 5ರ ವರೆಗೆ ಭಾರೀ ಮಳೆ: ಐಎಂಡಿ ಮುನ್ಸೂಚನೆ!
Imd Weather Forecast: ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತ ಹಾಗೂ ಭಾರತದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಭಾರತದ ವಿವಿಧ ರಾಜ್ಯಗಳಲ್ಲಿ ಮುಂದಿನ ಮೂರರಿಂದ ನಾಲ್ಕು ದಿನಗಳ ವರೆಗೆ ಭಾರೀ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಪಶ್ಚಿಮ ಜಾರ್ಖಂಡ್ ಮತ್ತು ಸುತ್ತಮುತ್ತಲಿನ ಪ್ರದೇಶದ ಮೇಲಿದ್ದ ಕಡಿಮೆ ಒತ್ತಡದ ಪ್ರದೇಶವು ಸೆಪ್ಟೆಂಬರ್ 2ರಂದು ಈಶಾನ್ಯ ಮಧ್ಯಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶದ ಮೇಲೆ ನೆಲೆಗೊಂಡಿತ್ತು. ಇದಕ್ಕೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಯು ಸಮುದ್ರ ಮಟ್ಟದಿಂದ 7.6 ಕಿ.ಮೀ. ಎತ್ತರದವರೆಗೆ ವಿಸ್ತರಿಸಿದ್ದು, ಎತ್ತರದೊಂದಿಗೆ ನೈಋತ್ಯ ದಿಕ್ಕಿನತ್ತ ವಾಲಿದೆ. ಇದು ಮುಂದಿನ 12 ಗಂಟೆಗಳಲ್ಲಿ ಕಡಿಮೆ ಒತ್ತಡದ ಪ್ರದೇಶವಾಗಿ ದುರ್ಬಲಗೊಳ್ಳುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಉತ್ತರ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದಾದ್ಯಂತ ಪಶ್ಚಿಮ- ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.

ಮುಂದುವರಿದು ಸಮುದ್ರ ಮಟ್ಟದಲ್ಲಿನ ಮುಂಗಾರು ಅಕ್ಷರೇಖೆಯು ಪ್ರಸ್ತುತ ಭಟಿಂಡಾ, ರೋಹಕ್, ಹರ್ದೋಯಿ, ಕಾಲ್ಪುರ, ಈಶಾನ್ಯ ಮಧ್ಯಪ್ರದೇಶದ ಮೇಲಿರುವ ಸುಸ್ಪಷ್ಟ ಕಡಿಮೆ ಒತ್ತಡದ ಪ್ರದೇಶದ ಕೇಂದ್ರ, ದಿಘಾ ಮೂಲಕ ಹಾದು ನಂತರ ಆಗ್ನೇಯ ದಿಕ್ಕಿನಲ್ಲಿ ಮಧ್ಯ-ಪೂರ್ವ ಬಂಗಾಳ ಕೊಲ್ಲಿಯವರೆಗೆ ವಿಸ್ತರಿಸಿದೆ. ಈಶಾನ್ಯ ಅರಬ್ಬಿ ಸಮುದ್ರ ಮತ್ತು ಪಕ್ಕದ ಸೌರಾಷ್ಟ್ರದ ಮೇಲಿರುವ ಚಂಡಮಾರುತದ ಪರಿಚಲನೆಯಿಂದ, ದಕ್ಷಿಣ ಗುಜರಾತ್ ಮತ್ತು ಪಶ್ಚಿಮ ಮಧ್ಯಪ್ರದೇಶದ ಮೂಲಕ, ಈಶಾನ್ಯ ಮಧ್ಯಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶದ ಮೇಲಿರುವ ಸುಸ್ಪಷ್ಟ ಕಡಿಮೆ ಒತ್ತಡದ ಪ್ರದೇಶಕ್ಕೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಯವರೆಗೆ, ಸಮುದ್ರ ಮಟ್ಟದಿಂದ 3.1 ಮತ್ತು 4.5 ಕಿ.ಮೀ. ನಡುವಿನ ಎತ್ತರದಲ್ಲಿ ಈಗ ಒಂದು ತೊರೆ (Trough) ವಿಸ್ತರಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
Imd Weather Forecast: ಈ ಭಾಗಗಳಲ್ಲಿ ಭಾರೀ ಮಳೆ
ಮುಂದಿನ ಕೆಲವು ದಿನಗಳಲ್ಲಿ ಉತ್ತರ, ಮಧ್ಯ ಮತ್ತು ಪೂರ್ವ ಭಾರತದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಛತ್ತೀಸ್‌ಗಢ ಮತ್ತು ಬಿಹಾರದಲ್ಲಿ ಮುಂದಿನ ಎರಡರಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆದರೆ ಪಶ್ಚಿಮ ಉತ್ತರ ಪ್ರದೇಶದಲ್ಲಿ ಸೆಪ್ಟೆಂಬರ್ 3ರಿಂದ 4ರಂದು ಮಳೆ ಆಗುವ ಸಾಧ್ಯತೆ ಇದೆ. ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಸೆಪ್ಟೆಂಬರ್ 3 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಧ್ಯಪ್ರದೇಶದಲ್ಲಿ ಸೆಪ್ಟೆಂಬರ್ 3 ರಿಂದ 8ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ವಿದರ್ಭದಲ್ಲಿ ಸೆಪ್ಟೆಂಬರ್ 3 ರಿಂದ 6 ರವರೆಗೆ ಮಳೆ ಇರಲಿದೆ. ಛತ್ತೀಸ್‌ಗಢದಲ್ಲಿ ಸೆಪ್ಟೆಂಬರ್ 7 ರಿಂದ 8 ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಮಿಂಚು - ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಉತ್ತರಾಖಂಡ, ಹಿಮಾಚಲ ಪ್ರದೇಶ, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲೂ ಮಳೆ ಇರಲಿದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ನಾಗಾಲ್ಯಾಂಡ್‌ನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಇದರೊಂದಿಗೆ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲೂ ಮುಂದಿನ ಮೂರು ದಿನ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.


Click it and Unblock the Notifications
