Imd Weather Forecast: ವಾಯುಭಾರ ಕುಸಿತ ಪ್ರಭಾವ: ಈ ಭಾಗಗಳಲ್ಲಿ ಭಾರೀ ಮಳೆ, ಐಎಂಡಿ ಆರೆಂಜ್ ಅಲರ್ಟ್

Imd Weather Forecast: ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ದೇಶದ ವಿವಿಧ ಭಾಗಗಳಲ್ಲಿ ಚಂಡಮಾರುತ ಪ್ರಸರಣ ಪ್ರಭಾವ ಹಾಗೂ ಮೇಘಸ್ಫೋಟದಿಂದ ಭಾರೀ ಮಳೆ ಆಗುತ್ತಿದೆ. ಉತ್ತರಾಖಂಡ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಮಧ್ಯ ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ಈ ಭಾಗದಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.

ಹರಿಯಾಣ, ಚಂಡೀಗಢ, ಬಿಹಾರ, ಛತ್ತೀಸ್‌ಗಢ, ರಾಜಸ್ಥಾನ, ಹಿಮಾಚಲ ಪ್ರದೇಶ, ಜಾರ್ಖಂಡ್, ಮಧ್ಯಪ್ರದೇಶ, ಉತ್ತರ ಪ್ರದೇಶ, ಈಶಾನ್ಯ ಭಾರತದ ಕೆಲವು ಭಾಗಗಳು ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಪ್ರದೇಶದಲ್ಲೂ ಭಾರಿ ಮಳೆ ಮುಂದುವರಿದಿದೆ. ಅಲ್ಲದೆ ಜಮ್ಮು-ಕಾಶ್ಮೀರ, ಆಂಧ್ರಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡು ಪುದುಚೇರಿ ಮತ್ತು ಕಾರೈಕಲ್‌ನಲ್ಲೂ ಮಳೆ ಮುಂದುವರಿದಿದೆ. ಉತ್ತರ ಭಾರತದೊಂದಿಗೆ ದಕ್ಷಿಣ ಭಾರತದಲ್ಲೂ ಭಾರೀ ಮಳೆ ಆಗುತ್ತಿದೆ.

Imd Weather Forecast

ದೆಹಲಿಯ ಕೆಲವು ಭಾಗಗಳಲ್ಲಿ ಆಗಸ್ಟ್‌ 6ರ ಗುರುವಾರ ಬೆಳಿಗ್ಗೆ ಮಳೆಯಾಗಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಉತ್ತರಾಖಂಡದಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಆದರೆ ಪೂರ್ವ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಸಾಧಾರಣ ಮಳೆ ಇರಲಿದೆ. ಬಿಹಾರದಲ್ಲಿ ವ್ಯಾಪಕ ಮಳೆ ಆಗುತ್ತಿದೆ. ಭಾರೀ ಮಳೆಯಿಂದ ದೇಶದ ವಿವಿಧ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.

Imd Weather Forecast: ದಕ್ಷಿಣ ಭಾರತದ ರಾಜ್ಯಗಳಲ್ಲೂ ಭಾರೀ ಮಳೆ

ಇನ್ನು ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ ಆಗುತ್ತಿದೆ. ಕರ್ನಾಟಕ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್‌ 6 ರಂದು ಕೇರಳ, ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Imd Weather Forecast: ಚಂಡಮಾರುತ ಪ್ರಸರಣ ಪ್ರಭಾವ

ಇನ್ನು ಉತ್ತರ ಪ್ರದೇಶ, ಬಿಹಾರ, ಅಸ್ಸಾಂ ಮತ್ತು ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಉತ್ತರ ಮತ್ತು ಮಧ್ಯ ಭಾರತದಾದ್ಯಂತ ಮಾನ್ಸೂನ್, ಹಲವಾರು ಚಂಡಮಾರುತಗಳ ಪ್ರಸರಣದ ಪ್ರಭಾವದಿಂದಾಗಿ ಮಳೆ ಹೆಚ್ಚಾಗಿದೆ. ಉತ್ತರ, ಪೂರ್ವ, ಮಧ್ಯ, ಪಶ್ಚಿಮ ಮತ್ತು ದಕ್ಷಿಣ ಭಾರತದ ಬಹುತೇಕ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಭಾರತದಲ್ಲಿ ಜುನ್ ಮತ್ತು ಜುಲೈನಲ್ಲಿ ಮಳೆ ಕೊರತೆ ಎದುರಾಗಿತ್ತು. ಇದೀಗ ಆಗಸ್ಟ್‌ ತಿಂಗಳ ಮೊದಲ ವಾರದಲ್ಲೇ ಕರ್ನಾಟಕವೂ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಒಂದು ವಾರದ ಅವಧಿಯ ವರೆಗೆ ಭಾರೀ ಮಳೆ ಇರಲಿದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+