IMD Weather Forecast: ಈ ಭಾಗಗಳಲ್ಲಿ ಸೆಪ್ಟೆಂಬರ್ 5ರಿಂದ ಮುಂದಿನ ಮೂರ್ನಾಲ್ಕು ದಿನ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮತ್ತೆ ಚುರುಕು ಪಡೆದಿದೆ. ಈಗಾಗಲೇ ಭಾರೀ ಮಳೆಯಿಂದಾಗಿದೆ ಹಲವೆಡೆ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಹಾಗೆಯೇ ಈ ಭಾಗಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಬಿರುಗಾಳಿ ಸಹಿತ ರಣಭೀಕರ ಮಳಡ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು ದಿನಗಳ ಕಾಲ ಹಲವೆಡೆ ಸಾಧಾರಣ ಮಳೆಯಾದ್ರೆ, ಇನ್ನೂ ಕೆಲವು ರಾಜ್ಯಗಳಲ್ಲಿ ರಣಭೀಕರ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಭಾರೀ ಮಳೆಯಿಂದ ಕಲವೆಡೆ ಪ್ರವಾಹ ಸಂಭವಿಸಿ ಪ್ರಾಣಹಾನಿಯಾಗಿವೆ. ಅಲ್ಲದೆ, ಮನೆ-ಮಠಗಳನ್ನು ಕಳೆದುಕೊಂಡು ಜನರು ಬೀದಿಗೆ ಬಂದಿರುವ ಘಟನೆಗಳು ನಡೆದಿವೆ. ಈ ಬಾರಿ ಇಂತಹ ಹೆಚ್ಚು ಘಟನೆಗಳು ನಡೆದಿರುವುದೇ ಉತ್ತರ ಭಾರತದ ರಾಜ್ಯಗಳಲ್ಲಿ.

ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಇಂದು (ಸೆಪ್ಟೆಂಬರ್ 5) ಗುಜರಾತ್‌ಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆರಾಯ ಅಬ್ಬರಿಸುತ್ತಲೇ ಇದ್ದಾನೆ. ಇನ್ನು ನವದೆಹಲಿ, ಗುರುಗ್ರಾಮ್ ಮತ್ತು ನೋಯ್ಡಾ ಭಾಗದಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಇಂದು ಈ ಭಾಗಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ ಎಂದು ತಿಳಿಸಿದೆ.
ಈಗಾಗಲೇ ಭಾರೀ ಮಳೆಯಿಂದ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿದ ಪರಿಣಾಮ ರಾಷ್ಟ್ರ ರಾಜಧಾನಿ ನವದೆಹಲಿಯ ಹಲವೆಡೆ ರಸ್ತೆಗಳು ಸಂಚಾರಗಳು ಬಂದ್ ಆಗಿ ವಾಹನ ಸವಾರರು ಪರದಾಡಿದ ಘಟನೆಗಳು ನಡೆದಿವೆ. ಇದೀಗ ಮಳೆ ಪ್ರಮಾಣ ತಗ್ಗಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಇನ್ನು ಇಂದು ಮುಂದಿನ 3 ಗಂಟೆಗಳಲ್ಲಿ ಫರಿದಾಬಾದ್, ಗುರುಗ್ರಾಮ್, ಝಜ್ಜರ್, ಜಿಂದ್, ಕರ್ನಾಲ್, ಕುರುಕ್ಷೇತ್ರ, ನುಹ್, ಪಲ್ವಾಲ್, ಪಾಣಿಪತ್, ರೇವಾರಿ, ರೋಹ್ಟಕ್, ಸೋನಿಪತ್, ಯಮುನಾನಗರದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ಸೆಪ್ಟೆಂಬರ್ 7ರ ವರೆಗೆ ಭಾರೀ ಮಳೆ: ಸೆಪ್ಟೆಂಬರ್ 5 ರಿಂದ 6ರವರೆಗೆ ಗುಜರಾತ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೋಯ ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಇಲ್ಲಿನ ಸೌರಾಷ್ಟ್ರ ಮತ್ತು ಕಚ್ ಪ್ರದೇಶದಲ್ಲಿ ಸೆಪ್ಟೆಂಬರ್ 6ರಿಂದ 7ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ನಾಲ್ಕು ದಿನ ರಣಮಳೆ ಮುನ್ಸೂಚನೆ: ಮುಂದಿನ ನಾಲ್ಕು ದಿನಗಳವರೆಗೆ ರಾಜಸ್ಥಾನದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೌಸಾ ಜಿಲ್ಲೆಯ ಸಿಕ್ರಿಯಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು 104 ಮಿ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ರಾಜ್ಯದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯೆಲ್ಲೋ ಅಲರ್ಟ್ ಘೋಷಣೆ: ರಾಜ್ಯದ ಉದಯಪುರ, ಬುಂಡಿ ಮತ್ತು ಬನ್ಸ್ವಾರಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ ಎಂದು ವರದಿ ಆಗಿದೆ. ಇನ್ನು ಇಂದು (ಸೆಪ್ಟೆಂಬರ್ 5) ಭಾರೀ ಮಳೆ ಹಿನ್ನೆಲೆ ಸಿರೋಹಿ, ನಾಗೌರ್, ಪಾಲಿ, ಟೋಂಕ್ ಸೇರಿದಂತೆ ಇತರ ಹಲವು ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಯೆಲ್ಲೂ ಅಲರ್ಟ್ ಘೋಷಣೆ ಮಾಡಿದೆ.
ಸೆಪ್ಟೆಂಬರ್ 7ರ ವರೆಗೆ ಒಡಿಶಾದಲ್ಲಿ ಭಾರಿ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾದ ಘಟನೆಗಳು ನಡೆದಿವೆ. ಅದರಲ್ಲೂ ಬಾಲಸೋರ್, ಭದ್ರಕ್, ಕಟಕ್, ಭುವನೇಶ್ವರ ಮತ್ತು ಬೋಲಂಗೀರ್ ಜಿಲ್ಲೆಗಲ್ಲಿ ಹೆಚ್ಚು ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಉಗ್ರ ಸ್ವರೂಪ ತಾಳಿದ ಯಮುನೆ: ಭಾರೀ ಮಳೆಯಿಂದ ಯಮುನಾ ನದಿ ಅಪಾಯಾದ ಮಟ್ಟ ಮೀರಿ ಹರಿದ ಪರಿಣಾಮ ನವದೆಹಲಿಯ ಹಲವೆಡೆ ಜಲಪ್ರಳಯ ಸಂಭವಿಸಿದೆ. ಇನ್ನು ಹಳೆಯ ರೈಲ್ವೆ ಸೇತುವೆಯ ಬಳಿ ಯಮುನಾ ನದಿಯಲ್ಲಿ ನೀರಿನ ಮಟ್ಟ ಶುಕ್ರವಾರ ಬೆಳಗ್ಗೆ 7 ಗಂಟೆಗೆ 207.33 ಮೀಟರ್‌ಗೆ ತಲುಪಿದೆ ಎಂದು ತಿಳಿದುಬಂದಿದೆ. ಇನ್ನು ದಕ್ಷಿಣದ ಕೆಲ ರಾಜ್ಯಗಳಲ್ಲಿಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕರ್ನಾಟಕದ ಕರಾವಳಿ ಭಾಗದ ಜಿಲ್ಲೆಗಳು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಾಗೂ ತಮಿಳುನಾಡು, ಕೇರಳ, ಗೋವಾದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.












Click it and Unblock the Notifications