IMD Weather Forecast: ದೇಶದ ಈ ಭಾಗಗಳಲ್ಲಿಂದು ರಣಮಳೆ ಸುರಿಯುವ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಆವರಿಸಿದ್ದು, ಕೆಲವೆಡೆ ಭಾರಿ ಮಳೆ ಮುಂದುವರೆದಿದೆ. ಹಾಗೆಯೇ ಭಾನುವಾರ (ಜುಲೈ 12) ಈ ಭಾಗಗಳಲ್ಲಿ ರಣಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಜುಲೈ 12ರಂದು ಬಿಹಾರ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಜಾರ್ಖಂಡ್, ಉತ್ತರಾಖಂಡ ಹರಿಯಾಣ, ಚಂಡೀಗಢ, ದೆಹಲಿಯ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ನೀಡಿದೆ.

ಎಲ್ಲೆಲ್ಲಿ ಭಾರಿ ಮಳೆ ಮುನ್ಸೂಚನೆ?
ಅರುಣಾಚಲ ಪ್ರದೇಶ, ಪೂರ್ವ ಉತ್ತರ ಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್, ಒಡಿಶಾ, ಪಂಜಾಬ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ, ದೆಹಲಿ-ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ದೇಶದ ಬಹುತೇಕ ಭಾಗಗಳಲ್ಲಿ ಸಕ್ರಿಯವಾಗಿದ್ದು, ಹಿಮಾಲಯ ಪ್ರದೇಶ, ಪೂರ್ವ ಭಾರತ ಮತ್ತು ಈಶಾನ್ಯ ರಾಜ್ಯಗಳಾದ್ಯಂತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಅಂತಾ ತಿಳಿಸಿದೆ.
ಈ ಭಾಗಗಳಲ್ಲಿ ವ್ಯಾಪಕ ಮಳೆ ಎಚ್ಚರಿಕೆ
ಅದರಲ್ಲೂ ಗಂಗಾನದಿಯ ಬಯಲು ಪ್ರದೇಶದ ಪಶ್ಚಿಮ ಬಂಗಾಳ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ವ್ಯಾಪಕ ಮಳೆಯಾಗಲಿದ್ದು, ಬಿಹಾರ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇದೇ ರೀತಿಯ ವಾತಾವರಣ ಇರಲಿದೆ. ಮಧ್ಯಪ್ರದೇಶ ಮತ್ತು ವಿದರ್ಭ ಸೇರಿದಂತೆ ಗುಜರಾತ್, ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ವಾರದ ಹವಾಮಾನ ಮುನ್ಸೂಚನೆ
ಮುಂಬರುವ ವಾರದಲ್ಲಿ ಮುಂಗಾರು ಹಲವಾರು ಪ್ರದೇಶಗಳಲ್ಲಿ ಸಕ್ರಿಯವಾಗಿರಲಿದೆ. ಈ ವೇಳೆ ಪೂರ್ವ, ಈಶಾನ್ಯ ಮತ್ತು ಪಶ್ಚಿಮ ಭಾರತದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಕೊಂಕಣ ಮತ್ತು ಗೋವಾ, ಕರಾವಳಿ ಕರ್ನಾಟಕ ಮತ್ತು ಉತ್ತರಾಖಂಡದಂತಹ ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ವ್ಯಾಪಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಮುನ್ಸೂಚನೆ ನೀಡಿದೆ.
ಗುಡುಗು, ಸಿಡಿಲು ಸಹಿತ ಮಳೆ ಮುನ್ಸೂಚನೆ
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪೂರ್ವ ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರ ಹಾಗೂ ಜಾರ್ಖಂಡ್‌ನಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದ್ದು, ಗಂಟೆಗೆ 40-50 ಕಿಲೋ ಮೀಟರ್ ವೇಗದದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ ಎಂದು ಮುನ್ಸೂಚನೆ ನೀಡಿದೆ.
ಪಶ್ಚಿಮ ಬಂಗಾಳ, ಒಡಿಶಾ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಗಂಟೆಗೆ 30-40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ತಿಳಿಸಿದೆ. ಇನ್ನೂ ಭಾರತದ ಬಹುತೇಕ ಭಾಗಗಳಲ್ಲಿ ಮುಂಗಾರು ಆವರಿಸಿದ್ದು, ಈ ನಡುವೆಯೇ ಜುಲೈ 12ರಂದು ಕರಾವಳಿ ಆಂಧ್ರಪ್ರದೇಶದ ಕೆಲವು ಪ್ರತ್ಯೇಕ ಸ್ಥಳಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಉಳಿದಂತೆ ಬಹುತೇಕ ಭಾಗಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಸಾಮಾನ್ಯವಾಗಿ ವಾಡಿಕೆಯಂತೆ ಮುಂಗಾರು ಮೊದಲು ಕೇರಳಕ್ಕೆ ಎಂಟ್ರಿ ಕೊಟ್ಟು ನಂತರ ಕರ್ನಾಟಕ, ಬಳಿಕ ದೇಶದ ಎಲ್ಲಾ ರಾಜ್ಯಗಳನ್ನು ಆವರಿಸುತ್ತಿತ್ತು. ಆದರೆ ಈ ಬಾರಿ ಮುಂಗಾರು ಆವರಿಸಿದ್ದರೂ ಕೆಲವು ಕಡೆಗಳಲ್ಲಿ ಮಾತ್ರ ಭಾರಿ ಮಳೆ ಮುಂದುವರೆದಿದೆ. ಉಳಿದೆಡೆ ಮೋಡ ಕವಿದ ವಾತಾವರಣವಷ್ಟೇ ನಿರ್ಮಾಣವಾಗುತ್ತಿದೆ ಬಿಟ್ಟರೆ, ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ಒಟ್ಟಿನಲ್ಲಿ ಈ ಬಾರಿ ಮುಂಗಾರು ಮಳೆ ಕ್ಷೀಣಿಸಿದ್ದು, ಕೃಷಿಕರನ್ನು ಚಿಂತೆಗೆ ಒಳಗಾಗುವಂತೆ ಮಾಡಿದೆ.


Click it and Unblock the Notifications
