IMD Weather Forecast: ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಸುನಾಮಿ ಮಳೆ ಮುನ್ಸೂಚನೆ: IMD ಎಚ್ಚರಿಕೆ ಏನು ಗೊತ್ತಾ?

IMD Weather Forecast: ದೇಶದಲ್ಲಿ ಮುಂಗಾರು ಚುರುಕು ಪಡೆದಿದ್ದು, ಹಲವು ರಾಜ್ಯಗಳಲ್ಲಿ ದೊಡ್ಡ ಅವಾಂತರಗಳೇ ಸಂಭವಿಸಿವೆ. ಮತ್ತೊಂದೆಡೆ ಇದೀಗ ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಇಂದು (ಆಗಸ್ಟ್‌ 18) ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕೆಲವೇ ಕ್ಷಣಗಳಲ್ಲಿ ಹಲವೆಡೆ ಸಾಧಾರಣ ಮಳೆಯಾದ್ರೆ, ಇನ್ನೂ ಕೆಲವೆಡೆ ರಣಭೀಕರ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಭಾರೀ ಮಳೆ ಮುಂದುವರೆದ ಪರಿಣಾಮ ಕೆಲವು ಭಾಗಗಳಲ್ಲಿ ಈಗಾಗಲೇ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ.

IMD Weather Forecast Heavy rain in These states In few moments on August 18

ದೇಶದ ಕೆಲವು ಭಾಗಗಳಲ್ಲಿ ಇಂದು (ಆಗಸ್ಟ್‌ 18) ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಮಹಾರಾಷ್ಟ್ರ, ತೆಲಂಗಾಣ, ಒಡಿಶಾ, ಕರ್ನಾಟಕ, ಆಂಧ್ರಪ್ರದೇಶ, ಛತ್ತೀಸ್‌ಗಢ, ಜಮ್ಮು ಮತ್ತು ಕಾಶ್ಮೀರ, ಗೋವಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಅದರಲ್ಲೂ ಕರಾವಳಿ ಕರ್ನಾಟಕ, ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಇದೇ ವೇಳೆ ಕರಾವಳಿ ಆಂಧ್ರಪ್ರದೇಶ, ಯಾನಂ, ದಕ್ಷಿಣ ಒಡಿಶಾ ಮತ್ತು ದಕ್ಷಿಣ ಛತ್ತೀಸ್‌ಗಢದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಮುನ್ಸೂಚನೆ ನೀಡಿದೆ.

ಗೋವಾ, ಮಧ್ಯ ಮಹಾರಾಷ್ಟ್ರದ ಕೆಲ ಪ್ರದೇಶ, ಗುಜರಾತ್‌ನಲ್ಲಿ ಆಗಸ್ಟ್‌ 18 ಮತ್ತು 19ರಂದು ಎರಡು ದಿನಗಳ ಕಾಲ ಬಿರುಗಾಳಿ ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಆಗಸ್ಟ್‌ 18ರಂದು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರಾಖಂಡ ಮತ್ತು ರಾಜಸ್ಥಾನದಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಇಂದು (ಆಗಸ್ಟ್‌ 18) ಮಹಾರಾಷ್ಟ್ರದ ಮುಂಬೈ ಸೇರಿದಂತೆ ಹಲವು ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಆರೆಂಜ್‌ ಮತ್ತು ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ರಾಯಗಡ, ರತ್ನಗಿರಿ, ಪುಣೆ, ಕೊಲ್ಹಾಪುರ ಮತ್ತು ಸತಾರ ಭಾಗಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದ್ದರೆ, ಥಾಣೆ, ಸಿಂಧುದುರ್ಗ ಮತ್ತು ಪಾಲ್ಘರ್‌ಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುಂಬೈನಲ್ಲಿ ಈಗಾಗಲೇ ಭಾರೀ ಮಳೆಯಿಂದಾಗಿ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ.

ನವದೆಹಲಿ ಹವಾಮಾನದ ವಿವರ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮೋಡ ಕವಿದ ವಾತಾವರಣ ಇದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕನಿಷ್ಠ ತಾಪಮಾನ 23-25°C ಇದ್ದರೆ, ಗರಿಷ್ಠ ತಾಪಮಾನ 32-34°C ವರೆಗೆ ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಕೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+