Imd Weather Forecast: ಸೆಪ್ಟೆಂಬರ್ 3ರ ವರೆಗೆ ಈ ಭಾಗಗಳಲ್ಲಿ ಧಾರಾಕಾರ ಮಳೆ: ಐಎಂಡಿ ಮುನ್ಸೂಚನೆ!
Imd Weather Forecast: ದೇಶದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಸೆಪ್ಟೆಂಬರ್ 1ರ ವರೆಗೆ ಕರ್ನಾಟಕವೂ ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ದೆಹಲಿ - ಮುಂಬೈ ಸೇರಿದಂತೆ ವಿವಿಧ ನಗರಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಕರ್ನಾಟಕದ ಕರಾವಳಿ ಭಾಗದಲ್ಲೂ ಮಳೆ ಆರ್ಭಟ ಜೋರಾಗಿದೆ.
ಈಶಾನ್ಯ ಉತ್ತರ ಪ್ರದೇಶ ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟಕ್ಕಿಂತ 4.5 ಕಿ.ಮೀ ವರೆಗೆ ವಿಸ್ತರಿಸಿರುವ ಕಡಿಮೆ ಒತ್ತಡದ ಪ್ರದೇಶವು ಅದೇ ಪ್ರದೇಶದಲ್ಲಿ ಮುಂದುವರಿದಿದೆ. ಮುಂದಿನ 24 ಗಂಟೆಗಳಲ್ಲಿ ಇದು ಕಡಿಮೆಯಾಗುವ ಸಾಧ್ಯತೆಯಿದೆ. ಸರಾಸರಿ ಸಮುದ್ರ ಮಟ್ಟದಲ್ಲಿ ಮಾನ್ಸೂನ್ ಟ್ರಫ್‌ಈಗ ಅಮೃತಸರ, ಡೆಹ್ರಾಡೂನ್, ಖೇರಿ, ಈಶಾನ್ಯ ಉತ್ತರ ಪ್ರದೇಶ ಮತ್ತು ನೆರೆಹೊರೆ, ಮಧುಪುರ, ಬಂಕುರಾ ಮತ್ತು ಅಲ್ಲಿಂದ ಆಗ್ನೇಯಕ್ಕೆ ಈಶಾನ್ಯ ಬಂಗಾಳ ಕೊಲ್ಲಿಯವರೆಗೆ ಹಾದುಹೋಗುತ್ತದೆ.

ಉತ್ತರ ಬಂಗಾಳ ಕೊಲ್ಲಿ ಮತ್ತು ಪಕ್ಕದ ಪಶ್ಚಿಮ ಬಂಗಾಳ-ಬಾಂಗ್ಲಾದೇಶ ಕರಾವಳಿಗಳಲ್ಲಿ ಮೇಲಿನ ವಾಯುವ್ಯ ಸುಳಿಗಾಳಿ ಮುಂದುವರಿದಿದೆ ಮತ್ತು ಈಗ ಸರಾಸರಿ ಸಮುದ್ರ ಮಟ್ಟದಿಂದ 7.6 ಕಿ.ಮೀ ವರೆಗೆ ನೈಋತ್ಯಕ್ಕೆ ಎತ್ತರಕ್ಕೆ ವಿಸ್ತರಿಸಿದೆ. ಇದರ ಪ್ರಭಾವದಡಿಯಲ್ಲಿ, ವಾಯುವ್ಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಪಶ್ಚಿಮ ಬಂಗಾಳ- ಉತ್ತರ ಒಡಿಶಾ ಕರಾವಳಿಗಳಲ್ಲಿ ಆಗಸ್ಟ್ 29, 2026 ರ ಸುಮಾರಿಗೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಮುಂಬೈ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಳೆ ಮುಂದುವರಿದಿದೆ. ಭಾರತದ ವಿವಿಧ ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಸಕ್ರಿಯವಾಗಿದೆ. ದೆಹಲಿ - ಎನ್‌ಸಿಆರ್‌ನಲ್ಲಿ ಸಾಧಾರಣ ಮಳೆ ಮುಂದುವರಿದಿದೆ. ನೋಯ್ಡಾ ಮತ್ತು ಗಾಜಿಯಾಬಾದ್‌ನ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ವಿವಿಧ ಭಾಗಗಳಲ್ಲಿ ಆಗಸ್ಟ್ 29 ರಿಂದ ಸೆಪ್ಟೆಂಬರ್ 2 ರವರೆಗೆ ದೆಹಲಿಯಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಮಧ್ಯ, ಪೂರ್ವ ಮತ್ತು ಉತ್ತರ ಭಾರತದಲ್ಲಿ ಅತ್ಯಂತ ಸಕ್ರಿಯವಾದ ಮಾನ್ಸೂನ್ ಪರಿಸ್ಥಿತಿ ಇದ್ದರೂ ಕರಾವಳಿ ಪ್ರದೇಶಗಳ ಮಿಂಚು ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
Imd Weather Forecast: ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ
ಇನ್ನು ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಕೇರಳದ ಕೆಲವು ಪ್ರದೇಶಗಳಲ್ಲಿ ಪ್ರತ್ಯೇಕವಾದ ಅಥವಾ ಚದುರಿದ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ರಾಜಸ್ಥಾನ ಮತ್ತು ಗುಜರಾತ್‌ನ ಕೆಲವು ಭಾಗಗಳಲ್ಲಿ ಒಣಹವೆ ಮುಂದುವರಿದಿದೆ.
Imd Weather Forecast: ಕರ್ನಾಟಕದಲ್ಲಿ ಸೆಪ್ಟೆಂಬರ್ 3ರ ವರೆಗೆ ಮಳೆ
ಇನ್ನು ಕರ್ನಾಟಕದ ವಿವಿಧ ಭಾಗಗಳಲ್ಲೂ ಮಳೆ ಆರ್ಭಟ ಮುಂದುವರಿದಿದೆ. ಸೆಪ್ಟೆಂಬರ್ 3ರ ವರೆಗೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಬೆಳಗಾವಿ, ಧಾರವಾಡ,ಹಾವೆೇರಿ, ಬಾಗಲಕೋಟೆ, ಬೀದರ್, ಗದಗ, ಕಲಬರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.


Click it and Unblock the Notifications
