IMD Weather Forecast: ಈ ಭಾಗಗಳಲ್ಲಿ ಆಗಸ್ಟ್‌ 26ರ ವರೆಗೂ ಸುನಾಮಿ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಚುರುಕು ಪಡೆದಿದೆ. ಭಾರೀ ಮಳೆ ಪರಿಣಾಮ ಹಲವೆಡೆ ಸುನಾಮಿ ವಾತಾವರಣ ಸೃಷ್ಟಿಯಾಗಿ ಜನರು ಮನೆ-ಮಠಗಳನ್ನು ಕಳೆದುಕೊಂಡು ಬೀದಿಗೆ ಬಂದಿರುವ ಘಟನೆಗಳು ನಡೆದಿವೆ. ಹಾಗೆಯೇ ಮುಂದಿನ ಒಂದು ವಾರ ಈ ಭಾಗಗಳಲ್ಲಿ ರಣಭೀಕರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಭಾರತೀಯ ಹವಾಮಾನ ಮುಂಜಾಗ್ರತಾ ಕ್ರಮವಾಗಿ ಹಲವು ರಾಜ್ಯಗಳ ಕೆಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದರೆ, ಇನ್ನೂ ಕೆಲವು ಭಾಗಗಳಿಗೆ ಆರೆಂಜ್ ಅಲರ್ಟ್‌ ಘೋಷಿಸಿದೆ. ಭಾರೀ ಮಳೆ ಮುನ್ಸೂಚನೆ ಹುನ್ನೆಲೆ ಇಂದು (ಆಗಸ್ಟ್‌ 21) ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಿಜೋರಾಂ, ಅರುಣಾಚಲ ಪ್ರದೇಶ, ಮಣಿಪುರ ಸೇರಿದಂತೆ ಮಹಾರಾಷ್ಟ್ರದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

IMD Weather Forecast Heavy rain in These states till August 26

ಒಂದು ವಾರ ಭಾರೀ ಮಳೆ: ಮಧ್ಯಪ್ರದೇಶ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪೂರ್ವ ರಾಜಸ್ಥಾನ ಮತ್ತು ಬಿಹಾರದಲ್ಲಿ ಮುಂದಿನ ಒಂದು ವಾರ ರಣಬೀಕರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 5 ದಿನ ರಣಮಳೆ ಎಚ್ಚರಿಕೆ: ಆಗಸ್ಟ್ 26ರ ವರೆಗೆ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ, ವಿದರ್ಭ, ಕರಾವಳಿ ಕರ್ನಾಟಕ ಹಾಗೂ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರೆಡ್‌, ಆರೆಂಜ್‌ ಅಲರ್ಟ್‌ ಘೋಷಣೆ: ಕಳೆದ ಕೆಲ ದಿನಗಳಿಂದ ಗುಜರಾತ್‌ನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಬುಧವಾರ ಸೌರಾಷ್ಟ್ರ, ಕಚ್ ಮತ್ತು ದಕ್ಷಿಣ ಗುಜರಾತ್‌ನಲ್ಲಿ ಸಾಧಾರಣ ಭಾರೀ ಮಳೆಯಾಗಿದೆ. ಇನ್ನು ಇಂದು ಇಂದಿನ ಸೌರಾಷ್ಟ್ರದ ಹಲವೆಡೆ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಭಾರೀ ಮಳೆ ಹಿನ್ನೆಲೆ ದ್ವಾರಕಾ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಬನಸ್ಕಾಂತ, ಪಠಾಣ್, ನವಸಾರಿ, ವಲ್ಸಾದ್, ರಾಜ್‌ಕೋಟ್, ಜಾಮ್‌ನಗರ, ಪೋರಬಂದರ್, ಜುನಾಗಢ್, ಮೊರ್ಬಿ, ಕಚ್‌ ಈ ಜಿಲ್ಲೆಗಳಿಗೆ ಆರೆಂಟ್‌ ಅಲರ್ಟ್ ಘೋಷಣೆ ಮಾಡಿದೆ.

ರಾಷ್ಟ್ರ ರಾಜಧಾನಿ ಹವಾಮಾನದ ವಿವರ: ನವದೆಹಲಿಯಲ್ಲಿ ಮಧ್ಯಾಹ್ನದ ವೇಳೆಗೆ ಕೆಲವು ಭಾಗಗಳಲ್ಲಿ ಹಗುರದಿಂದ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕನಿಷ್ಠ ತಾಪಮಾನ ಸುಮಾರು 23 ರಿಂದ25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ ತಾಪಮಾನ 34 ರಿಂದ 36 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಭಾತತೀಯ ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಭಾರೀ ಮಳೆ ಹಿನ್ನೆಲೆ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆ ನದಿಪಾತ್ರದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ.

ಉತ್ತರಾಖಂಡದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರಕಾಶಿ, ರುದ್ರಪ್ರಯಾಗ, ಚಮೋಲಿ, ಬಾಗೇಶ್ವರ, ನೈನಿತಾಲ್ ಮತ್ತು ಪಿಥೋರಗಢ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಮುಂದಿನ ಏಳು ದಿನಗಳ ಕಾಲ ಉತ್ತರಾಖಂಡದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇದೇ ವೇಳೆ ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಉತ್ತರಾಖಂಡ್ ಮತ್ತು ರಾಜಸ್ಥಾನದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ ಮತ್ತು ಅರುಣಾಚಲ ಪ್ರದೇಶದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಮಹಾರಾಷ್ಟ್ರದ ಮುಂಬೈನಲ್ಲಿ ಭಾರೀ ಮಳೆಯಾಗಿದ್ದು, ಇಲ್ಲಿ ಪ್ರವಾಹದ ವಾತಾವರಣ ನಿರ್ಮಾಣವಾಗಿದೆ. ಅಲ್ಲದೆ, ಈಗಾಗಲೇ ಇಲ್ಲಿನ ಹಲವೆಡೆ ಜನರು ಮನೆ-ಮಠಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಜೊತೆಗೆ ಹಲವರು ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+