IMD Weather Forecast: ಈ ಭಾಗಗಳಲ್ಲಿ ದಟ್ಟ ಮಂಜು, ಭೀಕರ ಚಳಿ ನಡುವೆ ನಾಲ್ಕು ದಿನ ಬಿರುಗಾಳಿ ಮಳೆ ಸಾಧ್ಯತೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಭೀಕರ ಚಳಿ ಮುಂದುವರೆದಿದೆ. ಈ ನಡುವೆಯೇ ಈ ಭಾಗಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು (ಜನವರಿ 22) ಬೆಳಗ್ಗೆ ದಟ್ಟ ಮಂಜು, ಭಾರೀ ಚಳಿಗಾಳಿ ಮುಂದುವರೆದಿತ್ತು. ಮುಂದಿನ ಹಲವು ದಿನಗಳವರೆಗೆ ಇದೇ ರೀತಿಯ ವಾತಾವರಣ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಮುಂದಿನ ದಿನಗಳಲ್ಲಿ ದೇಶಾದ್ಯಂತ ಹವಾಮಾನದಲ್ಲಿ ಗನಾರ್ಹ ಬದಲಾವಣೆ ಆಗಲಿದ್ದು, ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ನಾಲ್ಕು ದಿನ ಭಾರೀ ಮಳೆ: ಜನವರಿ 26ರ ವರೆಗೆ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ಸೇರಿದಂತೆ ಪಶ್ಚಿಮ ಹಿಮಾಲಯನ್ ರಾಜ್ಯಗಳಲ್ಲಿ ವ್ಯಾಪಕ ಮಳೆ, ಹಿಮಪಾತವಾಗುವ ಸಾಧ್ಯತೆಯಿದೆ. ಅದರಲ್ಲೂ ಜನವರಿ 22 ಮತ್ತು 23ರಂದು ಕಾಶ್ಮೀರ ಕಣಿವೆಯಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಜನವರಿ 24ರ ವರೆಗೆ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗಾಳಿ ಗುಣಮಟ್ಟದಲ್ಲಿ ಸುಧಾರಣೆ ಸಾಧ್ಯತೆ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಜನವರಿ 22 ಮತ್ತು 23ರಂದು ಚಳಿ ನಡುವೆಯೇ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯಾದರೆ, ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ ಆಗಲಿದೆ. ಜೊತೆಗೆ ತಂಪಾದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ವಾಯುವ್ಯ ಭಾರತದಾದ್ಯಂತ ಕನಿಷ್ಠ ತಾಪಮಾನವು 2 ರಿಂದ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಹಚ್ಚಳ ಆಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಪ್ರತ್ಯೇಕವಾಗಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications