IMD Weather Forecast: ಈ ಭಾಗಗಳಲ್ಲಿ ಮುಂದಿನ 6 ದಿನ ಗುಡುಗು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ

IMD Weather Forecast: ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ 6 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂಬರುವ ಒಂದು ವಾರ ದೇಶದ ಹಲವೆಡೆ ವ್ಯಾಪಕವಾಗಿ ಭಾರೀ ಮಳೆಯಾದ್ರೆ, ಇನ್ನೂ ಕೆಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ. ಹಾಗಾದ್ರೆ ಎಲ್ಲೆಲ್ಲಿ ಎಲ್ಲಿವರೆಗೈ ಮಳೆ ಎನ್ನುವ ಇಂಚಿಂಚು ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.

IMD Weather Forecast Heavy rain in These states for next 6 days from July 17

ವಾಯುವ್ಯ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ಪರಿಣಾಮ ವಾಯುವ್ಯ ಭಾರತದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜುಲೈ 17ರಿಂದ 22ರ ವರೆಗೆ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಪಂಜಾಬ್‌ನಲ್ಲಿ ಅಲ್ಲಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 17 ಪಶ್ಚಿಮ ಉತ್ತರ ಪ್ರದೇಶ, ಪೂರ್ವ ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಪಶ್ಚಿಮ ರಾಜಸ್ಥಾನ, ಜುಲೈ 17, 21, 22ರಂದು ಪಂಜಾಬ್‌, ಹರಿಯಾಣ ಅಲ್ಲಲ್ಲಿ ಪ್ರತ್ಯೇಕವಾಗಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪೂರ್ವ ಮತ್ತು ಮಧ್ಯ ಭಾರತದ ಹವಾಮಾನ: ಜುಲೈ 17, 20, 21 ಬಿಹಾರ, ಜುಲೈ 17 ಜಾರ್ಖಂಡ್ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಜುಲೈ 17, 18, 21, 22ರಂದು ಛತ್ತೀಸ್‌ಗಢದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜುಲೈ 17 ಮತ್ತು 18 ಪೂರ್ವ ಮಧ್ಯಪ್ರದೇಶ, ಪಶ್ಚಿಮ ಮಧ್ಯಪ್ರದೇಶ, ಜುಲೈ 21 ಮತ್ತು 22 ಒಡಿಶಾ, ಜುಲೈ 19-22ರ ವರೆಗೆ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪಶ್ಚಿಮ ಭಾರತದ ಹವಾಮಾನ: ಜುಲೈ 20ರಿಂದ 22ರ ವರೆಗೆ ಕೊಂಕಣ ಮತ್ತು ಗೋವಾ, ಜುಲೈ 17ರಂದು ಮಧ್ಯ ಮಹಾರಾಷ್ಟ್ರ, ಇನ್ನು ಜುಲೈ 19ರಿಂದ ಈಶಾನ್ಯ ರಾಜ್ಯಗಳಲ್ಲಿ, ಅದರಲ್ಲೂ ವಿಶೇಷವಾಗಿ ಅರುಣಾಚಲ ಪ್ರದೇಶ ಮತ್ತು ಅಸ್ಸಾಂನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

ಜುಲೈ 19ರಿಂದ 22ರ ವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಅಲ್ಲಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 19 ಮತ್ತು 20ರಂದು ಮಿಜೋರಾಂ ಮತ್ತು ತ್ರಿಪುರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಜುಲೈ 17ರಿಂದ 22ರ ವರೆಗೆ ಕೇರಳ, ತಮಿಳುನಾಡು, ಕರ್ನಾಟಕದ ದಕ್ಷಿಣ ಒಳನಾಡು, ಜುಲೈ 18ರಿಂದ 20ರ ವರೆಗೆ ಆಂಧ್ರಪ್ರದೇಶದ ಕರಾವಳಿ, ಜುಲೈ 17ರಿಂದ 19ರ ವರೆಗೆ ತೆಲಂಗಾಣದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಜುಲೈ 19 ಹಾಗೂ 20ರಂದು ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ರಾಷ್ಟ್ರ ರಾಜಧಾನಿ ಹವಾಮಾನದ ವಿವರ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಜುಲೈ 19ರ ವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+