IMD Weather Forecast: ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ದೇಶದಲ್ಲಿ ಮುಂಗಾರು ಚುರುಕು ಪಡೆದಿದೆ. ಪರಿಣಾಮ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾದರೆ, ಕೆಲವೆಡೆ ಸಾಧಾರಣ ಮಳೆ ಮುಂದುವರೆದಿದೆ. ಹಾಗೆಯೇ ಇಂದು (ಆಗಸ್ಟ್‌ 22) ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಗುಡಗು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಮುಂದಿನ 24 ಗಂಟೆಗಳಲ್ಲಿ ಕೆಲವೆಡೆ ಸಾಧಾರಭ ಮಳೆಯಾದ್ರೆ, ಇನ್ನೂ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಈಗಾಗಲೇ ಹಲವೆಡೆ ಭಾರೀ ಮಳೆಯಿಂದ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿ ಪ್ರಾಣಹಾನಿ ಸಂಭವಿಸಿದ ಘಟನೆಗಳು ನಡೆದಿವೆ.

IMD Weather Forecast Heavy rain in These states In few moments on August 22

ಇನ್ನು ಮುಂದಿನ 24 ಗಂಟೆಗಳಲ್ಲಿ ಗುಜರಾತ್, ಮಧ್ಯ ಮಹಾರಾಷ್ಟ್ರ, ಗೋವಾ ಮತ್ತು ದೇಶದ ಪಶ್ಚಿಮ ಭಾಗದ ಕೊಂಕಣ ಸೇರಿ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಮುಂದಿನ ಹಲವು ದಿನಗಳ ಕಾಲ ಪುದುಚೇರಿ, ಕೇರಳ, ತೆಲಂಗಾಣ, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ರಣಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅದರಲ್ಲೂ ಚೆನ್ನೈನಲ್ಲಿ ರಣಭೀಕರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಚೆನ್ನೈನ ಮರೀನಾ ಬೀಚ್, ಎಗ್ಮೋರ್, ನುಂಗಂಬಾಕ್ಕಂ ಮತ್ತು ಗಿಂಡಿಯಲ್ಲಿ ಸಾಧಾರಣ ಮಳೆಯಾಗಿದೆ. ಇನ್ನು ಈರೋಡ್, ಕೃಷ್ಣಗಿರಿ, ವೆಲ್ಲೂರು, ಕರೂರ್, ತಿರುಚಿಲಪಲ್ಲಿ, ರಾಣಿಪೆಟ್ಟಾ, ನಾಮಕ್ಕಲ್ ಮತ್ತು ಪೆರಂಬಲೂರು ಸೇರಿದಂತೆ ತಮಿಳುನಾಡಿನ ಹಲವು ಭಾಗಗಳಲ್ಲಿಯೂ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

ಶುಕ್ರವಾರ (ಆಗಸ್ಟ್‌ 22) ಬೆಳಗ್ಗೆ ತಮಿಳುನಾಡಿ ಹಲವು ಭಾಗಗಳಲ್ಲಿ ಮಳೆಯಾಗಿದೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೂ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಇಂದು ಚೆನ್ನೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ ಸುಮಾರು 35°C ಮತ್ತು ಕನಿಷ್ಠ ತಾಪಮಾನ 27-28°C ದಾಖಲಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ನವದೆಹಲಿ ಹವಾಮಾನ ವಿವರ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗುರುವಾರ ಗರಿಷ್ಠ ತಾಪಮಾನ 34.8°C ದಾಖಲಾಗಿದ್ದು, ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗಿದೆ. ಇನ್ನು ಇಂದು ಶುಕ್ರವಾರ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಗಸ್ಟ್‌ 24ರ ವರೆಗೆ ಭಾರೀ ಮಳೆ?: ಆಗಸ್ಟ್ 22 ರಿಂದ 24ರ ವರೆಗೆ ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ, ಬಿಹಾರ, ಜಾರ್ಖಂಡ್, ವಿದರ್ಭ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಉತ್ತರ ರಾಜ್ಯಗಳಾದ ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಮುಂಬೈನಲ್ಲಿ ಮತ್ತೆ ಮಳೆ ಮುಂದುವರೆಯುವ ಎಚ್ಚರಿಕೆ: ಈಗಾಗಲೇ ಮಹಾರಾಷ್ಟ್ರದ ಮುಂಬೈನಲ್ಲಿ ಭಾರೀ ಮಳೆಯಿಂದಾಗಿ ದೊಡ್ಡ ಅವಾಂತರಗಳೇ ಸಂಭವಿಸಿವೆ. ಅಲ್ಲದೆ, ಇಂದು ಸಹ ಮಹಾರಾಷ್ಟ್ರದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಅದರಲ್ಲೂ ಮುಂಬೈನಲ್ಲಿ ಹೆಚ್ಚು ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+