IMD Weather Forecast: ಈ ಭಾಗಗಳಲ್ಲಿ ರಣಭೀಕರ ಮಳೆ ಸುರಿಯುವ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಈಗಾಗಲೇ ಭಾರೀ ಮಳೆಯಾಗಿದ್ದು, ಹಲವೆಡೆ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಹಾಗೆಯೇ ಇಂದು (ಸೆಪ್ಟೆಂಬರ್ 13) ಇನ್ನೂ ಕೆಲವೇ ಕ್ಷಣಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದ್ದು, ಇನ್ನೂ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಭಾರೀ ಮಳೆಯಿಂದ ಹಲವೆಡೆ ಜಲಪ್ರಳಯ ಸಂಭವಿಸಿ ಜನರು ಜೀವ ಕಳೆದುಕೊಂಡ ಘಟನೆಗಳು ನಡೆದಿವೆ. ಮತ್ತೆ ಇದೀಗ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ.

ಮುಂದಿನ ದಿನಗಳಲ್ಲಿ ಮಳೆರಾಯ ಮತ್ತೆ ಆರ್ಭಟ ಶುರು ಮಾಡಲಿದ್ದಾನೆ ಎನ್ನುವ ಮುನ್ಸೂಚನೆ ಇದೆ. ಅದರಲ್ಲೂ ಗುಡ್ಡಗಾಡು ಪ್ರದೇಶಗಳಲ್ಲಿ ಹವಾಮಾನ ಬದಲಾವಣೆ ಆಗುವ ಸಾಧ್ಯತೆಯಿದೆ ಅಂತಲೂ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಇಂದು (ಸೆಪ್ಟೆಂಬರ್ 13) ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ. ಅದರಲ್ಲೂ ಪೂರ್ವ ಉತ್ತರ ಪ್ರದೇಶದ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ಬಿಹಾರ ಹಲವು ಭಾಗ ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ಎಲ್ಲೆಲ್ಲಿ ಮಳೆ?: ಬಿಹಾರದ ರಾಜಧಾನಿ ಪಾಟ್ನಾ ಹೊರತುಪಡಿಸಿ, ಗೋಪಾಲ್‌ಗಂಜ್, ಕಿಶನ್‌ಗಂಜ್, ಮುಜಫರ್‌ಪುರ, ಸಿವಾನ್, ಪೂರ್ವ ಚಂಪಾರಣ್, ಸರನ್, ಶಿವಹಾರ್, ಸೀತಾಮರ್ಹಿ, ವೈಶಾಲಿ ಮತ್ತು ಭಾಗಲ್ಪುರದಲ್ಲಿ ಇಂದು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಪಗ್ರದೇಶದ ಕುಶಿನಗರ, ಮಹಾರಾಜ್‌ಗಂಜ್, ಸಿದ್ಧಾರ್ಥನಗರ, ಗೊಂಡಾ, ಬಲರಾಮ್‌ಪುರ, ಶ್ರಾವಸ್ತಿ ಮತ್ತು ಬಹ್ರೈಚ್ ಜಿಲ್ಲೆಗಳಲ್ಲೂ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವದೆಹಲಿ ಹವಾಮಾನ ವಿವರ: ರಾಷ್ಟ್ರ ರಾಜಧಾನಿ ನವದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈಗಾಗಲೇ ಭಾರೀ ಮಳೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಬಳಿಕ ಕೆಲ ದಿನಗಳ ಕಾಲ ಬಿಡುವು ನೀಡಿದ್ದ ಮಳೆರಾಯ ಮತ್ತೆ ಇಂದು (ಸೆಪ್ಟೆಂಬರ್ 13) ಆರ್ಭಟಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗರಿಷ್ಠ ತಾಪಮಾನ ಸುಮಾರು 35 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ, ನವದೆಹಲಿಯಲ್ಲಿ ಶುಕ್ರವಾರ (ಸೆಪ್ಟೆಂಬರ್ 12) ಸಂಜೆ 4 ಗಂಟೆಗೆ ವಾಯು ಗುಣಮಟ್ಟ ಸೂಚ್ಯಂಕ (AQI) 108ರಷ್ಟಿತ್ತು ಎಂದು ವರದಿಯಾಗಿದೆ.
ಹಿಮಾಲಯನ್ ಪ್ರದೇಶಗಳಲ್ಲಿ ಇದೀಗ ಭಾರೀ ಮಳೆ ಮುಂದುವರೆದಿದೆ. ಇನ್ನು ಇಂದು ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ರಾಜ್ಯಗಳಿಗೆ ಪ್ರವಾಸಕ್ಕೆ ಆಯೋಜಿಸುವವರು ಎಚ್ಚರಿಕೆಯಿಂದ ಸಂಚಾರ ಮಾಡಬೇಕಾಗಿದೆ ಎಂದು ಸಲಹೆ ನೀಡಲಾಗಿದೆ. ಇನ್ನು ಈ ವರ್ಷದ ಮುಂಗಾರು ಮಳೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಗಮಿಸಿದ್ದು, 2020ರ ನಂತರ ಮೊದಲ ಬಾರಿಗೆ ಇಡೀ ದೇಶವನ್ನು ಆವರಿಸಿದೆ. ಪರಿಣಾಮ ಹಲವೆಡೆ ದೊಡ್ಡ ಅವಾಂತರಗಳೇ ಸಂಭವಿಸಿವೆ.












Click it and Unblock the Notifications