IMD Weather Forecast: ಈ ಭಾಗಗಳಲ್ಲಿ ನವೆಂಬರ್ 2ರ ವರೆಗೂ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ದೇಶದ ಹಲವೆಡೆ ಭಾರೀ ಮಳೆ ಮುಂದುವರೆದಿದೆ. ಇದೀಗ ಮೋಂಥಾ ಚಂಡಮಾರುತ ಪರಿಣಾಮ ಈ ಭಾಗಗಳಲ್ಲಿ ಮುಂದಿನ ಎರಡು ದಿನ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಚಂಡಮಾರುತ ಪರಿಣಾಮ ಈ ವಾರಾಂತ್ಯದವರೆಗೂ ಹಲವೆಡೆ ಸಾಧಾರಣ ಮಳೆಯಾದ್ರೆ, ಇನ್ನೂ ಕೆಲವೆಡೆ ರಣಭೀಕರ ಮಳೆ ಸುರಿಯುವ ಸಾಧ್ಯತೆ ಇದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ದೇಶದ ಹಲವು ಭಾಗಗಳಲ್ಲಿ ನವೆಂಬರ್ 2 ರವರೆಗೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇದೀಗ ಮೊಂಥಾ ಚಂಡಮಾರುತ ಪ್ರಭಾವ ಬೀರಿದ್ದು, ಇದು ಪೂರ್ವ-ಮಧ್ಯ ಅರೇಬಿಯನ್ ಸಮುದ್ರದವರೆಗೂ ವ್ಯಾಪಿಸಿದೆ. ಈ ಹಿನ್ನೆಲೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪಶ್ಚಿಮ ಬಂಗಾಳ, ಸಿಕ್ಕಿಂ ಬಿಹಾರ, ಜಾರ್ಖಂಡ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಬಿಹಾರದಲ್ಲಿ ಇಂದು ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗಲಿದ್ದು, ಗಂಟೆಗೆ 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 31ರಂದು ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಮಳೆಯಾಗಲಿದ್ದು, ಮಧ್ಯಪ್ರದೇಶದಲ್ಲಿ ಮುಂದಿನ 5 ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದೇ ವೇಳೆ ಗುಜರಾತ್, ಸೌರಾಷ್ಟ್ರ ಮತ್ತು ಕಚ್ ಪ್ರದೇಶದಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಇನ್ನು ಗುಜರಾತ್‌ನಲ್ಲಿ ಭಾರೀ ಮಳೆಯೊಂದಿಗೆ, ಗಾಳಿಯ ವೇಗವು ಗಂಟೆಗೆ 65 ಕಿಲೋ ಮೀಟರ್‌ವರೆಗೆ ಬೀಸುವ ಸಾಧ್ಯತೆಯಿದೆ. ಮಹಾರಾಷ್ಟ್ರದಲ್ಲಿ ಮುಂದಿನ ಎರಡು ದಿನ ಇದೇ ರೀತಿಯ ಹವಾಮಾನ ಇರಲಿದೆ ಎಂದು ತಿಳಿಸಿದೆ. ಅಲ್ಲದೆ, ಅರುಣಾಚಲ ಪ್ರದೇಶ, ಪೂರ್ವ ಉತ್ತರ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 31 ಮತ್ತು ನವೆಂಬರ್ 1ರಂದು ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್ ಮತ್ತು ಮೇಘಾಲಯದ ಕೆಲವು ಸ್ಥಳಗಳಲ್ಲಿ ಹಗುರದಿಂದ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 31ರಂದು ಪೂರ್ವ ಉತ್ತರ ಪ್ರದೇಶದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.
ನವೆಂಬರ್ 3ರಿಂದ 5ರ ವರೆಗೂ ವಾಯುವ್ಯ ಭಾರತದಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಈ ಭಾಗದಲ್ಲಿ ಗಂಟೆಗೆ 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ದಕ್ಷಿಣ ಭಾರತದ ಕರ್ನಾಟಕ, ಕೇರಳ, ತಮಿಳುನಾಡು ಭಾಗದ ಹಲವೆಡೆಯೂ ಮಳೆಯಾಗಲಿದೆ ಎಂದು ತಿಳಿಸಿದೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಿಂದ ಪ್ರವಾಹದ ವಾತಾವರಣ ನಿರ್ಮಾಣವಾಗಿದೆ.












Click it and Unblock the Notifications