IMD Weather Forecast: ಈ ಭಾಗಗಳಲ್ಲಿ ಒಂದು ವಾರ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ಏಳು ದಿನಗಳ ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಮುಂದಿನ ಹಲವು ದಿನಗಳ ಕಾಲ ದೇಶದ ಹಲವೆಡೆ ಸಾಧಾರಣ ಮಳೆಯಾದ್ರೆ, ಇನ್ನೂ ಕೆಲವು ಭಾಗಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

IMD Weather Forecast Heavy rain in These states for next 7 days from July 16

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು (ಜುಲೈ 16) ಮೋಡ ಕವಿದ ವಾತಾವರಣ ಇದ್ದು, ಗುಡುಗು, ಮಿಂಚು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗರಿಷ್ಠ ತಾಪಮಾನ 31ರಿಂದ 33°C ವರೆಗೆ ಮತ್ತು ಕನಿಷ್ಠ ತಾಪಮಾನ 23 ರಿಂದ 25°C ವರೆಗೆ ದಾಖಲಾಗಬಹುದು ಎಂದು ತಿಳಿಸಿದೆ.

ಇಂದು ಯಾವೆಲ್ಲಾ ರಾಜ್ಯಗಳಿಗೆ ಆರೆಂಜ್‌ ಅಲರ್ಟ್‌: ಕೇರಳ, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ, ಬಿಹಾರ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.

ವಾಯುವ್ಯ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಜುಲೈ 16ರಿಂದ 21ರ ವರೆಗೆ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ ಮತ್ತು ಪೂರ್ವ ಉತ್ತರ ಪ್ರದೇಶ, ಜುಲೈ 16, 17 ಮತ್ತು 21ರಂದು ಪಂಜಾಬ್‌ ಮತ್ತು ಜುಲೈ 17 ಮತ್ತು 21ರಂದು ಹರಿಯಾಣದಲ್ಲೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 16 ರಂದು ಜಮ್ಮು ಮತ್ತು ಕಾಶ್ಮೀರ, ಪೂರ್ವ ರಾಜಸ್ಥಾನ, ಜುಲೈ 17, 20 ಮತ್ತು 21ರಂದು ಉತ್ತರಾಖಂಡ ಮತ್ತು ಜುಲೈ 16 ಮತ್ತು 17ರಂದು ಪೂರ್ವ ಉತ್ತರ ಪ್ರದೇಶ, ಇನ್ನು ಮುಂದಿನ ಒಂದು ವಾರ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ರವಾನೆ ಮಾಡಿದೆ.

ಪೂರ್ವ ಮತ್ತು ಮಧ್ಯ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಜುಲೈ 16-19ರ ವರೆಗೆ ಮಧ್ಯಪ್ರದೇಶ, ಜುಲೈ 16 ಮತ್ತು 17ರಂದು ಛತ್ತೀಸ್‌ಗಢ, ಬಿಹಾರ ಮತ್ತು ಜಾರ್ಖಂಡ್‌, ಜುಲೈ 16ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಜುಲೈ 19 - 21ರ ವರೆಗೆ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಜುಲೈ 18ರಂದು ಪಶ್ಚಿಮ ಮಧ್ಯಪ್ರದೇಶ, ಜುಲೈ 16 ಮತ್ತು 17ರಂದು ಪೂರ್ವ ಮಧ್ಯಪ್ರದೇಶ ಹಾಗೂ ಬಿಹಾರ, ಜಾರ್ಖಂಡ್, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪಶ್ಚಿಮ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಜುಲೈ 20 ಮತ್ತು 21ರಂದು ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರದ ಘಾಟ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಗೋವಾದಲ್ಲಿ ಮುಂದಿನ ಐದು ದಿನಗಳ ಕಾಲ ವರುಣ ಆರ್ಭಟಿಸುವ ಮುನ್ಸೂಚನೆಯನ್ನು ನೀಡಿದೆ.

ಈಶಾನ್ಯ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಮುಂದಿನ ಒಂದು ವಾರ ದಿನಗಳಲ್ಲಿ ಈಶಾನ್ಯ ಭಾರತದಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆ ಇದೆ. ಜುಲೈ 16 ರಂದು ಮತ್ತು ಜುಲೈ 19 ರಿಂದ 21 ರವರೆಗೆ ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ಮಿಜೋರಾಂ ಮತ್ತು ತ್ರಿಪುರದಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಜುಲೈ 16ರಿಂದ 21ರ ವರೆಗೆ ಕೇರಳ, ತಮಿಳುನಾಡು, ಕರಾವಳಿ ಕರ್ನಾಟಕ ಮತ್ತು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಜುಲೈ 16ರಂದು ಉತ್ತರ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಜುಲೈ 19 ಮತ್ತು 20ರಂದು ಲಕ್ಷದ್ವೀಪ, ಜುಲೈ 17 - 21ರ ವರೆಗೆ ಕರಾವಳಿ ಆಂಧ್ರಪ್ರದೇಶ ಮತ್ತು ಯಾಣಂನಲ್ಲಿ, ಜುಲೈ 17ರಿಂದ 19ರ ವರೆಗೆ ರಾಯಲಸೀಮಾ ಮತ್ತು ಜುಲೈ 17 ಮತ್ತು 18ರಂದು ತೆಲಂಗಾಣದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ಈ ಭಾಗದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+