IMD Weather Forecast: ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಆವರಿಸಿ ಅಬ್ಬರಿಸಿ ಬೊಬ್ಬೆರೆಯುತ್ತಿದೆ. ಹಾಗೆಯೇ ಇಂದು (ಜುಲೈ 14) ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ದೇಶದ ಹಲವೆಡೆ ಸಾಧಾರಣ ಮಳೆಯಾದರೆ, ಇನ್ನೂ ಕೆಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುವ ಸಾಧ್ಯತೆಯಿದೆ. ಇನ್ನು ಇಂದು ಬೆಳ್ಳಂಬೆಳಗ್ಗೆಯೇ ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಿರುವ ಬಗ್ಗೆ ವರದಿ ಆಗಿದೆ.

ಹಾಗೆಯೇ ನವದೆಹಲಿ-ಎನ್‌ಸಿಆರ್‌ನಾದ್ಯಂತ ದಿನವಿಡೀ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗರಿಷ್ಠ ತಾಪಮಾನ 32ರಿಂದ 34 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾದರೆ, ಕನಿಷ್ಠ ತಾಪಮಾನ 23 ರಿಂದ 25 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗಲಿದೆ ಎಂದು ತಿಳಿಸಿದೆ.
ಈಗಾಗಲೇ ಭಾನುವಾರ ನವದೆಹಲಿಯಲ್ಲಿ ಗರಿಷ್ಠ ತಾಪಮಾನ 38.4 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 25.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ಋತುಮಾನದ ಸರಾಸರಿಗಿಂತ ಎರಡು ಡಿಗ್ರಿ ಕಡಿಮೆ ಆಗಿದೆ. ಇನ್ನು ಇಂದು ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯೆಲ್ಲೋ ಅಲರ್ಟ್ ಘೋಷಣೆ: ಭಾರೀ ಮಳೆ ಹಿನ್ನೆಲೆ ಹರಿಯಾಣದ ಗುರುಗ್ರಾಮ್, ಫರಿದಾಬಾದ್, ರೇವಾರಿ, ಮೇವಾತ್ ಮತ್ತು ಪಲ್ವಾಲ್ ಸೇರಿದಂತೆ ರಾಷ್ಟ್ರ ರಾಜಧಾನಿ ನವದೆಹಲಿಯ ಕೆಲವು ಭಾಗಗಳಿಗೆ ಮುಂಜಾಗ್ರತಾ ಕ್ರಮವಾಗಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಯಮುನಾನಗರ, ಗನ್ನೌರ್, ಸಹರಾನ್‌ಪುರ, ಗಂಗೋಹ್, ದೇವಬಂದ್, ನಜಿಬಾಬಾದ್, ಶಾಮ್ಲಿ, ಮುಜಾಫರ್‌ನಗರ, ಕಂಧ್ಲಾ, ಬಿಜ್ನೌರ್, ಖತೌಲಿ, ಸಕೋಟಿ ತಾಂಡಾ ಮತ್ತು ಹಸ್ತಿನಾಪುರ ಸೇರಿದಂತೆ ಹರಿಯಾಣ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಉತ್ತರ ಪ್ರದೇಶದ ಝಾನ್ಸಿ, ಅಲಿಗಢ, ಸಂಭಾಲ್, ಬರೇಲಿ, ರಾಂಪುರ, ಗೊಂಡಾ ಮತ್ತು ಅಜಂಗಢ ಸೇರಿದಂತೆ ಹಲವಾರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಮಧ್ಯಪ್ರದೇಶದ ಶಿವಪುರಿ, ಅಶೋಕನಗರ, ಗುಣ, ಶಿಯೋಪುರ್ ಕಲಾನ್ ಮತ್ತು ಮಂದ್ಸೌರ್ ಸೇರಿದಂತೆ ಕೆಲವು ಭಾಗಗಳಿಗೆ ರೆಡ್ ಅಲರ್ಟ್, ಗ್ವಾಲಿಯರ್, ಭಿಂದ್, ಛತ್ತರ್‌ಪುರ ಮತ್ತು ರಾಜ್‌ಗಢದಲ್ಲಿ ಆರೆಂಜ್ ಅಲರ್ಟ್ ಪೂರ್ವ ಮಧ್ಯಪ್ರದೇಶದ ಇತರ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಎಲ್ಲೆಲ್ಲಿ ಮಳೆ?: ರಾಜಸ್ಥಾನ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ರಾಷ್ಟ್ರ ನವದೆಹಲಿ, ಚಂಡೀಗಢ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.












Click it and Unblock the Notifications