Imd Weather Forecast: ಚಂಡಮಾರುತ ಪ್ರಭಾವ: ಕರ್ನಾಟಕದ ಈ ಭಾಗಗಳಲ್ಲಿ ಧಾರಾಕಾರ ಮಳೆ ಐಎಂಡಿ ಮುನ್ಸೂಚನೆ!
Imd Weather Forecast: ಕರ್ನಾಟಕದ ಕರಾವಳಿ ಸೇರಿದಂತೆ ದೇಶದಾದ್ಯಂತ ಮಳೆ ಆರ್ಭಟ ಶುರುವಾಗಿದೆ. ಮಾನ್ಸೂನ್ ಮುಂಗಾರು ಚುರುಕು ಪಡೆದುಕೊಂಡಿದ್ದು, ದಕ್ಷಿಣ ಭಾರತದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ದಕ್ಷಿಣ ಭಾರತದ ಕರ್ನಾಟಕದ ಕೆಲವು ಭಾಗ ಹಾಗೂ ಕೇರಳದಲ್ಲಿ ಭಾರೀ ಮಳೆ ಮುಂದುವರಿದಿದೆ. ಭಾರತದಲ್ಲಿ ಮಾನ್ಸೂನ್ ಮುಂಗಾರು ಚುರುಕು ಪಡೆದುಕೊಂಡಿದ್ದು, ದೆಹಲಿ ಸೇರಿದಂತೆ ವಿವಿಧ ಭಾಗದಲ್ಲಿ ಮಳೆ ಆಗುತ್ತಿದೆ. ಇನ್ನೂ ಮೂರರಿಂದ ನಾಲ್ಕು ದಿನ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ದೇಶದಾದ್ಯಂತ ಮುಂದಿನ ಮೂರರಿಂದ ನಾಲ್ಕು ದಿನ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ. ದೆಹಲಿಯಲ್ಲಿ ಭಾನುವಾರ ಗುಡುಗು ಸಹಿತ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರದಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.

ನೈಋತ್ಯ ರಾಜಸ್ಥಾನದಲ್ಲಿ ಕಡಿಮೆ ಒತ್ತಡದ ಪ್ರದೇಶವು ವ್ಯಾಪಕ ಮಾನ್ಸೂನ್ ಮಳೆಗೆ ಕಾರಣವಾಗಿದೆ. ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟ ಮೋಡ ಕವಿದ ವಾತಾವರಣವಿದೆ. ರಾಷ್ಟ್ರ ರಾಜಧಾನಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಹಗಲಿನಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಪ್ರತ್ಯೇಕ ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇಲ್ಲಿ ಗರಿಷ್ಠ ತಾಪಮಾನವು 32ರಿಂದ 34 ಡಿಗ್ರಿ ಸೆಲ್ಸಿಯಸ್ ಒಳಗೆ ಇರಲಿದೆ. ಅಲ್ಲದೆ ಕನಿಷ್ಠ ತಾಪಮಾನವು 25 ರಿಂದ 27 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಆಗ್ನೇಯ ರಾಜಸ್ಥಾನ ಮತ್ತು ಪಕ್ಕದ ಪ್ರದೇಶಗಳಲ್ಲಿ ಚಂಡಮಾರುತ ಪ್ರಸರಣ ರೂಪುಗೊಂಡಿದೆ. ಚಂಡಮಾರುತದ ಪ್ರಸರಣವು ಸರಾಸರಿ ಸಮುದ್ರ ಮಟ್ಟದಿಂದ 7.6 ಕಿ.ಮೀ ವರೆಗೆ ವಿಸ್ತರಿಸಿದೆ ಮತ್ತು ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ದುರ್ಬಲಗೊಳ್ಳುವ ಸಾಧ್ಯತೆಯಿದೆ. ಇದರ ಹೊರತಾಗಿಯೂ ಹರಿಯಾಣ, ದೆಹಲಿ ಮತ್ತು ಪಂಜಾಬ್‌ನಲ್ಲಿ ಆಗಸ್ಟ್ 7 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 2 ರಿಂದ ಆಗಸ್ಟ್ 6 ರವರೆಗೆ ಪೂರ್ವ ಉತ್ತರ ಪ್ರದೇಶದಲ್ಲೂ ಭಾರೀ ಮಳೆ ಆಗಲಿದೆ.
Imd Weather Forecast: ದಕ್ಷಿಣ ಭಾರತದಲ್ಲೂ ಮಳೆ ಆರ್ಭಟ
ಇನ್ನು ಚಂಡಮಾರುತ ಪ್ರಸರಣದಿಂದ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಮಳೆ ಮುಂದುವರಿದಿದೆ. ಕೇರಳದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆ ಆಗುತ್ತಿದ್ದು. ಅಲ್ಲಲ್ಲಿ ಭೂಕುಸಿತ ಸಂಭವಿಸುತ್ತಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿಯೂ ಮಳೆ ಮುಂದುವರಿದಿದೆ. ದಕ್ಷಿಣ ರಾಜ್ಯಗಳು ಸಹ ಸಕ್ರಿಯ ಮಾನ್ಸೂನ್ ಪರಿಸ್ಥಿತಿ ಎದುರಿಸುವ ಸಾಧ್ಯತೆ ಇದೆ. ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ರಿಪೋರ್ಟ್ ಉಲ್ಲೇಖಿಸಿದೆ.
ಅಭಿಜೀತ್ ದೀಪ್ಕೆ ಶಿಕ್ಷಣಕ್ಕೆ ಹಣ ಎಲ್ಲಿಂದ ಬಂತು!
ಈಚೆಗೆ ದೇಶದಲ್ಲಿ ಜೆನ್‌ಜೀ ದೊಡ್ಡ ಹೋರಾಟಕ್ಕೆ ಕಾರಣರಾಗಿದ್ದ ಅಭಿಜೀತ್ ದೀಪ್ಕೆಯ ಶಿಕ್ಷಣ ಹಾಗೂ ಹಣಕಾಸು ಬಗ್ಗೆ ಇದೀಗ ಚರ್ಚೆ ಶುರುವಾಗಿದೆ. ಅಭಿಜೀತ್ ದೀಪ್ಕೆ ಅವರು ಅಮೆರಿಕದಲ್ಲಿ ಶಿಕ್ಷಣ ಪಡೆಯುವುದಕ್ಕೆ ಹೇಗೆ ಅವರ ತಂದೆ ಹಣಕಾಸು ಒದಗಿಸಿದರು ಎಂದು ಆರ್‌ಟಿಐ ಕಾರ್ಯಕರ್ತ ತನಿಖೆಗೆ ಕೋರಿದ್ದಾರೆ.
ಸೂರತ್ ಮೂಲದ ಮಾಹಿತಿ ಹಕ್ಕು (ಆರ್‌ಟಿಐ) ಕಾರ್ಯಕರ್ತರೊಬ್ಬರು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆಯ ಹಣಕಾಸಿನ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದಾರೆ. ಅಭಿಜಿತ್ ಅವರ ತಂದೆ ನಿವೃತ್ತ ಮಹಾರಾಷ್ಟ್ರ ಸರ್ಕಾರಿ ಉದ್ಯೋಗಿಯಾಗಿದ್ದರು. ತಮ್ಮ ಮಗನ ವಿದೇಶದಲ್ಲಿ ಶಿಕ್ಷಣಕ್ಕೆ ಹೇಗೆ ಹಣಕಾಸು ಒದಗಿಸಿದ್ದರು ಎಂದು ಪ್ರಶ್ನಿಸಿದ್ದಾರೆ. ಪೊಲೀಸ್ ಪ್ರಕರಣಗಳನ್ನು ಎದುರಿಸುತ್ತಿರುವ ಸಿಜೆಪಿ ಪ್ರತಿಭಟನಾಕಾರರಿಗಾಗಿ ಹಿರಿಯ ವಕೀಲ ಮತ್ತು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಘೋಷಿಸಿದ ರೂ. 1 ಕೋಟಿ ಕಾನೂನು ರಕ್ಷಣಾ ನಿಧಿಯನ್ನು ಪರಿಶೀಲಿಸುವಂತೆ ಕೋರಿ ಕಾರ್ಯಕರ್ತ ಅಮಿತ್ ತಿವಾರಿ ಅವರು ಭಾರತದ ಚುನಾವಣಾ ಆಯೋಗ ಮತ್ತು ತೆರಿಗೆ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಸಿಬಲ್ ಕಾನೂನು ರಕ್ಷಣಾ ನಿಧಿಗೆ ನೀಡುವ ಪ್ರಸ್ತಾವಿತ ಕೊಡುಗೆಗೆ ಜಿಎಸ್‌ಟಿ ಅನ್ವಯಿಸುತ್ತದೆಯೇ ಎಂದು ಪರಿಶೀಲಿಸುವಂತೆ ತಿವಾರಿ ಕೇಂದ್ರ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿಯನ್ನು ಸಹ ಸಂಪರ್ಕಿಸಿದ್ದರು.


Click it and Unblock the Notifications
