IMD Weather Forecast: ಕೆಲವೇ ಕ್ಷಣಗಳಲ್ಲಿ ಗುಡುಗು ಸಹಿತ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ದೇಶದಲ್ಲಿ ಹಲವು ರಾಜ್ಯಗಳಲ್ಲಿ ಮತ್ತೆ ಮಳೆ ಮುಂದುವರೆದಿದೆ. ಇನ್ನು ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಇಂದು (ಅಕ್ಟೋಬರ್ 3) ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಆದರೆ, ಕಳೆದ ಕೆಲವು ವಾರಗಳಿಂದ ಮಳೆರಾಯನ ಆರ್ಭಟ ತಗ್ಗಿದೆ. ಈ ನಡುವೆಯೇ ಇದೀಗ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಕಳೆದ ಕೆಲವು ವಾರಗಳ ಹಿಂದೆ ಮಹಾರಾಷ್ಟ್ರದ ಮುಂಬೈನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಬಿಸಿಲಿನ ವಾತಾವರಣ ಮುಂದುವರೆದಿತ್ತು. ಆದರೆ, ಇದೀಗ ಮತ್ತೆ ಇಂದು ಇಲ್ಲಿನ ಪ್ರತ್ಯೇಕ ಭಾಗದಲ್ಲಿ ಭಾರೀ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಅಲ್ಲದೆ, ಉತ್ತರ ಪ್ರದೇಶ, ಬಿಹಾರ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಈ ಪೈಕಿ ಬಿಹಾರದ ಕೆಲವು ಪ್ರದೇಶಗಳಿಗೆ ರೆಡ್ ಅಲರ್ಟ್‌ನಲ್ಲಿದ್ದರೆ, ಇತರ ರಾಜ್ಯಗಳಿಗೆ ಆರೆಂಜ್ ಅಲರ್ಟ್ವ ಘೋಷಣೆ ಮಾಡಲಾಗಿದೆ.
ಮುಂಬೈ, ಔರಂಗಾಬಾದ್, ರಾಯಗಢ, ಪುಣೆ, ಸತಾರಾ, ರತ್ನಗಿರಿ, ಕೊಲ್ಹಾಪುರ, ಸಿಂಧುದುರ್ಗ, ಯವತ್ಮಾಲ್, ವಾರ್ಧಾ ಮತ್ತು ಚಂದ್ರಾಪುರ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಅದರಲ್ಲೂ ಮರಾಠವಾಡ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಮುಂಬೈನ ಪ್ರಾದೇಶಿಕ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.
ಭಾರೀ ಮಳೆ ಹಿನ್ನೆಲೆ ಬಿಹಾರದ ಹಲವು ಭಾಗಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಪಶ್ಚಿಮ ಚಂಪಾರಣ್, ಗಯಾ ಮತ್ತು ಕೈಮೂರ್‌ಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಪೂರ್ವ ಚಂಪಾರಣ್, ಗೋಪಾಲ್‌ಗಂಜ್ ಮತ್ತು ಸಿವಾಸ್ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಿಹಾರ, ಉತ್ತರ ಪ್ರದೇಶ, ಅಸ್ಸಾಂ, ಆಂಧ್ರಪ್ರದೇಶ, ಛತ್ತೀಸ್‌ಗಢ, ಒಡಿಶಾ ಮತ್ತು ಸಿಕ್ಕಿಂ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಭಾರೀ ಮಳೆ ಹಿನ್ನೆಲೆ ಈ ಭಾಗಗಳಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಈಗಾಗಲೇ ರಣಭೀಕರ ಮಳೆಯಿಂದ ದೇಶದ ಹಲವು ರಾಜ್ಯಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿರುವ ಉದಾಹರಣೆಗಳಿವೆ. ಇನ್ನು ಇದೀಗ ಮತ್ತೆ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.












Click it and Unblock the Notifications