IMD Weather Forecast: ಚಂಡಮಾರುತ ಪ್ರಸರಣ ಪ್ರಭಾವ: ಈ ಭಾಗಗಳಲ್ಲಿ ಮುಂದಿನ 3 ದಿನ ಭಾರೀ ಮಳೆ, ಐಎಂಡಿ ವರದಿ

IMD Weather Forecast: ಭಾರತದ ವಿವಿಧ ರಾಜ್ಯಗಳಲ್ಲಿ ನೈಋತ್ಯ ಮಾನ್ಸೂನ್ ಚುರುಕು ಪಡೆದುಕೊಂಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ ಮುಂದಿನ ಎರಡರಿಂದ ಮೂರು ದಿನಗಳಲ್ಲಿ ದೇಶಾದ್ಯಂತ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಭಾರತದ ವಿವಿಧ ಭಾಗಗಳಲ್ಲಿ ಎರಡು ವ್ಯತಿರಿಕ್ತ ಹವಾಮಾನ ಎದುರಾಗಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಿಂಚು - ಗುಡುಗು ಸಹಿತ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆದರೆ ದೇಶದ ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಶಾಖದ ಅಲೆಯ ಪರಿಸ್ಥಿತಿ ಮುಂದುವರಿದಿದೆ. ಸಕ್ರಿಯ ನೈಋತ್ಯ ಮಾನ್ಸೂನ್ ಹಾಗೂ ಚಂಡಮಾರುತ ಪ್ರಸರಣದ ಪ್ರಭಾವದಿಂದಾಗಿ ವಿವಿಧ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಜೂನ್ 28 ರಂದು ಪೂರ್ವ ಭಾರತದಲ್ಲಿ ಮಿಂಚು - ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ.

IMD Weather Forecast

ಈ ರಾಜ್ಯಗಳಲ್ಲಿ ಭಾರೀ ಮಳೆ

ಇನ್ನು ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಂತಹ ಈಶಾನ್ಯ ಭಾರತದ ವಿವಿಧ ರಾಜ್ಯಗಳಲ್ಲಿ ಮಿಂಚು - ಗುಡುಗು ಸಹಿತ ಮಳೆ ಆಗಲಿದೆ. ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ಮಧ್ಯಪ್ರದೇಶ, ವಿದರ್ಭ, ಕೊಂಕಣ ಮತ್ತು ಗೋವಾ ಮತ್ತು ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ. ಅಸ್ಸಾಂ ಮತ್ತು ಮೇಘಾಲಯದಂತಹ ಈಶಾನ್ಯ ರಾಜ್ಯ ಪ್ರದೇಶದ ಕೆಲವು ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಉತ್ತರ ಭಾರತದಲ್ಲಿ ಉಷ್ಣ ಅಲೆ

ಹಲವು ರಾಜ್ಯಗಳು ಭಾರೀ ಮಳೆ ಆಗುತ್ತಿದ್ದರೂ ಸಹ ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಉಷ್ಣ ಅಲೆಯ ಪರಿಸ್ಥಿತಿಯಲ್ಲಿ ಮುಂದುವರಿದಿದೆ. ಉತ್ತರ ಭಾರತದ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ತಡವಾಗಿ ಪ್ರವೇಶಿಸುವುದರೊಂದಿಗೆ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

ದಕ್ಷಿಣ ಭಾರತದಲ್ಲಿ ಹೇಗಿದೆ ಮಳೆ

ಭಾರತ ಹವಾಮಾನ ಇಲಾಖೆ (ಐಎಂಡಿ)ಯ ಪ್ರಕಾರ ಕೇರಳ, ಕರ್ನಾಟಕದ ಕರಾವಳಿ/ದಕ್ಷಿಣ ಒಳನಾಡು ಮತ್ತು ತಮಿಳುನಾಡಿನ ಕೆಲವು ಭಾಗಗಳು ಸೇರಿದಂತೆ ದಕ್ಷಿಣ ಭಾರತದಾದ್ಯಂತ ಪ್ರತ್ಯೇಕವಾಗಿ ಭಾರೀ ಮಳೆ ಆಗಲಿದೆ. ಈ ಪರಿಸ್ಥಿತಿಗಳೊಂದಿಗೆ ಕರಾವಳಿ ಪ್ರದೇಶಗಳಲ್ಲಿ ಮಿಂಚು - ಗುಡುಗು, ಬಿರುಗಾಳಿಯೊಂದಿಗೆ ಭಾರೀ ಮಳೆ ಆಗಲಿದೆ ಎಂದು ಹೇಳಲಾಗಿದೆ. ಇದರ ಹೊರತಾಗಿ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಕೊರತೆ ಎದುರಾಗಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿ ಮಳೆ ಆಗದೆ, ಬೋರ್‌ವೆಲ್‌ಗಳಲ್ಲಿ ನೀರಿನ ಕೊರತೆ ಸೃಷ್ಟಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+