IMD Weather Forecast: ಕೆಲವೇ ಕ್ಷಣಗಳಲ್ಲಿ ರಣಭೀಕರ ಮಳೆ ಸುರಿಯುವ ಮುನ್ಸೂಚನೆ
IMD Weather Forecast: ದೇಶದಲ್ಲಿ ಮುಂಗಾರು ಚುರುಕು ಪಡೆದ ಪರಿಣಾಮ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಪರಿಣಾಮ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿರುವ ಘಟನೆಗಳು ನಡೆದಿವೆ. ಹಾಗೆಯೇ ಮುಂದಿನ ಒಂದು ವಾರ ಈ ಭಾಗಗಳಲ್ಲಿ ಗುಡುಗು ಸಹಿತ ಸುನಾಮಿತಂಹ ರಣಣೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತ ಹವಾಮಾನ ಇಲಾಖೆ ಪ್ರಕಾರ, ಮುಂದಿನ ದಿನಗಳಲ್ಲಿ ದೇಶಾದ್ಯಂತ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಹಲವೆಡೆ ಸಾಧಾರಣ ಮಳೆಯಾದರೆ, ಇನ್ನೂ ಕೆಲವೆಡೆ ರಣಭೀಕರ ಮಳಡ ಸುರಿಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ಹವಾಮಾನ ಇಲಾಖೆ ರವಾನಿಸಿದೆ. ಈಗಾಗಲೇ ಭಾರೀ ಮಳೆ ಹಿನ್ನೆಲೆ ಹಲವು ಭಾಗಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎರಡು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಪಶ್ಚಿಮ ಭಾರತದಲ್ಲಿ ಎಲ್ಲೆಲ್ಲಿ ಮಳೆ: ಮಹರಾಷಷ್ಟ್ರ ಮುಂಬೈ, ಗೋವಾದಲ್ಲಿ ಆಗಸ್ಟ್ 20-21ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಗುಜರಾತ್, ಆಗಸ್ಟ್ 20, ಮಧ್ಯ ಮಹಾರಾಷ್ಟ್ರ 20-21ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಗಂಟೆಗೆ ಗಾಳಿ ವೇಗ 50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಆಗಸ್ಟ್ 20ರಂದು ಉತ್ತರ ತೆಲಂಗಾಣ, ಕೇರಳ, ಕರ್ನಾಟಕದ ಉತ್ತರ, ದಕ್ಷಿಣ ಒಳನಾಡು ಹಾಗೂ ಕರಾವಳಿ ಕರ್ನಾಟದಾದ್ಯಂತ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಆಗಸ್ಟ್ 20ರಿಂದ 23ರ ವರೆಗೆ ಕರಾವಳಿ ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.
ಪೂರ್ವ ಮತ್ತು ಮಧ್ಯ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ವಿದರ್ಭ ಆಗಸ್ಟ್ 20, 24, 25, ಛತ್ತೀಸ್‌ಗಢ ಆಗಸ್ಟ್ 24 ಮತ್ತು 25, ಬಿಹಾರ ಆಗಸ್ಟ್ 20ರಿಂದ 25ರ ವರೆಗೆ, ಒಡಿಶಾದಲ್ಲಿ ಆಗಸ್ಟ್ 20ರಿಂದ 23ರ ವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುವ್ಯ ಭಾರತದ ಹವಾಮಾನ: ಉತ್ತರಾಖಂಡದಲ್ಲಿ ಆಗಸ್ಟ್ 23ರಿಂದ 25ರ ವರೆಗೆ, ಪೂರ್ವ ಮತ್ತು ಪಶ್ಚಿಮ ಉತ್ತರ ಪ್ರದೇಶ, ಪಂಜಾಬ್, ಹರಿಯಾಣದಲ್ಲಿ ಆಗಸ್ಟ್ 22ರಿಂದ 25ರ ವರೆಗೆ, ಹಿಮಾಚಲ ಪ್ರದೇಶ, ಪೂರ್ವ ರಾಜಸ್ಥಾನದಲ್ಲಿ ಆಗಸ್ಟ್ 20ರಿಂದ 25ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಶಾನ್ಯ ಭಾರತದ ಹವಾಮಾನ: ಈಶಾನ್ಯ ಭಾಗದಲ್ಲಿ ವಾರವಿಡೀ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅರುಣಾಚಲ ಪ್ರದೇಶದಲ್ಲಿ ಆಗಸ್ಟ್ 21ರಿಂದ 23ರ ವರೆಗೆ,
ಅಸ್ಸಾಂ ಮತ್ತು ಮೇಘಾಲಯ, ಆಗಸ್ಟ್ 21ರಿಂದ 24ರ ವರೆಗೆ, ತ್ರಿಪುರ, ಮಿಜೋರಾಂನಲ್ಲಿ ಆಗಸ್ಟ್ 21ರಿಂದ 25ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ನವದೆಹಲಿ ಹವಾಮಾನದ ವಿವರ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮೋಡ ಕವಿದ ವಾತಾವರಣ, ಅಗಸ್ಟ್ 22 ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ತಾಪಮಾನದಲ್ಲಿ ಗಣನೀಯವಾಗಿ ಇಳಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು (ಆಗಸ್ಟ್ 20) ಗರಿಷ್ಠ ತಾಪಮಾನ 33-35°C ಇದ್ದರೆ, ಕನಿಷ್ಠ ತಾಪಮಾನ 23-25°C ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಈ ನಡುವೆಯೇ ರಣಮಳೆ ಸುರಿಯುವ ಸಾಧ್ಯತೆಯೂ ಇದೆ ಅಂತಲೂ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ಮಹಾರಾಷ್ಟ್ರದ ಮುಂಬೈನಲ್ಲಿ ಭಾರೀ ಮಳೆ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇಂದು (ಆಗಸ್ಟ್ 20) ಸಹ ಭಾರೀ ಮಳೆ ಮುಂದುವರೆದಿದ್ದು, ಮುಂದಿನ ಮೂರು ದಿನ ಇದೇ ರೀತಿಯ ವಾತಾವರಣ ಇರಲಿದೆ ಎನ್ನುವ ಮುನ್ಸೂಚನೆ ಇದೆ.
ಎಲ್ಲೆಲ್ಲಿ ರಜೆ ಘೋಷಣೆ?: ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮುಂಬೈನ ಹಲವು ಭಾಗಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಲಡಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಲವೆಡೆ ಬುಧವಾರ ಮತ್ತು ಗುರುವಾರ ಎರಡು ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಪನ್ವೇಲ್ ಮುನ್ಸಿಪಲ್ ಕಾರ್ಪೊರೇಷನ್ ಆಗಸ್ಟ್ 20ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಅಲ್ಲದೆ, ಥಾಣೆಯಲ್ಲಿ ನಾಳೆ ಶಾಲೆಗಳು ಮುಚ್ಚಲ್ಪಡುತ್ತವೆ. ಪುಣೆಯಲ್ಲಿ ಆಗಸ್ಟ್ 21ರ ವರೆಗೆ ರಜೆ ಘೋಷಿಸಿದೆ ಎಂದು ತಿಳಿದುಬಂದಿದೆ. ಲೋನಾವಾಲ ಮುನ್ಸಿಪಲ್ ಕೌನ್ಸಿಲ್ ತನ್ನ ವ್ಯಾಪ್ತಿಯಲ್ಲಿರುವ ಎಲ್ಲಾ ಶಾಲೆಗಳಿಗೆ ಆಗಸ್ಟ್ 20 ಮತ್ತು 21ರಂದು ಎರಡು ದಿನಗಳ ಸ್ಥಳೀಯ ರಜೆಯನ್ನು ಘೋಷಿಸಿವೆ. ಹೀಗೆ ಮಳೆ ಮುಂದುವರೆದೆ, ರಜೆ ಕೂಡ ಮುಂದೂಡಿಕೆಯಾಗುವ ಸಾಧ್ಯತೆಯಿದೆ.
ಇದಕ್ಕೂ ಮುಂಚೆ ಆಗಸ್ಟ್ 20 ರಂದು ಮುಂಬೈಗೆ ರೆಡ್ ಅಲರ್ಟ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ ಎನ್ನುವ ಸುದ್ದಿಗಳು ಹರಡಿದ್ದವು. ಆದರೆ, ಬಿಎಂಸಿ ಈ ಸೂಚನೆ ನಕಲಿ ಎಂದು ಹೇಳಿದೆ. ಬಿಎಂಸಿ ಶಾಲೆಗಳು-ಕಾಲೇಜುಗಳನ್ನು ಮುಚ್ಚುವುದಾಗಿ ಘೋಷಿಸಿಲ್ಲ ಎಂದು ತಿಳಿಸಿತ್ತು.












Click it and Unblock the Notifications