Imd Weather Forecast: ಚಂಡಮಾರುತ ಪರಿಚಲನೆಯ ಪ್ರಭಾವ: ಈ ಭಾಗಗಳಲ್ಲಿ ಆಗಸ್ಟ್‌ 13ರ ವರೆಗೆ ಭಾರೀ ಮಳೆ

Imd Weather Forecast: ಭಾರತದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕವೂ ಸೇರಿದಂತೆ ಭಾರತದ ವಿವಿಧ ರಾಜ್ಯಗಳಲ್ಲಿ ಆಗಸ್ಟ್‌ 13ರ ವರೆಗೆ ಭಾರೀ ಮಳೆ ಇರಲಿದೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತ ಹಾಗೂ ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ಮಹತ್ವದ ಮುನ್ಸೂಚನೆಯನ್ನೂ ಸಹ ನೀಡಿದೆ. ಚಂಡಮಾರುತ ಪರಿಚಲನೆಯ ಪ್ರಭಾವದಿಂದ ಭಾರೀ ಮಳೆ ಆಗುತ್ತಿದೆ. ಮಳೆಗೆ ಸಂಬಂಧಿಸಿದಂತೆ ಸಂಪೂರ್ಣ ವಿವರ ಇಲ್ಲಿದೆ.

ನೈಋತ್ಯ ಬಂಗಾಳ ಮತ್ತು ಅದಕ್ಕೆ ಹೊಂದಿಕೊಂಡಿರುವ ಉತ್ತರ ಒಡಿಶಾದ ಮೇಲೆ ಮೇಲ್ಮುಖ ವಾಯು ಚಂಡಮಾರುತದ ಪರಿಚಲನೆಯ ಪ್ರಭಾವದಿಂದ, ಆಗಸ್ಟ್‌ 8 ರಂದು ಬೆಳಿಗ್ಗೆ 8.30 ಗಂಟೆಗೆ ಅದೇ ಪ್ರದೇಶದಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಂಡಿದೆ. ಸಂಬಂಧಿತ ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 7.6 ಕಿ.ಮೀ ವರೆಗೆ ವಿಸ್ತರಿಸಿದ್ದು, ಎತ್ತರದೊಂದಿಗೆ ನೈಋತ್ಯಕ್ಕೆ ಓರೆಯಾಗಿದೆ. ಸರಾಸರಿ ಸಮುದ್ರ ಮಟ್ಟದಲ್ಲಿ ಮಾನ್ಸೂನ್ ತಗ್ಗು ಈಗ ಅನುಪ್‌ಗಢ, ದೆಹಲಿ, ದಿಯೋಮಾಲಿ, ಸಿಧಿ, ದಿಘಾ ಮತ್ತು ಅಲ್ಲಿಂದ ಆಗ್ನೇಯಕ್ಕೆ ಬಂಗಾಳಕೊಲ್ಲಿಯ ಪೂರ್ವ-ಮಧ್ಯಕ್ಕೆ ಹಾದುಹೋಗುತ್ತದೆ ಮತ್ತು ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ ವರೆಗೆ ವಿಸ್ತರಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ತಿಳಿಸಿದೆ.

Imd Weather Forecast

ಕರ್ನಾಟಕದ ಕರಾವಳಿ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಆಗಸ್ಟ್‌ 13ರ ವರೆಗೆ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ. ದೇಶದ ಹೆಚ್ಚಿನ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ನೆರೆಯ ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹಲವಾರು ಪ್ರದೇಶಗಳು ಜಲಾವೃತ, ಪ್ರವಾಹ ಮತ್ತು ಹಠಾತ್ ಪ್ರವಾಹದ ಅಪಾಯವನ್ನು ಎದುರಿಸುತ್ತಿವೆ. ಭಾರೀ ಮಳೆಯಿಂದಾಗಿ ರಸ್ತೆ ಪ್ರವಾಸಗಳು, ಬೆಟ್ಟ ಪ್ರದೇಶ, ಕರಾವಳಿ ಪ್ರದೇಶಗಳಿಗೆ ಪ್ರವಾಸ ಅಥವಾ ಚಾರಣ ಹೋಗುವವರು ಎಚ್ಚರಿಕೆ ವಹಿಸಬೇಕು ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Imd Weather Forecast: ದೆಹಲಿ ಹಾಗೂ ಉತ್ತರ ಭಾರತದ ಭಾಗದಲ್ಲಿ ಭಾರೀ ಮಳೆ

ಇನ್ನು ದೆಹಲಿ ಹಾಗೂ ಉತ್ತರ ಭಾರತದ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ. ದೆಹಲಿ-ಎನ್‌ಸಿಆರ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆ ಮುಂದುವರಿದಿದೆ. ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಮುಂದಿನ ಮೂರು ದಿನಗಳ ವರೆಗೆ ಭಾರೀ ಮಳೆ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಆಗಸ್ಟ್‌ 13 ರವರೆಗೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.

ಆಗಸ್ಟ್‌ 8 ಹಾಗೂ 9 ರಂದು ಮತ್ತು ಮತ್ತೆ ಆಗಸ್ಟ್‌ 12 ಮತ್ತು 13 ರಂದು ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರಾಖಂಡ ಭಾಗದಲ್ಲಿ ಇದೇ ಅವಧಿಯಲ್ಲಿ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಮಳೆ ಇರಲಿದೆ. ಪೂರ್ವ ರಾಜಸ್ಥಾನ ಪ್ರದೇಶಲ್ಲಿ ವ್ಯಾಪಕ ಮಳೆ ಆಗಲಿದೆ. ಇದರೊಂದಿಗೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲೂ ಧಾರಾಕಾರ ಮಳೆ ಮುಂದುವರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+