IMD Weather Forecast: ಈ ಭಾಗಗಳಲ್ಲಿ ಆಗಸ್ಟ್‌ 10ರ ವರೆಗೆ ಗುಡುಗು ಸಹಿತ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ಒಂದಡೆ ಚಂಡಮಾರುತ, ಮತ್ತೊಂದೆಡೆ ಮುಂಗಾರು ಚರುಕು ಪಡೆದಿದ್ದು, ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಆಗಸ್ಟ್‌ 10ರ ವರೆಗೆ ಈ ಭಾಗಗಳಲ್ಲಿ ಗುಡುಗು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಮುಂಗಾರು ಚುರುಕು ಪಡೆದ ಹಿನ್ನೆಲೆ ದೇಶದ ಕೆಲವು ಭಾಗಗಳಲ್ಲಿ ಮತ್ತೆ ಭಾರೀ ಮಳೆ ಮುಂದುವರೆದಿದೆ. ರಾಷ್ಟ್ರ ರಾಜಧಾನಿ ನವದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಸೋಮವಾರ ಭಾರಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಹಾಗೆಯೇ ಮುಂದಿನ 3 ದಿನಗಳ ಕಾಲ ಉತ್ತರ ಹಾಗೂ ಈಶಾನ್ಯ ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

IMD Weather Forecast Heavy rain in These states Till August 10

ರಾಷ್ಟ್ರ ರಾಜಧಾನಿ ನವದೆಹಲಿಯ ಹಲವೆಡೆ ಇಂದಿನಿಂದ ಆಗಸ್ಟ್ 7ರ ವರೆಗೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಟಡೆ ಇಂದು (ಆಗಸ್ಟ್‌ 5) ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಿಹಾರದಲ್ಲಿ ರಣಮಳೆ ಮುನ್ಸೂಚನೆ: ಬಿಹಾರದಲ್ಲಿ ಮುಂಗಾರು ಚುರುಕು ಪಡೆದಿದ್ದು, ಇಲ್ಲಿನ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಅದರಲ್ಲೂ ಪೂರ್ಣಿಯಾ, ದರ್ಭಂಗಾ, ಸೀತಾಮರ್ಹಿ, ಪಶ್ಚಿಮ ಚಂಪಾರಣ್ ಮತ್ತು ಸಮಷ್ಟಿಪುರ ಜಿಲ್ಲೆಗಳಲ್ಲಿ ರಣಭೀಕರ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಹಿಮಾಚಲ ಪ್ರದೇಶದಲ್ಲಿ ಕಳೆದ ತಿಗಳಿನಿಂದ ಮುಂಗಾರು ಮಳೆ ಆರ್ಭಟಿಸುತ್ತಿರುವ ಪರಿಣಾಮ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಇಲ್ಲಿನ ಜನಜೀವನ ಅಸ್ತವ್ಯಸ್ಥವಾದ ಘಟನೆ ನಡೆದಿದೆ. ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 400ಕ್ಕೂ ಹೆಚ್ಚು ರಸ್ತೆಗಳು ಮುಚ್ಚಲ್ಪಟ್ಟಿದ್ದು, ವಾಹ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ, ಆಗಸ್ಟ್ 5ರಂದು ಹಿಮಾಚಲ ಪ್ರದೇಶದ ಕಾಂಡ, ಕುಲ್ಲು, ಮಂಡಿ, ಸಿರ್ಮೌರ್ ಮತ್ತು ಶಿಮ್ಲಾ ಜಿಲ್ಲೆಗಳಲ್ಲಿ ಭಾರಿ ಸುರಿಯುವ ಸಾಧ್ಯತೆಯಿದೆ. ಇನ್ನು ಅರುಣಾಚಲ ಪ್ರದೇಶದಲ್ಲಿ ಆಗಸ್ಟ್ 7ರಿಂದ 10ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಪಾಸಿಘಾಟ್, ಇಟಾನಗರ ಮತ್ತು ತವಾಂಗ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.

ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ದಕ್ಷಿಣದ ಹಲವು ರಾಜ್ಯಗಳಲ್ಲಿಯೂ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಆಗಸ್ಟ್ 5 ಮತ್ತು 6ರಂದು ಕೇರಳ ಮತ್ತು ತಮಿಳುನಾಡಿನ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರವಾಹದ ಪರಿಸ್ಥಿತಿ ನಿರ್ಮಾಣ: ಇನ್ನು ಉತ್ತರದಿಂದ ಈಶಾನ್ಯ ಭಾರತದವರೆಗೆ ಮುಂಗಾರು ಸಕ್ರಿಯವಾಗಿದೆ. ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಈಗಾಗಲೇ ಭಾರೀ ಮಳೆಯಿಂದ ಪ್ರವಾಹದಂತಹ ಪರಿಸ್ಥಿತಿ ಎದುರಿಸುತ್ತಿವೆ. ಅಲ್ಲದೆ, ಭಾರೀ ಮಳೆಯಿಂದಾಗಿ ಈ ಭಾಗಗಳ ಜನಜೀವನ ಅಸ್ತವ್ಯಸ್ಥವಾದ ಘಟನೆಗಳು ನಡೆದಿವೆ. ಇನ್ನು ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.

ದಾಖಲೆ ಮಳೆ: ಖಾಸಗಿ ಹವಾಮಾನ ಸಂಸ್ಥೆಯೊಂದರ ಪ್ರಕಾರ, ಈ ವರ್ಷ ಭಾರತದಲ್ಲಿ 12 ವರ್ಷಗಳಲ್ಲಿ ಮೊದಲ ಬಾರಿಗೆ ಸತತ ಎರಡು ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಿದೆ. ಜೂನ್‌ನಲ್ಲಿ ಮಳೆ ಸಾಮಾನ್ಯಕ್ಕಿಂತ ಶೇಕಡ 9ರಷ್ಟು ಹೆಚ್ಚಾಗಿತ್ತು, ಜುಲೈನಲ್ಲಿ ಇದು ಸರಾಸರಿಗಿಂತ ಶೇಕಡ 5ರಷ್ಟು ಹೆಚ್ಚಾಗಿದೆ ಎಂದು ವರದಿ ಆಗಿದೆ. ಇನ್ನು ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇನ್ನೂ ಏನೆಲ್ಲಾ ಅನಾಹುತಗಳು ಕಾದಿವೆಯೋ ಎನ್ನುವ ಆತಂಕದಲ್ಲಿ ಜನರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+