Get Updates
Get notified of breaking news, exclusive insights, and must-see stories!

IMD Weather Forecast: ದಟ್ಟ ಮಂಜು, ಶೀತಗಾಳಿ ನಡುವೆ ಈ ಭಾಗಗಳಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ದಟ್ಟ ಮಂಜಿನ ಜೊತೆ ಭೀಕರ ಚಳಿ ಮುಂದುವರೆದಿದೆ. ಈ ನಡುವೆಯೇ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು ದಿನಗಳವರೆಗೆ ಬಹುತೇಕ ರಾಜ್ಯಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ವೇಳೆ ದಟ್ಟ ಮಂಜು ಕವಿಯಲಿದ್ದು, ವಿಪರೀತ ಶೀತಗಾಳಿ ಬೀಸಲಿದೆ. ಈ ನಡುವೆ ಕೆಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಹಾಗಾದ್ರೆ, ಎಲ್ಲೆಲ್ಲಿ ಹವಾಮಾನ ಹೇಗಿರಲಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

IMD Weather Forecast Dense Fog Severe Cold Wave and Heavy Rain Alert Across Several Parts of India

ಎಲ್ಲೆಲ್ಲಿ ಶೀತಗಾಳಿ?: ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ತಾಪಮಾನದಲ್ಲಿ ಕುಸಿತ ಕಾಣಲಿದ್ದು, ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಸ್ಥಾನ, ಪಂಜಾಬ್, ಹರಿಯಾಣ, ನವದೆಹಲಿ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಶೀತಗಾಳಿ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಿದೆ.

ಎಲ್ಲೆಲ್ಲಿ ಹವಾಮಾನ ಹೇಗಿರಲಿದೆ?: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕನಿಷ್ಠ ತಾಪಮಾನದಲ್ಲಿ 2-4 ಡಿಗ್ರಿ ಸೆಲ್ಸಿಯಸ್‌ವರೆಗೆ ಕಡಿಮೆ ಆಗಲಿದ್ದು, ಶೀತಗಾಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಉತ್ತರದಿಂದ ಬರುವ ಶೀತಗಾಳಿ ಗುಜರಾತ್‌ನ ಕಚ್, ಪಂಜಾಬ್ ಮತ್ತು ಪಶ್ಚಿಮದಲ್ಲಿ ರಾಜಸ್ಥಾನದ ಮೇಲೆ ಪರಿಣಾಮ ಬೀರಲಿದೆ. ಇನ್ನೂ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟುಮಾಡುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಭಾರೀ ಮಳೆ ಎಚ್ಚರಿಕೆ: ದಟ್ಟ ಮಂಜು ಹಾಗೂ ಶೀತಗಾಳಿ ನಡುವೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ತಮಿಳುನಾಡು, ಕೇರಳ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ದಟ್ಟ ಮಂಜಿನ ಜೊತೆ ಭಾರೀ ಚಳಿಯಿಂದ ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ಜನರು ತತ್ತರಿಸಿ ಹೋಗಿದ್ದಾರೆ. ಭಾರೀ ಶೀತಾಗಳಿ ಪರಿಣಾಮ ಬೆಳಗ್ಗೆ ಹಾಗೂ ಸಂಜೆ ವೇಳೆ ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಉತ್ತರದಲ್ಲಿ ಮುಂದಿನ ಹಲವು ದಿನಗಳವರೆಗೆ ಇದೇ ರೀತಿಯ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಭಾರೀ ಚಳಿಗಾಳಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜನರು ಮನೆಯಿಂದ ಹೊರಗಡೆ ಬರುವ ಮುನ್ನ ಹತ್ತಿಯಿಂದ ತಯಾರಿಸಲಾದ ಉಡುಪುಗಳನ್ನು ಧರಿಸುವುದು ಉತ್ತಮ. ಜೊತೆಗೆ ಈ ವೇಳೆ ಚಿಕ್ಕ ಮಕ್ಕಳನ್ನು ಮನೆಯಿಂದ ಹೊರಗಡೆ ಹೋಗದಂತೆ ತಡೆಯುವುದು ಉತ್ತಮ ಎಂದು ಸಲಹೆ ನೀಡಲಾಗಿದೆ. ಜನವರಿ ಕಳೆದು ಫೆಬ್ರವರಿ ಎಂಟ್ರಿ ಕೊಟ್ಟರೆ, ಚಳಿ ಪ್ರಮಾಣ ಗಣನೀಯವಾಗಿ ಕಡಿಮೆ ಆಗಲಿದೆ. ಈ ನಡುವೆಯೇ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಭಾರೀ ಚಳಿ ಹಿನ್ನೆಲೆ ಉತ್ತರದ ಹಲವು ರಾಜ್ಯಗಳಲ್ಲಿ ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳನ್ನು ತಡವಾಗಿ ಆರಂಭ ಮಾಡಲಾಗಿತ್ತು. ಅಲ್ಲದೆ, ಜನರಿಗೂ ಸಹ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವಂತೆ ಸೂಚನೆ ನೀಡಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+