IMD Weather Forecast: ಈ ಭಾಗಗಳಲ್ಲಿ ಆಗಸ್ಟ್‌ 4ರಿಂದ ಒಂದು ವಾರ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ಮುಂಗಾರು ಒಂದು ಕಡೆಯಾದ್ರೆ ಮತ್ತೊಂದೆಡೆ ಚಂಡಮಾರುತ ಹಿನ್ನೆಲೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಇದೀಗ ಮುಂದಿನ ಒಂದು ವಾರ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಹೌದು.. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು ದಿನಗಳ ಕಾಲ ಕೆಲವೆಡೆ ಭಾರೀ ಮಳೆಯಾದ್ರೆ, ಇನ್ನೂ ಕೆಲವೆಡೆ ರಣಭೀಕರ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಳೆ ಮುಂದುವರೆದಿದ್ದು, ಇನ್ನೂ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

IMD Weather Forecast Heavy rain in These states for next one week from august 4

ನವದೆಹಲಿ ಹವಾಮಾನ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭಾನುವಾರ ಭಾರೀ ಮಳೆ ಸುರಿದ ಪರಿಣಾಮ ಇಲ್ಲಿನ ಹಲವೆಡೆ ಜನಜೀವನ ಅಸ್ತವ್ಯಸ್ಥವಾದ ಘಟನೆಗಳು ನಡೆದಿವೆ. ಮತ್ತೊಂದೆಡೆ ಬಿಸಿಲಿನಿಂದ ಬೇಸತ್ತಿದ್ದ ಜನರ ಮನಸು ತಣಿಸಿದಂತಾಗಿದೆ. ಹಾಗೆಯೇ ಇಂದು (ಆಗಸ್ಟ್‌ 4) ಕೂಡ ರಣಭೀಕರ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಐಎಂಡಿ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಇಂದು ಸೋಮವಾರ ಸಹ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರಣಮಳೆಯಾಗುವ ಸಾಧ್ಯತೆಯಿದ ಎಂದು ಮುನ್ಸೂಚನೆ ನೀಡಿದೆ. ಅದರಲ್ಲೂ ಲಕ್ಷ್ಮಿ ನಗರ, ಪತ್ಪರ್‌ಗಂಜ್, ಆನಂದ್ ವಿಹಾರ್, ಉತ್ತರ ದೆಹಲಿ, ದಕ್ಷಿಣ ದೆಹಲಿ ಮತ್ತು ಪಶ್ಚಿಮ ದೆಹಲಿಯಂತಹ ಪ್ರದೇಶಗಳಲ್ಲಿ ವಾರವಿಡೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.

ಎಲ್ಲೆಲ್ಲಿ ಮಳೆ?: ಅಲ್ಲದೆ, ಮುಂದಿನ ಹಲವು ದಿನಗಳ ಕಾಲ ಹರಿಯಾಣ, ಪಂಜಾಬ್, ರಾಜಸ್ಥಾನ ಸೇರಿದಂತೆ ಇತರ ಉತ್ತರ ರಾಜ್ಯಗಳಲ್ಲಿ ಬಿರುಗಾಳಿಯೊಂದಿದೆ ರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಉತ್ತರ ಪ್ರದೇಶದಲ್ಲಿ ಆಗಸ್ಟ್‌ 9ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಬಂಡಾ, ಚಿತ್ರಕೂಟ, ಸೋನಭದ್ರ, ಮಿರ್ಜಾಪುರ್, ಸಂತ ರವಿದಾಸ್ ನಗರ, ಸಹರಾನ್‌ಪುರ್, ಬಿಜ್ನೋರ್, ಮುಜಾಫರ್‌ನಗರ, ಶಾಮ್ಲಿ, ಮೀರತ್ ಮತ್ತು ಅಲಿಗಢ್‌ನಂತಹ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಬಿಹಾರದಲ್ಲಿ ಮುಂದಿನ 5 ದಿನಗಳವರೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಾಟ್ನಾ, ಗಯಾ, ಪೂರ್ಣಿಯಾ, ಪಶ್ಚಿಮ ಚಂಪಾರಣ್, ಪೂರ್ವ ಚಂಪಾರಣ್, ನವಾಡಾ, ಮುಜಫರ್ಪುರ್, ಸಿವಾನ್, ದರ್ಭಂಗಾ, ಭಾಗಲ್ಪುರ್, ಮಧುಬನಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕು ಪಡೆಯಲಿದೆ ಎಂದು ತಿಳಿಸಿದೆ.

ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿದ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಸ್ಥಾನದ ಬುಂಡಿ, ಅಲ್ವಾರ್, ದೌಸಾ, ಸವಾಯಿ ಮಾಧೋಪುರ್, ಕರೌಲಿ, ಕೋಟಾ ಮತ್ತು ಬರಾನ್‌ ಹಾಗೂ ಮಧ್ಯಪ್ರದೇಶದ ಭಿಂಡ್, ಶಿವಪುರಿ, ಮೊರೆನಾ, ವಿದಿಶಾ, ಅಶೋಕನಗರ, ಸಾಗರ್, ರೈಸೆನ್, ಸೆಹೋರ್, ಹೊಶಂಗಾಬಾದ್ ಮತ್ತು ಛತ್ತರ್‌ಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್‌ಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಕರ್ನಾಟಕ, ಕೇರಳ ಸೇರಿದಂತೆ ದಕ್ಷಿಣದ ಹಲವು ರಾಜ್ಯಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕರ್ನಾಟಕ ಹಾಗೂ ಕೇರಳದಲ್ಲಿ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+