Get Updates
Get notified of breaking news, exclusive insights, and must-see stories!

IMD Weather Forecast: ಈ ಭಾಗಗಳಲ್ಲಿ ಶೀತಗಾಳಿ ನಡುವೆ ಜನವರಿ 1ರ ವರೆಗೂ ಮಳೆ ಸಾಧ್ಯತೆ

IMD Weather Forecast: ದೇಶದ ಬಹುತೇಕ ರಾಜ್ಯದಲ್ಲಿ ಭಾರೀ ಚಳಿ ಮುಂದುವರೆದಿದೆ. ಈ ನಡುವೆಯೇ ಹಲವು ಭಾಗಗಳಲ್ಲಿ ಜನವರಿ 1ರ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ದೇಶದ ಹಲವು ರಾಜಗ್ಯಳಲ್ಲಿ ಭೀಕರ ಚಳಿಗೆ ಜನರು ಬೆದರಿದ್ದಾರೆ. ಅದರಲ್ಲೂ ಉತ್ತರ ಭಾರತದ ಭಾಗದಲ್ಲಿ ದಟ್ಟ ಮಂಜಿನ ಜೊತೆ ಭಾರೀ ಚಳಿಗಾಳಿ ಮುಂದುವರೆದಿದೆ. ಜೊತೆಗೆ ಈ ಭಾಗದ ಹಲವೆಡೆ ಮಳೆ ಕೂಡ ಆಗುತ್ತಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

IMD Weather Forecast Dense Fog Cold Wave and Rainfall Likely in Several States Till January 1

ಭೀಕರ ಚಳಿ ನಡುವೆ ಮಳೆ: ವಿಶೇಷವಾಗಿ ರಾಜಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು (ಡಿಸೆಂಬರ್ 30) ದಟ್ಟ ಮಂಜಿನ ಜೊತೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಜಮ್ಮು, ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಪಶ್ಚಿಮ ರಾಜಸ್ಥಾನದಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದುವರೆದ ಶೀತಗಾಳಿ: ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ, ಬಿಹಾರ ಮತ್ತು ಪಂಜಾಬ್‌ನಲ್ಲಿ ಮುಂದಿನ ಹಲವು ದಿನಗಳವರೆಗೂ ರಾತ್ರಿ ಮತ್ತು ಬೆಳಗಿನ ವೇಳೆ ದಟ್ಟ ಮಂಜು ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ನವದೆಹಲಿ ಹವಾಮಾನದ ವಿವರ: ರಾಷ್ಟ್ರ ರಾಜಧಾನಿ ನವದೆಹಲಿ ವಿಚಾರಕ್ಕೆ ಬಂದರೆ, ದೆಹಲಿಯಲ್ಲಿ ಇಂದು (ಡಿಸೆಂಬರ್ 30) ದಟ್ಟವಾದ ಮಂಜು ಕವಿಯುವ ಮುನ್ಸೂಚನೆ ಹಿನ್ನೆಲೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುಂದಿನ ನಾಲ್ಕು ದಿನಗಳವರೆಗೆ ದೆಹಲಿಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮತ್ತೊಂದೆಡೆ ದೆಹಲಿಯ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 31ರ ಬುಧವಾರ ಬೆಳಗಿನ ಸಮಯದಲ್ಲಿ ಕಡಿಮೆ ಮಂಜು ಬೀಳುವ ಸಾಧ್ಯತೆಯಿದೆ. ಜನವರಿ 1ರಂದು ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಡಿಸೆಂಬರ್ 30ರ ಮಂಗಳವಾರ ಅಂದರೆ ಇಂದು ದೆಹಲಿಯಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 22 ಮತ್ತು 7 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಪ್ರಮುಖ ಸಲಹೆಗಳೇನು?: ಈ ಭಾಗದಲ್ಲಿ ದಟ್ಟ ಮಂಜಿನ ಜೊತೆ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಪರಿಣಾಮ ವಾಹನ ಸವಾರರು ಹಾಗೂ ಇಲ್ಲಿನ ಜನರಿ ತುಂಬಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ದಟ್ಟ ಮಂಜು ಕವಿದ ಪ್ರದೇಶಗಳಲ್ಲಿ ವಾಹನಗಳನ್ನು ಓಡಿಸುವಾಗ ಮುನ್ನೆಚ್ಚರಿಕೆಯಿಂದ ಇರಬೇಕಾಗುತ್ತದೆ. ಜೊತೆಗೆ ಶೀತಗಾಳಿ ಹಿನ್ನೆಲೆ ಜನರು ಹತ್ತಿ ಬಟ್ಟೆಯಿಂದ ತಯಾರಿಸಲಾದ ಉಡುಪುಗಳನ್ನು ಧರಿಸುವುದು ಉತ್ತಮ. ಅದರಲ್ಲೂ ಚಿಕ್ಕ ಮಕ್ಕಳು ಬೆಳಗ್ಗೆ ಹಾಗೂ ಸಂಜೆ ವೇಳೆ ಮನೆಯಿಂದ ಹೊರಬರದಂತೆ ನೋಡಿಕೊಳ್ಳಬೇಕು ಅಂತಲೂ ಸಲಹೆ ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+