IMD Weather Forecast: ಮುಂದಿನ ಒಂದು ವಾರ ಗುಡುಗು ಸಹಿತ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಚುರುಕು ಪಡೆದಿದ್ದು, ಭಾರೀ ಮಳೆ ಮುಂದುವರೆದಿದೆ. ಪರಿಣಾಮ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಈ ಭಾಗಗಳಲ್ಲಿ ಮುಂದಿನ ಒಂದು ವಾರ ಗುಡುಗು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಈಗಾಗಲೇ ಭಾರೀ ಮಳೆ ಮುಂದುವರೆದ ಪರಿಣಾಮ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಭೂಕುಸಿತ ಮತ್ತು ಮೇಘಸ್ಫೋಟಗಳಿಂದ ಜನರು ಮನೆ-ಮಠಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಉತ್ತರಾಖಂಡದ ಉತ್ತರಕಾಶಿಯಲ್ಲಿ ಇತ್ತೀಚೆಗೆ ಸಂಭವಿಸಿದ ಮೇಘಸ್ಫೋಟದಿಂದ ಭಾರಿ ನಷ್ಟ ಸಂಭವಿಸಿದ ಪರಿಣಾಮ ಹಲವು ಜನ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಕಾಣೆಯಾಗಿರುವ ಬಗ್ಗೆ ವರದಿ ಆಗಿದೆ.

IMD Weather Forecast Heavy rain in These states for next one week from August 8

ಹವಾಮಾನ ಇಲಾಖೆ ಎಚ್ಚರಿಕೆ: ಅಲ್ಲದೆ, ಮುಂದಿನ ಹಲವು ದಿನಗಳವರೆಗೂ ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.

ಪ್ರವಾಹ ಭೀತಿ: ಭಾರೀ ಮಳೆ ಮುಂದುವರೆದ ಪರಿಣಾಮ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಹಲವು ಜಿಲ್ಲೆಗಳು ಪ್ರವಾಹದಂತಹ ಪರಿಸ್ಥಿತಿ ಎದುರಿಸುತ್ತಿವೆ. ವಾರಣಾಸಿ ಮತ್ತು ಪ್ರಯಾಗ್‌ರಾಜ್‌ನಲ್ಲೂ ಹೆಚ್ಚು ಹಾನಿಯಾದ ಬಗ್ಗೆ ವರದಿಯಾಗಿದೆ. ಅಲ್ಲದೆ, ಮುಂದಿನ ಹಲವು ದಿನಗಳವರೆಗೆ ಈ ಭಾಗಗಳಲ್ಲಿ ಭಾರೀ ಮಳಡೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ನೀಡಿದೆ.

ಇಂದು ಎಲ್ಲೆಲ್ಲಿ ಹೆಚ್ಚು ಮಳೆ?: ಹವಾಮಾನ ಇಲಾಖೆ ಪ್ರಕಾರ, ಇಂದು (ಆಗಸ್ಟ್‌ 8) ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೊಪ್ಪಳ, ಬಾಗಲಕೋಟೆ ಮತ್ತು ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.

ಒಂದು ವಾರ ಮಳೆ?: ಅಲ್ಲದೆ, ಈಶಾನ್ಯ ರಾಜ್ಯಗಳಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 8ರಿಂದ ಅರುಣಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೆಚ್ಚುವರಿಯಾಗಿ ಮಧ್ಯ ಭಾರತ ಸೇರಿದಂತೆ ಹಲವು ಭಾಗಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಕೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಉತ್ತರಾಖಂಡ, ಪಂಜಾಬ್, ಜಮ್ಮು-ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಆಗಸ್ಟ್ 8 ರಿಂದ 12ರ ವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಆಗಸ್ಟ್ 8 ರಿಂದ 10ರ ವರೆಗೆ ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಣಭೀಕರ ಮಳೆಯಿಂದಾಗಿ ಬಿಹಾರದ ಹಲವು ಭಾಗಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಅನೇಕ ನದಿಗಳು ಅಪಾಯದ ಮಟ್ಟಕ್ಕಿಂತ ಮೀರಿ ಹರಿಯುತ್ತಿರುವ ಪರಿಣಾಮ ಈ ಭಾಗಗಳ ಜನರು ಜೀವವನ್ನು ಕೈಯಲ್ಲಿ ಹಿಡಿದು ಜೀವನ ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಉತ್ತರಾಖಂಡದಲ್ಲಿ ಪ್ರವಾಸಿಗರ ಪರದಾಟ: ಪ್ರವಾಹ ಉಂಟಾಗಿರುವ ಪರಿಣಾಮ, ಗುಜರಾತ್‌ನ 141 ಯಾತ್ರಿಕರು ಮತ್ತು ಪ್ರವಾಸಿಗರು ಉತ್ತರಾಖಂಡದಲ್ಲಿ ಸಿಲುಕಿಕೊಂಡಿದ್ದಾರೆ. ಗುಜರಾತ್ ಸರ್ಕಾರವು ಉತ್ತರಾಖಂಡ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದೆ.

ಪಠಾಣ್, ಬನಸ್ಕಂತ, ಅಹಮದಾಬಾದ್, ಭಾವನಗರ ಮತ್ತು ವಡೋದರಾದಿಂದ ಹೆಚ್ಚಿನ ಸಂಖ್ಯೆಯ ಜನರು ತೀರ್ಥಯಾತ್ರೆಯಲ್ಲಿ ಇದ್ದಾರೆ ಎಂದು ಗುಜರಾತ್ ಸರ್ಕಾರದ ವಕ್ತಾರ ಮತ್ತು ಕ್ಯಾಬಿನೆಟ್ ಸಚಿವ ರಿಷಿಕೇಶ್ ಪಟೇಲ್ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಇನ್ನು ಪ್ರವಾಹದಲ್ಲಿ ಸಿಲುಕಿರುವವರನ್ನು ಸುರಕ್ಷಿತವಾಗಿ ಕರೆತರುವ ವ್ಯವಸ್ಥೆ ಮಾಡಲು ಗುಜರಾತ್‌ನ ವಿಪತ್ತು ನಿರ್ವಹಣಾ ಇಲಾಖೆಯ ಅಧಿಕಾರಿಗಳು ಉತ್ತರಾಖಂಡ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮುಂದಿನ ಹಲವು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ನದಿತೀರ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಜನರು ಸುರಕ್ಷಿತ ಸ್ಥಳಗಳಿಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+