IMD Weather Forecast: ಈ ಭಾಗಗಳಲ್ಲಿ ಆಗಸ್ಟ್‌ 15ರ ವರೆಗೆ ರಣಭೀಕರ ಮಳೆ ಮುಮನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಚುರುಕು ಪಡೆದಿದೆ. ಈಗಾಗಲೇ ಭಾರೀ ಮಳೆ ಹಿನ್ನೆಲೆ ಹಲವೆಡೆ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಮುಂಗಾರು ಮಳೆ ಚುರುಕು ಪಡೆದ ಪರಿಣಾಮ ದೇಶದ ಹಲವು ಭಾಗಗಳಲ್ಲಿ ಜಲಪ್ರಳಯ ಸಂಭವಿಸಿದ್ದು, ಪರಿಣಾಮ ಜನರು ಮನೆ-ಮಠಗಳನ್ನು ಕಳೆದುಕೊಂಡು ಬೀದಿಗೆ ಬಂದಿರುವ ಘಟನೆಗಳು ನಡೆದಿವೆ. ಈಗಲೂ ಕೂಡ ಭಾರೀ ಮಳೆ ಹಿನ್ನೆಲೆ ಹಲವು ಭಾಗಗಳಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆ ಅಕ್ಕಪಕ್ಕದಲ್ಲಿನ ಜನರು ಜೀವವನ್ನು ಕೈಯಲ್ಲಿ ಹಿಡಿದು ಜೀವನ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಮುಂದಿನ ಹಲವು ದಿನಗಳ ಕಾಲ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

IMD Weather Forecast Heavy rain in These states for next five days from August 10

ದೇಶದ ಬಹುತೇಕ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ, ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಅದರಲ್ಲೂ ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಮುಂದುವರೆದ ಪರಿಣಾಮ ಜಲಪ್ರಳಯ ಸಂಭವಿಸಿ ಜನರು ಮನೆ-ಮಠಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಅಲ್ಲದೆ, ಜೀವಹಾನಿಗಳು ಕೂಡ ಆಗಿರುವ ಬಗ್ಗೆ ವರದಿಯಾಗಿದೆ.

ಇನ್ನು ಆಗಸ್ಟ್ 15ರ ವರೆಗೂ ಉತ್ತರಾಖಂಡದಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಇದೇ ವೇಳೆ ಪಂಜಾಬ್, ಚಂಡೀಗಢ ಮತ್ತು ಹರಿಯಾಣದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆ ಪ್ರಕಾರ, ಜಮ್ಮು ಮತ್ತು ಕಾಶ್ಮೀರದಲ್ಲಿ ಆಗಸ್ಟ್ 13 ಮತ್ತು 15ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 13 ಮತ್ತು 14ರಂದು ಪಶ್ಚಿಮ ಉತ್ತರ ಪ್ರದೇಶ ಮತ್ತು ಆಗಸ್ಟ್ 12 ಮತ್ತು 13ರಂದು ಪೂರ್ವ ಉತ್ತರ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ನೀಡಿದೆ.

ಭಾರೀ ಮಳೆಯಿಂದ ಯಮುನಾ ಮತ್ತು ಗಂಗಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಉತ್ತರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣ ಆಗಿದೆ. ಮುಂದಿನ ದಿನಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಸಿದೆ.

ಬಿಹಾರದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಕಾ, ಭಾಗಲ್ಪುರ್, ಪೂರ್ಣಿಯಾ ಮತ್ತು ಕಟಿಹಾರ್‌ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಸೋಮವಾರ ಹರಿಯಾಣದ ಮಾನೇಸರ್, ಝಜ್ಜರ್, ರೇವಾರಿ ಮತ್ತು ನುಹ್‌ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಜೊತೆಗೆ ಗಂಟೆಗೆ 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 48 ಗಂಟೆಗಳಲ್ಲಿ ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅದರಲ್ಲೂ ಉತ್ತರಾಖಂಡದ ಹಲವು ಜಿಲ್ಲೆಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯಿದೆ ಅಂತಲೂ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಭಾರತದ ಈಶಾನ್ಯ ರಾಜ್ಯಗಳಲ್ಲಿ ಎಲ್ಲೆಲ್ಲಿ ಮಳೆ?: ಆಗಸ್ಟ್ 10ರಿಂದ 13ರ ವರೆಗೆ ಅರುಣಾಚಲ ಪ್ರದೇಶ, ಆಗಸ್ಟ್ 10ರಿಂದ 15ರ ವರೆಗೆ ಅಸ್ಸಾಂ ಮತ್ತು ಮೇಘಾಲಯ, ಆಗಸ್ಟ್ 12 ರಿಂದ 15ರ ವರೆಗೆ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಭಾರೀ ಮಳೆಯಿಂದಾಗಿ ಹಲವೆಡೆ ದೊಡ್ಡ ದೊಡ್ಡ ಅನಾಹುತಗಳೇ ಸಂಭವಿಸಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಏನೆಲ್ಲಾ ಕಾದಿದೆಯೋ ಎನ್ನುವ ಆತಂಕದಲ್ಲಿ ಜನರಿದ್ದಾರೆ. ಅದರಲ್ಲೂ ನದಿ ತೀರದ ಜನರಿಗೆ ಢವಢವ ಶುರುವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+