IMD Weather Forecast: ದಕ್ಷಿಣ ಭಾರತ ಸೇರಿದಂತೆ ಈ ಭಾಗಗಳಲ್ಲಿ ಅಕ್ಟೋಬರ್ 20ರವರೆಗೆ ಭಾರೀ ಮಳೆ: ಐಎಂಡಿ ಮುನ್ಸೂಚನೆ

IMD Weather Forecast: ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಮುಂಗಾರು ಆಗಮನವು ವಿವಿಧ ರಾಜ್ಯಗಳಲ್ಲಿ ಮಳೆ ಆಗಮನಕ್ಕೆ ಕಾರಣವಾಗಿದೆ. ಅಲ್ಲದೆ ಚಂಡಮಾರುತ ಪ್ರಸರಣ ಪ್ರಭಾವ ಹಾಗೂ ಟ್ರಫ್ ಸೃಷ್ಟಿಯಿಂದ ದೇಶದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆ ಆಗುತ್ತಿದೆ.

ಬುಧವಾರ ದೆಹಲಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ಹೆಚ್ಚಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ. ದೆಹಲಿಯಲ್ಲಿ ಬುಧವಾರ ಗರಿಷ್ಠ ತಾಪಮಾನವು 33-35 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20-22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮಳೆಯಾಗುವ ಸಾಧ್ಯತೆ ಇಲ್ಲ.

IMD Weather Forecast Heavy Rain Alert Across South India and Other Regions Until October 20

ಆದಾಗ್ಯೂ, ಗುರುವಾರ ಹವಾಮಾನ ಬದಲಾಗುವ ಸಾಧ್ಯತೆಯಿದ್ದು, ದೆಹಲಿಯ ಹಲವೆಡೆ ಮಿಂಚು - ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ. ದೆಹಲಿ ಸೇರಿದಂತೆ ಉತ್ತರ ಭಾರತದ ವಿವಿಧ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮುಂದಿನ ಎರಡರಿಂದ ಮೂರು ದಿನ ದೆಹಲಿ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹರಿಯಾಣ, ಚಂಡೀಗಢ ಮತ್ತು ಪಂಜಾಬ್‌ನಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಬುಧವಾರ ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಹರಿಯಾಣ, ಚಂಡೀಗಢ, ಪಂಜಾಬ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಪಶ್ಚಿಮ ರಾಜಸ್ಥಾನದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಹರಿಯಾಣ, ಚಂಡೀಗಢ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಅಕ್ಟೋಬರ್ 14 ಮತ್ತು 19 ರ ನಡುವೆ ಉತ್ತರಾಖಂಡ, ರಾಜಸ್ಥಾನ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

IMD Weather Forecast: ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆ

ಇನ್ನು ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಅಕ್ಟೋಬರ 14ರ ಬುಧವಾರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 19 ರವರೆಗೆ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಗುರುವಾರದಿಂದ ಅಕ್ಟೋಬರ್ 19 ರವರೆಗೆ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 15-18ರ ವರೆಗೆ ಕರಾವಳಿ ಆಂಧ್ರಪ್ರದೇಶ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ರಾಯಲಸೀಮಾದಲ್ಲಿಯೂ ಸಹ ಭಾರೀ ಮಳೆ ಆಗಲಿದೆ.

ಆಂಧ್ರಪ್ರದೇಶ, ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದ ಕರಾವಳಿ ಮತ್ತು ರಾಯಲಸೀಮಾದಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಅಕ್ಟೋಬರ್ 15 ರಿಂದ 20ರ ವರೆಗೆ ಕರ್ನಾಟಕದಲ್ಲಿ ಮಳೆ

ದಕ್ಷಿಣ ಒಳನಾಡು ಕರ್ನಾಟಕ (15 ರಿಂದ 20 ಅಕ್ಟೋಬರ್): ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ (ರಾಮನಗರ), ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ,ಬಳ್ಳಾರಿ, ವಿಜಯನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು ಕರ್ನಾಟಕ (16 ರಿಂದ 20 ಅಕ್ಟೋಬರ್): ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಜಿಲ್ಲೆಗಳಲ್ಲಿ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಕರ್ನಾಟಕ (16 ರಿಂದ 20 ಅಕ್ಟೋಬರ್): ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+