IMD Weather Forecast: ಈ ಭಾಗಗಳಲ್ಲಿ ಕೆಲವೇ ಕ್ಷಣಗಳಲ್ಲಿ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಚುರುಕು ಪಡೆದಿದ್ದು, ಹಲವೆಡೆ ರಣಭೀಕರ ಮಳೆ ಮುಂದುವರೆದಿದೆ. ಹಾಗೆಯೇ ಈ ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು ದಿನಗಳವರೆದೆ ದೇಶದ ಹಲವೆಡೆ ಸಾಧಾರಣ ಮಳೆಯಾದರೆ, ಇನ್ನೂ ಕೆಲವು ಭಾಗಗಳಲ್ಲಿ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ. ಜೊತೆಗೆ ಜಲಪ್ರಳಯದ ಮುನ್ಸೂಚನೆಯನ್ನು ಕೂಡ ನೀಡಿದೆ.

IMD Weather Forecast Heavy rain in These states in a few moments on August 9

ಮುಂದಿನ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆ?: ಮಧ್ಯಪ್ರದೇಶ, ರಾಜಸ್ಥಾನ, ಹರಿಯಾಣ ಮತ್ತು ಪಂಜಾಬ್‌ನಲ್ಲಿ ವ್ಯಾಪಕವಾಗಿ ರಣಮಳೆ ಸುರಿಯುವ ಸಾಧ್ಯತೆಯಿದೆ. ಇದೇ ವೇಳೆ ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಪೂರ್ವ ಅಸ್ಸಾಂ, ಅರುಣಾಚಲ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಉತ್ತರಾಖಂಡ್, ಕರ್ನಾಟಕ, ಕೇರಳ, ತಮಿಳುನಾಡು, ಲಕ್ಷದ್ವೀಪ, ತೆಲಂಗಾಣದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.

ನವದೆಹಲಿ ಹವಾಮಾನದ ವಿವರ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು (ಆಗಸ್ಟ್‌ 9) ಬೆಳ್ಳಂಬೆಳಗ್ಗೆ ಭಾರೀ ಮಳೆ ಸುರಿದಿದ್ದು, ಹಲವು ಪ್ರದೇಶಗಳು ಜಾಲಾವೃತವಾಗಿವೆ. ಅಲ್ಲದೆ, ರಸ್ತೆಗಳು ನದಿಯಂತೆ ಮಾರ್ಪಟ್ಟ ಕಾರಣ ವಾಹನ ಸವಾರರು ಪರದಾಡಿದ ಘಟನೆಗಳು ನಡೆದಿವೆ. ಈ ಭಾಹದಲ್ಲಿ ಮುಂದಿನ ಹಲವು ದಿನಗಳವರೆಗೆ ಭಾರೀ ಮಳೆ ಮುಂದುವರೆಯಲಿದೆ ಅಂತಲೂ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನವದೆಹಲಿಯಲ್ಲಿ ಇಂದು ಗುಡುಗು ಸಹಿತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಗರಿಷ್ಠ ತಾಪಮಾನ ಸುಮಾರು 36°C ಹಾಗೂ ಕನಿಷ್ಠ 27°C ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಆಗಸ್ಟ್ 13 ಮತ್ತು 14ರಂದು ನೋಯ್ಡಾ, ಗುರುಗ್ರಾಮ್, ಗಾಜಿಯಾಬಾದ್ ಮತ್ತು ಫರಿದಾಬಾದ್‌ನಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಅಂತಲೂ ತಿಳಿಸಿದೆ.

ಮುಂಗಾರು ಚುರುಕು: ಮುಂಗಾರು ಮಳೆ ಚುರುಕು ಪಡೆದ ಪರಿಣಾಮ, ಹಿಮಾಚಲ ಪ್ರದೇಶದಲ್ಲಿ 357 ರಸ್ತೆಗಳು ಸ್ಥಗಿತಗೊಂಡಿವೆ. ಶುಕ್ರವಾರ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಅಂಕಿಅಂಶಗಳ ಪ್ರಕಾರ, ಸುಮಾರು 599 ವಿದ್ಯುತ್ ವಿತರಣಾ ಟ್ರಾನ್ಸ್‌ಫಾರ್ಮರ್‌ಗಳು ಹಾಳಾಗಿವೆ ಮತ್ತು 177 ನೀರು ಸರಬರಾಜು ಘಟಕಗಳು ಕೂಡ ಹಾಳಾಗಿವೆ ಎಂದು ವರದಿಯಾಗಿದೆ.

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಾರ, ಈ ಮುಂಗಾರು ಋತುವಿನಲ್ಲಿ ಈವರೆಗೆ 208 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿ ಆಗಿವೆ. ಈ ಪೈಕಿ 112 ಸಾವುಗಳು ಭೂಕುಸಿತ, ಹಠಾತ್ ಪ್ರವಾಹ ಮತ್ತು ಮನೆ ಕುಸಿತದಿಂದ ಸಂಭವಿಸಿದ್ದರೆ, 96 ಸಾವುಗಳು ರಸ್ತೆ ಅಪಘಾತದಿಂದ ಸಂಭವಿಸಿವೆ ಎಂದು ತಿಳಿದುಬಂದಿದೆ.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು: ಬಿಹಾರದಲ್ಲಿ ಗಂಗಾ ಮತ್ತು ಬುಧಿ ಗಂಡಕ್‌ನಂತಹ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಪರಿಣಾಮ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಪಾಟ್ನಾದಲ್ಲಿಯೂ ಗಂಗಾ ನದಿ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆ ಇಲ್ಲಿನ ಸುತ್ತಮುತ್ತಲಿನ ಪ್ರದೇಶಗಳು ಪ್ರವಾಹದ ಮುಳುಗಿವೆ. ಅದರಲ್ಲೀ ತಗ್ಗು ಪ್ರದೇಶಗಳಲ್ಲಿ ನೂರಾರು ಮನೆಗಳು ಕೊಚ್ಚಿಹೋಗಿರುವ ಬಗ್ಗೆ ವರದಿಯಾಗಿದೆ.

ಗಂಗಾ, ಸೋನೆ, ದರ್ಧಾ ಮತ್ತು ಗಂಡಕ್ ನದಿಗಳ ನೀರಿನ ಮಟ್ಟ ಏರಿಕೆಯಿಂದಾಗಿ, ಪಾಟ್ನಾ ಜಿಲ್ಲೆಯಲ್ಲಿ ಜನರ ಜೀವನ ಹೇಳತೀರದಂತಾಗಿದೆ. ಇನ್ನು ಪ್ರವಾಹದಿಂದ ಪೀಡಿತರಿಗೆ ಪಾಟ್ನಾ ಆಡಳಿತವು 6 ಸಮುದಾಯ ಅಡುಗೆ ಮನೆಗಳನ್ನು ನಿರ್ಮಿಸಿದ್ದು, ಪ್ರತಿದಿನ 8,500ಕ್ಕೂ ಹೆಚ್ಚು ಜನರಿಗೆ ಊಟ ನೀಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗೆಯೇ ಮುಂದಿನಬ ಹಲವು ದಿನಗಳ ಕಾಲ ಮಳೆ ಹೀಗೆ ಮುಂದುವರೆಯುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೆ, ನದಿ ತೀರದ ಪ್ರದೇಶದಲ್ಲಿರುವವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+