IMD Weather Forecast: ಈ ಭಾಗಗಳಲ್ಲಿ ಮುಂದಿನ 5 ದಿನ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಚರುಕು ಪಡೆದಿದೆ. ಹಾಗೆಯೇ ಮುಂದಿನ ಐದು ದಿನಗಳ ಕಾಲ ಈ ಭಾಗಗಳಲ್ಲಿ ಗುಡಗು ಸಹಿತ ಭಾರೀ ಮಳೆ ಸುರಿಯವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಇಂದು (ಜುಲೈ 18) ಭಾರತೀಯ ಹವಾಮಾನ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಹಲವಾರು ರಾಜ್ಯಗಳಿಗೆ ರೆಡ್‌ ಅಲರ್ಟ್‌ ನೀಡಿದರೆ, ಇನ್ನೂ ಕಲವು ಭಾಗಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.

IMD Weather Forecast Heavy rain in These states for next 5 days from July 18

ಎಲ್ಲೆಲ್ಲಿ ಮಳೆ?: ಜುಲೈ 18-19ರಂದು ಉತ್ತರ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ, ಜುಲೈ 18ರಂದು ರಾಜಸ್ಥಾನದಲ್ಲಿ 21 ಸೆಂ.ಮೀ.ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಜುಲೈ 18 ರಿಂದ 23ರ ವರೆಗೆ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಪೂರ್ವ ಉತ್ತರ ಪ್ರದೇಶದಲ್ಲಿ ಜುಲೈ 18ರಿಂದ 23ರ ವರೆಗೆ ಉತ್ತರಾಖಂಡ, 18, 20 ಮತ್ತು 21ರಂದು ಪಶ್ಚಿಮ ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಜುಲೈ 18ರಿಂದ 20ರ ವರೆಗೆ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಜುಲೈ 18 ಶುಕ್ರವಾರ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅದರಲ್ಲೂ ತಮಿಳುನಾಡು, ಕರ್ನಾಟಕದಾದ್ಯಂತ, ಕರಾವಳಿ ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಧ್ಯ ಮತ್ತು ಪೂರ್ವ ಭಾರತದಲ್ಲಿ ಭಾರೀ ಮಳೆ: ಜುಲೈ 23ರ ವರೆಗೂ ಮಧ್ಯಪ್ರದೇಶ, ಛತ್ತೀಸ್‌ಗಢ, ಬಿಹಾರ, ಒಡಿಶಾ, ಮತ್ತು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಸೇರಿದಂತೆ ಇತರ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಪಶ್ಚಿಮ ಮತ್ತು ಈಶಾನ್ಯ ಭಾರತದಲ್ಲಿ ರಣಮಳೆ: ಜುಲೈ 18ರಿಂದ 23ರ ವರೆಗೆ ಕೊಂಕಣ ಮತ್ತು ಗೋವಾ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ. ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡದ ಘಾಟ್ ಪ್ರದೇಶಗಳಲ್ಲಿಯೂ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ. ಇನ್ನು ಈಶಾನ್ಯದಲ್ಲಿ ಜುಲೈ 18 ಹಾಗೂ 19 ರಂದು ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಮೀನುಗಾರರಿಗೆ ಪ್ರಮುಖ ಸಲಹೆ: ಭಾರೀ ಮಳೆ ಹಿನ್ನೆಲೆ ಜುಲೈ 18 ರಿಂದ 22ರ ವರೆಗೆ ಕೇರಳ ಮತ್ತು ಕರ್ನಾಟಕ ಕರಾವಳಿಯ ಸಮೀಪವಿರುವ ಪ್ರದೇಶಗಳು, ಲಕ್ಷದ್ವೀಪ, ಮನ್ನಾರ್ ಕೊಲ್ಲಿ ಮತ್ತು ಅಂಡಮಾನ್ ಸಮುದ್ರದ ಕೆಲವು ಭಾಗಗಳು ಸೇರಿದಂತೆ ಅರೇಬಿಯನ್ ಸಮುದ್ರ ಮತ್ತು ಬಂಗಾಳಕೊಲ್ಲಿಗೆ ಮೀನುಗಾರರು ಹೋಗಬಾರದು ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+