IMD Weather Forecast: ಈ ಭಾಗಗಳಲ್ಲಿ ಮುಂದಿನ 4-5 ದಿನ ಬಿರುಗಾಳಿ ಸಹಿತ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ಚಂಡಮಾರುತ ಪ್ರಸರಣ ಹಿನ್ನೆಲೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ನಾಲ್ಕೈದು ದಿನಗಳ ಕಾಲ ಈ ಭಾಗಗಳಲ್ಲಿ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಚಂಡಮಾರುತ ಹಿನ್ನೆಲೆ ಈಗಾಗಲೇ ಭಾರೀ ಮಳೆಯಿಂದ ಹಲವು ರಾಜ್ಯಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ನಿರ್ಮಾಣವಾಗಿವೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು ದಿನಗಳ ಕಾಲ ಹಲವೆಡೆ ಸಾಧಾರಣೆ ಮಳೆಯಾಗಲಿದ್ದು, ಇನ್ನೂ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದೇಶದ ಹಲವು ಭಾಗಗಳಲ್ಲಿ ಮುಂದಿನ 4-5 ದಿನಗಳ ಕಾಲ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪ್ರಸರಣ ಪರಿಣಾಮ ಉತ್ತರ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಮುಂದಿನ 2-3 ದಿನ ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ರಣಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಅಲ್ಲದೆ, ಇನ್ನೂ ಕೆಲವೇ ಕ್ಷಣಗಳಲ್ಲಿ ಆಂಧ್ರಪ್ರದೇಶ, ಅಸ್ಸಾಂ, ಮೇಘಾಲಯ, ಕೇರಳ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಒಡಿಶಾ, ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳು, ತೆಲಂಗಾಣ, ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನಿಡಿದೆ.
ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳು, ಆಂಧ್ರಪ್ರದೇಶದ ಕರಾವಳಿ, ಯಾಣಂ ಮತ್ತು ರಾಯಲಸೀಮಾದಲ್ಲಿ ಮುಂದಿನ ಹಲವು ದಿನಗಳ ಜಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ತಮಿಳುನಾಡು, ಕೇರಳ, ಮಾಹೆ, ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ವಾಯುವ್ಯ ಭಾರತದ ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ, ಪೂರ್ವ ಭಾರತದ ಪಶ್ಚಿಮ ಬಂಗಾಳ ಮತ್ತು ಒಡಿಶಾದ ಗಂಗಾ ನದಿ ತೀರ, ಈಶಾನ್ಯ ಭಾರತದ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ರಾಷ್ಟ್ರ ರಾಜಧಾನಿ ನವದೆಹಲಿ ಹವಾಮಾನ: ರಾಷ್ಟ್ರ ರಾಜಧಾನಿ ದೆಹಲಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಆದರೆ, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ರಿಂದ 33°C ವರೆಗೂ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಹವಾಮಾನ ಮುನ್ಸೂಚನೆ: ರಾಜ್ಯ ರಾಜಧಾನಿ ಬೆಂಗಳೂರಿನ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ನಗರದಲ್ಲಿ ಇಂದಿನಿಂದ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ನಗರದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 20°C ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ರಾಮನಗರ, ಮೈಸೂರು, ಕೊಡಗು, ಹಾಸನ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ವಿಜಯನಗರ, ಮಂಡ್ಯ, ಮಂಡ್ಯ, ಮಂಡ್ಯ, ಮಂಡ್ಯ, ಮಂಡ್ಯ, ಮಂಡ್ಯ, ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ನಿರೀಕ್ಷಿಸಲಾಗಿದೆ.












Click it and Unblock the Notifications